ಸಿಎಂ ಹುದ್ದೆಗೆ ಅನುಭವ ಮುಖ್ಯ,ವಯಸ್ಸಲ್ಲ: ಸ್ಮೃತಿ
Team Udayavani, Apr 29, 2018, 6:15 AM IST
ಬೆಳಗಾವಿ: ದೇಶದ ಬಹುತೇಕ ಕಡೆ ಯುವಕರು ಬಿಜೆಪಿ ಪರವಾಗಿದ್ದಾರೆ. ಬಿಜೆಪಿ ಯುವಕರ ಪಕ್ಷ ಎಂಬ ಮಾತುಗಳು ಎಲ್ಲ ಕಡೆ ಕೇಳಿ ಬರುತ್ತಿವೆ. ಹೀಗಿರುವಾಗ ಕರ್ನಾಟಕದಲ್ಲಿ ವಯಸ್ಸಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದು ಏಕೆ..?
ಇಂತಹ ಒಂದು ಪ್ರಶ್ನೆ ಯುವತಿಯಿಂದ ತೂರಿ ಬಂದಾಗ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಒಂದು ಕ್ಷಣ ದಂಗಾದರು. ಉತ್ತರಕ್ಕೆ ಒಂದು ಕ್ಷಣ ಯೋಚನೆ ಮಾಡಿದರು. ಇದು ನಡೆದಿದ್ದು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ. ಬಿಜೆಪಿ ಶನಿವಾರ ಆಯೋಜಿಸಿದ್ದ ಕರುನಾಡ ಮಹಿಳಾ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ಈ ಪ್ರಶ್ನೆ ಎದುರಾದಾಗ ಸಮಯೋಚಿತ ಉತ್ತರ ನೀಡಿದ ಸ್ಮೃತಿ ಇರಾನಿ,ಮುಖ್ಯಮಂತ್ರಿ ಆಗಲು ವಯಸ್ಸು ಮುಖ್ಯವಲ್ಲ. ಅನುಭವ ಬೇಕು ಎಂದು ಯಡಿಯೂರಪ್ಪ ಅವರನ್ನು ಸಮರ್ಥಿಸಿಕೊಂಡರು.
ಉತ್ತರಪ್ರದೇಶದಲ್ಲಿ ಯುವ ನಾಯಕ ಅಖೀಲೇಶ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಆದರೆ, ಅವರಿಂದ ಅಭಿವೃದಿಟಛಿ ಕೆಲಸ ಆಗಲೇ ಇಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸ ಮಾಡಿದರು. ಹೀಗಾಗಿ, ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲಾಯಿತು. ಇಲ್ಲಿ ಅನುಭವ ಬೇಕು. ವಯಸ್ಸಲ್ಲ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರ ನೀಡುವಾಗ ಸ್ಮೃತಿ ಇರಾನಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಹೋದ ಮೇಲೆ ಎಲ್ಲವೂ ಸರಿ ಹೋಗುತ್ತದೆ. ಜನರು ನಿರಾಳವಾಗಲಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಡಾ.ನಿರಂಜನಾ ಮಹಾಂತಶೆಟ್ಟಿ, ಸರಿತಾ ನಾಯ್ಕ, ಆಶಾ ರಜಪೂತ, ಅನ್ವರಾ ಬಾನು ಪಠಾಣ, ಕಸ್ತೂರಿ ಹಾಗೂ ರೂಪಾ ಶೆಟ್ಟರ ಅವರನ್ನು ಸಚಿವೆ ಸ್ಮೃತಿ ಇರಾನಿ ಸನ್ಮಾನಿಸಿ ಗೌರವಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.