ದಕ್ಷತೆ, ಶಿಸ್ತು ಪಾಲನೆ -ಗೃಹರಕ್ಷಕರಿಗೆ ತರಬೇತಿ ಅಗತ್ಯ
Team Udayavani, Apr 29, 2018, 7:40 AM IST
ಉಡುಪಿ: ಕರ್ತವ್ಯ ಪಾಲನೆಯಲ್ಲಿ ದಕ್ಷತೆ ಹಾಗೂ ಶಿಸ್ತು ಪಾಲನೆ ಗೃಹರಕ್ಷಕರಲ್ಲಿ ರೂಢಿಯಾಗಿ ಬರಬೇಕು ಎಂದಾದರೆ ಅವರಿಗೆ ಸರಿಯಾದ ತರಬೇತಿಯ ಅವಶ್ಯಕತೆ ಇದೆ. ಸೇವಾ ಮನೋಭಾವದ ಜೊತೆಯಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಹೊಂದಿರುವ ಗೃಹರಕ್ಷಕರ ಸೇವೆ ಅತ್ಯಂತ ಸ್ಮರಣೀಯ ಎಂದು ಡಿಡಿಪಿಐ ಶೇಷಶಯನ ಕೆ. ಹೇಳಿದರು.
ಜಿಲ್ಲಾ ಗೃಹರಕ್ಷಕರ ಕಚೇರಿಯಲ್ಲಿ ಎ. 28ರಂದು ನಡೆದ ಗೃಹರಕ್ಷಕರ ಮೂಲ ವಾರ್ಷಿಕ ತರಬೇತಿ ಶಿಬಿರವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.
ಕರ್ತವ್ಯ ಬದ್ಧತೆ ಅಗತ್ಯ
ಅಧ್ಯಕ್ಷತೆ ವಹಿಸಿದ್ದ ಗೃಹರಕ್ಷಕದಳ ಜಿಲ್ಲಾ ಕಮಾಂಡೆಂಟ್ ಡಾ| ಪ್ರಶಾಂತ್ ಶೆಟ್ಟಿ ಅವರು ಮಾತನಾಡಿ, ಸರಕಾರದ ವಿವಿಧ ಇಲಾಖೆಗಳೊಂದಿಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಲ್ಲಿ ಕರ್ತವ್ಯ ಬದ್ಧತೆ ಹಾಗೂ ಶಿಸ್ತು ಶಾಶ್ವತವಾಗಿ ಇರಬೇಕು. ಈ ಹಿನ್ನೆಲೆಯಲ್ಲಿ ಸರಕಾರದಿಂದ ಆಯೋಜಿಸಿರುವ ತರಬೇತಿ ಶಿಬಿರದ ಪ್ರಯೋಜನ ಪ್ರತಿ ಯೊಬ್ಬ ಶಿಬಿರಾರ್ಥಿಯೂ ಪಡೆದುಕೊಳ್ಳಬೇಕು ಎಂದರು.
ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ ಎಸ್. ನಾಯಕ್, ಜಿಲ್ಲಾ ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ., ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ, ಕ್ಯಾಂಪ್ ಕಮಾಂಡ್ ಸ್ಟೀವನ್ ಪ್ರಕಾಶ್, ಘಟಕಾಧಿಕಾರಿಗಳಾದ ಸರಸ್ವತಿ ಮಣಿಪಾಲ, ಕುಮಾರ ಉಡುಪಿ ಹಾಗೂ ಲಕ್ಷ್ಮೀನಾರಾಯಣ ಕಾಪು ಉಪಸ್ಥಿತರಿದ್ದರು. ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿದರು. ಸಾಯಿನಾಥ ಉದ್ಯಾವರ ನಿರೂಪಿಸಿದರು. ಜಿಲ್ಲಾ ಸೆಕಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ. ಕುಂದಾಪುರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.