ನೈತಿಕ ಪೊಲೀಸ್ಗಿರಿಗೂ ಬಿಜೆಪಿಗೂ ಸಂಬಂಧವಿಲ್ಲ
Team Udayavani, Apr 29, 2018, 11:49 AM IST
ಬೆಂಗಳೂರು: ಬಿಜೆಪಿ, ಆರ್ಎಸ್ಎಸ್ ನೈತಿಕ ಪೊಲೀಸ್ಗಿರಿ ಮಾಡುತ್ತಿಲ್ಲ. ಪಕ್ಷ ಹಾಗೂ ಆರ್ಎಸ್ಎಸ್ನ ಹೆಸರಿಗೆ ಕಳಂಕ ತರಲು ಈ ರೀತಿಯ ಆರೋಪ ಮಾಡಲಾಗುತ್ತಿದೆ ಎಂದು ರಕ್ಷಣಾಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.
ಸಂಘಟನೆಗಳನ್ನು “ಹಿಂದು’ ಎಂಬುದಾಗಿ ಪ್ರತ್ಯೇಕವಾಗಿ ಗುರುತಿಸುವವರಿಗೆ ಸಮಾಜವನ್ನು ಒಡೆಯುವ ಉದ್ದೇಶವಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗಲೇ ನೈತಿಕ ಪೊಲೀಸ್ಗಿರಿ ನಡೆದಿತ್ತು. ಆಗ ಬಿಜೆಪಿ ಸರ್ಕಾರವೇ ಅದರ ವಿರುದ್ಧ ಕಠಿಣ ಕ್ರಮ ಕೈಗೊಂಡಿತ್ತು. ಇಂತಹ ಚಟುವಟಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಸಂಸತ್ತಿನಲ್ಲಿ “ಕಾಸ್ಟಿಂಗ್ ಕೌಚ್’ (ಆಮಿಷವೊಡ್ಡಿ ಬಲೆಗೆ ಬೀಳಿಸಿಕೊಳ್ಳುವುದು) ನಡೆಯುತ್ತಿದೆ ಎಂಬುದಾಗಿ ಕಾಂಗ್ರೆಸ್ನ ರೇಣುಕಾ ಚೌಧರಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಅವರ ಹೇಳಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಬಿಜೆಪಿಯಲ್ಲಿ “ಕಾಸ್ಟಿಂಗ್ ಕೌಚ್’ನಂತಹ ಚಟುವಟಿಕೆ ಇಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.