2ನೇ ಯತ್ನ; 2ನೇ ರ್ಯಾಂಕ್
Team Udayavani, Apr 29, 2018, 6:00 AM IST
ಹೊಸದಿಲ್ಲಿ: ಪತಿ, ಕುಟುಂಬದ ಯೋಗಕ್ಷೇಮ, ಮಗುವಿನ ಲಾಲನೆ ಪಾಲನೆಯ ಜವಾಬ್ದಾರಿ ಹೆಗಲಿಗೇರಿರುವಾಗ ಕನಸುಗಳನ್ನೆಲ್ಲ ಈಡೇರಿಸಿಕೊಳ್ಳಲು ಸಾಧ್ಯವೇ ಎಂದು ಮೂದಲಿಸುವವರಿಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್ ಗಳಿಸಿರುವ ಅನು ಕುಮಾರಿ ಸ್ಫೂರ್ತಿಯ ಚಿಲುಮೆಯಾಗುವುದರಲ್ಲಿ ಸಂದೇಹವಿಲ್ಲ.
ಏಕೆಂದರೆ, ಯುಪಿಎಸ್ಸಿಯಲ್ಲಿ 2ನೇ ರ್ಯಾಂಕ್ ಪಡೆದಿರುವ ಹರ್ಯಾಣದ ಅನುಕುಮಾರಿ ಕೂಡ 4 ವರ್ಷದ ಗಂಡು ಮಗುವಿನ ತಾಯಿ. 31 ವರ್ಷದ ಅನುಕುಮಾರಿ ತಮ್ಮ 2ನೇ ಮತ್ತು ಕೊನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ, ರ್ಯಾಂಗ್ ಗಳಿಸಿದ್ದಾರೆ. ದೆಹಲಿ ವಿವಿಯ ಹಿಂದೂ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಪದವಿ ಪಡೆದು, ಐಎಂಟಿ ನಾಗ್ಪುರದಲ್ಲಿ ಎಂಬಿಎ ಮುಗಿಸಿರುವ ಅನುಕುಮಾರಿ ತನ್ನ ಕನಸಿನ ಬೆನ್ನು ಹತ್ತುವ ಮೊದಲು 9 ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
“ನನ್ನ ಉದ್ಯೋಗ ಚೆನ್ನಾಗಿತ್ತು. ಆದರೆ, ಆಂತರಿಕ ತೃಪ್ತಿ ಎಂಬುದಿರಲಿಲ್ಲ. ಬದುಕು ಯಾಂತ್ರಿಕವಾಗಿ ಸಾಗುತ್ತಿದೆ ಎಂದೆನಿಸಿದಾಗ, ಕೆಲಸ ಬಿಟ್ಟು ಯುಪಿಎಸ್ಸಿ ಪರೀಕ್ಷೆ ಬರೆಯಲು ನಿರ್ಧರಿಸಿದೆ. 2 ವರ್ಷಗಳ ಹಿಂದೆ ಕೆಲಸ ತೊರೆದು, 2 ತಿಂಗಳು ಅಭ್ಯಾಸ ಮಾಡಿ ಪರೀಕ್ಷೆ ಬರೆದೆ. ಪ್ರಯೋಜನವಾಗಲಿಲ್ಲ. ಅದಕ್ಕೆ ಮತ್ತೆ ಪ್ರಯತ್ನಿಸಿದೆ. ಯಾವುದೇ ಕೋಚಿಂಗ್ ಕೂಡ ಪಡೆಯದೇ, ಈ ಬಾರಿ 2ನೇ ರ್ಯಾಂಕ್ ಪಡೆಯುವಲ್ಲಿ ಯಶಸ್ವಿಯಾಗಿದ್ದು ನಿಜಕ್ಕೂ ಹೆಮ್ಮೆ ಎನಿಸುತ್ತಿದೆ’ ಎನ್ನುತ್ತಾರೆ ಅನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.