ಶಾಹಡ್‌  ಶ್ರೀ ಮೂಕಾಂಬಿಕಾ ದೇವಿ ದೇಗುಲ: 56ನೇ ವಾರ್ಷಿಕ ಮಹಾಪೂಜೆ

Team Udayavani, Apr 28, 2018, 9:32 AM IST

2504mum04.jpg

ಕಲ್ಯಾಣ್‌: ಶಾಹಡ್‌ ಬಿರ್ಲಾಗೇಟ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ 56ನೇ ವಾರ್ಷಿಕ ಮಹಾಪೂಜೆಯು ಎ. 12ರಂದು ಪ್ರಾರಂಭಗೊಂಡು ಎ. 20ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಶಂಕರನಾರಾಯಣ ತಂತ್ರಿಗಳ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಪರಿಸರದ ವಿವಿಧ ಭಜನ ಮಂಡಳಿಗಳಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ಎ. 21 ರಂದು ಸಾಮೂಹಿಕ ಚಂಡಿಕಾ ಯಾಗ, ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ದಂಪತಿಪೂಜೆ ನಡೆಯಿತು.

ದೇವಸ್ಥಾನದ ಉಪಾಧ್ಯಕ್ಷ ರಾಜೇಶ್‌ ಶೆಟ್ಟಿ, ಪವನ್‌ ಶೆಟ್ಟಿ, ಕರುಣಾಕರ ಶೆಟ್ಟಿ ದಂಪತಿಗಳಿಂದ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ರಾತ್ರಿ ಕುಂಕುಮಾರ್ಚನೆ, ಮಹಾ ಪೂಜೆ, ಉತ್ಸವ ಬಲಿ, ಶೋಭಾಯಾತ್ರೆ, ಕಟ್ಟೆಪೂಜೆ, ಮಹಾಪ್ರಸಾದ ವಿತರಣೆ ನೆರವೇರಿತು. 

ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀ ದುರ್ಗಾ ಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾ ಮಿತ್ರ ಮಂಡಳಿ ಸಾಕಿನಾಕಾ ಕಲಾವಿದರುಗಳಿಂದ ಬಪ್ಪನಾಡು ಕ್ಷೇತ್ರ ಮಹಾತೆ¾ ಯಕ್ಷಗಾನ ಬಯಲಾಟವು ಸ್ವಾತಿ ವಿಶಾಲ್‌ ಶಾಂತಾ ಇವರ ಪ್ರಾಯೋಜಕತ್ವದಲ್ಲಿ  ಪ್ರದರ್ಶನಗೊಂಡಿತು.  ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಮಂದಿರದ ವತಿಯಿಂದ ಗೌರವಿಸಲಾಯಿತು.

ಮಂದಿರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಚಂದ್ರಕಾಂತ್‌ ಶೆಟ್ಟಿ, ಉಪಾಧ್ಯಕ್ಷ ರಾಜೇಶ್‌ ಜೆ. ಶೆಟ್ಟಿ, ಗೌರವ ಕಾರ್ಯದರ್ಶಿ ಜಗದೀಶ್‌ ಬೆಳಂಜೆ, ಕೋಶಾಧಿಕಾರಿ ಯುವರಾಜ್‌ ಪೂಜಾರಿ, ಯುವ ವಿಭಾಗದ ಕಾರ್ಯಾಧ್ಯಕ್ಷ ದೀಪಕ್‌ ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ ಪಿ. ಶೆಟ್ಟಿ, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ  ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

ಶಂಕರ ನಾರಾಯಣ ತಂತ್ರಿ, ಮಾಜಿ ಅಧ್ಯಕ್ಷ  ಕೃಷ್ಣ ಪೂಜಾರಿ ದಂಪತಿ, ಚಂದ್ರಹಾಸ ಶೆಟ್ಟಿ, ಮೋನಪ್ಪ ಪೂಜಾರಿ ದಂಪತಿ, ಮುದ್ದು ಕೋಟ್ಯಾನ್‌ ದಂಪತಿ, ಲೋಕು ಮೂಲ್ಯ ಇವರನ್ನು ಸಮ್ಮಾನಿಸಲಾಯಿತು. ದಾನಿಗಳನ್ನು, ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಹಾಗೂ ಕು| ಕೃಪಾ ನಾಯಕ್‌ ಮತ್ತು ಕು| ಸಾನ್ಯಶ್ರೀ ಸುವರ್ಣ ಇವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.