ಕೂಡಲ ಸಂಗಮ ಮಾದರಿಯಲ್ಲಿ ಬಸವಭವನ ನಿರ್ಮಾಣ

Team Udayavani, Apr 29, 2018, 12:39 PM IST

m2-kudala.jpg

ಮೈಸೂರು: ಪಟ್ಟಣದಲ್ಲಿ ಕೂಡಲ ಸಂಗಮದ ಮಾದರಿಯಲ್ಲಿ ಬಸವಭವನ ನಿರ್ಮಿಸಲಾಗಿದೆ ಎಂದು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಕಳಲೆ ಎನ್‌.ಕೇಶವಮೂರ್ತಿ ಹೇಳಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕ್ಷೇತ್ರ ವ್ಯಾಪ್ತಿಯ ಹುಲ್ಲಹಳ್ಳಿಯಲ್ಲಿ ಸಂಸದ ಆರ್‌.ಧ್ರುವನಾರಾಯಣ್‌ ಹಾಗೂ ನೂರಾರು ಬೆಂಬಲಿಗರು, ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಸಂಸದ ಆರ್‌.ಧ್ರುವನಾರಾಯಣ ಅವರು ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಟ್ಟಿದ್ದಾರೆ. ದೇವನೂರು ಮಠ, ಮಲ್ಲನಮೂಲೆ ಮಠ, ಸುತ್ತೂರು, ಕಂತೆ ಮಹದೇಶ್ವರ ಮಠ, ನವಿಲೂರು ಮಠ ಸೇರಿದಂತೆ ಸ್ಥಳೀಯ ನಾಲ್ಕು ಮಠಗಳಿಗೆ ಸಾಕಷ್ಟು ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ನಿವೇಶನ ಹಂಚಿಕೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಂಜನಗೂಡು ಪಟ್ಟಣದಲ್ಲಿ 150 ರಿಂದ 200 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಒಕ್ಕಲಿಗ ಸಮುದಾಯ ಭವನ, ಕನಕ ಭವನ, ವಾಲ್ಮೀಕಿ ಸಮುದಾಯ ಭವನ, ಅಂಬೇಡ್ಕರ್‌ ಭವನ, ಸಮಿತಾ ಸಮಾಜ, ಈಡಿಗ ಸಮಾಜದವರಿಗೆ ಸಮುದಾಯ ಭವನಗಳ ನಿರ್ಮಾಣಕ್ಕೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದರು.

ತಾಲೂಕಿನಾದ್ಯಂತ 10 ಶಾದಿ ಮಹಲ್‌ ನಿರ್ಮಾಣ, ಹೆಡಿಯಾಲ, ಹುಲ್ಲಹಳ್ಳಿ, ಹುರಾ ಹಾಗೂ ನಂಜನಗೂಡು ಪಟ್ಟಣದ ಲೋಕೋಪಯೋಗಿ ರಸ್ತೆಗಳನ್ನು ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಶ್ರೀಕಂಠೇಶ್ವರ ರಥೋತ್ಸವ ಸಾಗುವ ರಥಬೀದಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. 2008ರ ನಂತರ ಮೊದಲ ಬಾರಿಗೆ ಸುಣ್ಣಬಣ್ಣ ಮಾಡಿಸಲಾಗಿದೆ.

ಪಟ್ಟಣದಲ್ಲಿ ಮಿನಿ ವಿಧಾನಸೌಧ, ಕ್ಷೇತ್ರ ವ್ಯಾಪ್ತಿಯ 125 ಹಳ್ಳಿಗಳಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವ ಯೋಜನೆ, ನಂಜನಗೂಡು ಪಟ್ಟಣದಲ್ಲಿ 24*7 ಕುಡಿಯುವ ನೀರು ಯೋಜನೆ, ಒಳಚರಂಡಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಕೆರೆ ತುಂಬಿಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ನುಗು ಜಲಾಶಯಕ್ಕೆ ಏತ ನೀರಾವರಿ ಮೂಲಕ 20 ಸಾವಿರ ಎಕರೆ ಅಚ್ಚುಕಟ್ಟಿಗೆ ನೀರು ಒದಗಿಸಲು ಯೋಜನೆ ರೂಪಿಸಲಾಗುವುದು. ಇದರಿಂದ ಕುಡಿಯುವ ನೀರು ಯೋಜನೆ ಜತೆಗೆ ಈ ಭಾಗದಲ್ಲಿ ರೈತರು ಎರಡು ಬೆಳೆ ಬೆಳೆಯಲು ಅನುಕೂಲವಾಗಲಿದೆ. ಅರಸನಕೆರೆ ಗೋಮಾಳದ 300 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸುವುದರಿಂದ ಸುತ್ತಮುತ್ತಲಿನ 30-40 ಹಳ್ಳಿಗಳಲ್ಲಿ ಅಂತರ್ಜಲ ವೃದ್ಧಿಯಾಗಲಿದೆ.
-ಕಳಲೆ ಎನ್‌.ಕೇಶವಮೂರ್ತಿ, ಶಾಸಕ

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.