ಒಡೆಯರ ಕಾಲದಲ್ಲೇ ಶೇ.50 ಮೀಸಲಾತಿ
Team Udayavani, Apr 28, 2018, 12:44 PM IST
ಮೈಸೂರು: ಇತ್ತೀಚಿಗೆ ಕಾನೂನು ರೂಪಿಸುವ ಸ್ಥಳದಲ್ಲಿ ಮನುವಾದಿಗಳು ಕುಳಿತಿರುವುದರಿಂದ ತಮಗೆ ಬೇಕಾದ ರೀತಿಯಲ್ಲಿ ಕಾನೂನುಗಳನ್ನು ಬದಲಿಸುವ ಕೆಲಸ ಮಾಡುತ್ತಿರುವ ಮನುವಾದಿಗಳಿಂದ ದೇಶವನ್ನು ರಕ್ಷಿಸಬೇಕಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಿಚಾರವಾದಿ ಡಾ. ಶಿವಕುಮಾರ್ ಹೇಳಿದರು.
ಕೃಷ್ಣಮೂರ್ತಿಪುರಂ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ನಗರದ ಶಾರದಾ ವಿಲಾಸ ವಿದ್ಯಾಸಂಸ್ಥೆಗಳು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 125ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ಮಹನೀಯರ ಹೋರಾಟದ ಫಲವಾಗಿ ಸಂವಿಧಾನದ ಆಶಯಗಳಡಿ ಆಡಳಿತದಲ್ಲಿ ಎಲ್ಲಾ ವರ್ಗದ ಜನರಿಗೆ ನೀಡಿರುವ ಪ್ರಾತಿನಿದ್ಯ ಕಸಿದುಕೊಳ್ಳಲಾಗುತ್ತಿದೆ. ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬದಲಾಯಿಸುವುದರ ಪರಿಣಾಮ ಶಿಕ್ಷಣ ದುಬಾರಿಯಾಗುತ್ತಿದೆ.
ಇದೇ ರೀತಿಯಲ್ಲಿ ಮುಂದುವರಿದರೆ ಮುಂದೆ ಕೇವಲ ಉಳ್ಳವರು ಮಾತ್ರ ಉನ್ನತ ಶಿಕ್ಷಣ ಪಡೆಯುವಂತಾಗಲಿದೆ ಎಂದು ಹೇಳಿದರು. ಖಾಸಗೀಕರಣ, ಜಾಗತೀಕರಣ, ಉದಾರೀಕರಣದ ಪರಿಣಾಮ ಇಂದು ಮಿಲಿಟರಿ ಹೊರತುಪಡಿಸಿ ಎಲ್ಲಾ ಸರ್ಕಾರಿ ಇಲಾಖೆಗಳು ಖಾಸಗೀಕರಣಗೊಳ್ಳುತ್ತಿವೆ. ಇದನ್ನು ಪ್ರಜಾಪ್ರಭುತ್ವ ಎಂದು ಕರೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಕೊಡುಗೆ ಅಪಾರ: ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸ್ವಾತಂತ್ರ, ಪ್ರಜಾಪ್ರಭುತ್ವ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ. ನಾಲ್ವಡಿ ಕೃಷ್ಣರಾಜ ಒಡೆಯರ್ ಸೇರಿದಂತೆ ಮೈಸೂರು ಅರಸರು, ದಿವಾನರಾದ ಶೇಷಾದ್ರಿ ಅಯ್ಯರ್, ಡಾ.ಆರ್.ಸಿ.ರೆಡ್ಡಿ ಸೇರಿದಂತೆ ಅನೇಕರು ದಲಿತರಿಗೆ,
ಹಿಂದುಳಿದವರ ಏಳಿಗೆಗೆ ಶೇ.50 ಮೀಸಲಾತಿ ಒದಗಿಸುವ ಕೆಲಸ ಮಾಡಿದ್ದಾರೆ. ಬ್ರಿಟಿಷರು ದೇಶ ಬಿಟ್ಟು ಹೋದ ಬಳಿಕ ಶಿಕ್ಷಣ ಪಡೆದ ಬ್ರಾಹ್ಮಣರು, ಕ್ಷತ್ರಿಯರು ಮಾತ್ರ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿದ್ದರು. ಆದರೆ ಆಡಳಿತದಲ್ಲಿ ಎಲ್ಲಾ ವರ್ಗದವರು ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಮೈಸೂರು ಸಂಸ್ಥಾನ ಮೀಸಲಾತಿ ಮೂಲಕ ಎಲ್ಲರಿಗೂ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರಯ್ಯ, ಶಾರದಾ ವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಗೌರವ ಕಾರ್ಯದರ್ಶಿ ಎಚ್.ಕೆ.ಶ್ರೀನಾಥ್ ಹಾಜರಿದ್ದರು.
ಮೈಸೂರು ಸಂಸ್ಥಾನದಲ್ಲಿ ಅಂಬೇಡ್ಕರ್ ಆಶಯಗಳಂತೆ ಸಂವಿಧಾನ ರಚನೆಗೂ ಮುನ್ನವೇ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ತಜ್ಞರ ಸಮಿತಿ ರಚಿಸಲಾಗಿದೆ. ಶಿಕ್ಷಣ, ಉದ್ಯೋಗ, ಸಮಾನತೆ ದೊರಕಿಸಿಕೊಡುವಲ್ಲಿ ಶ್ರಮಿಸಿದೆ.
-ಯದುವೀರ್ ಒಡೆಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.