ಸಿದ್ದರಾಮಯ್ಯ, ಮಹದೇವಪ್ಪ ವಿರುದ್ಧ ಕಬ್ಬು ಬೆಳಗಾರರ ಆಕ್ರೋಶ
Team Udayavani, Apr 29, 2018, 12:39 PM IST
ಮೈಸೂರು: ರೈತವಿರೋಧಿ ನಿಲುವುಗಳನ್ನು ಕೈಗೊಳ್ಳುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಗನ್‌ಹೌಸ್ ಸಮೀಪದ ವಿಶ್ವಮಾನವ ಉದ್ಯಾನವನದಲ್ಲಿ ಶನಿವಾರ ನಡೆದ ಕಬ್ಬು ಬೆಳೆಗಾರರ ಸಂಘದ ಸದಸ್ಯರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯದಲ್ಲಿ 5 ವರ್ಷಗಳ ಆಡಳಿತ ನಡೆಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರೈತವಿರೋಧಿ ನಿಲುವುಗಳನ್ನು ಕೈಗೊಂಡು ರೈತರನ್ನು ಭಿಕಾರಿಗಳಾಗುವಂತೆ ಮಾಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಬಿನಿ-ಕಾವೇರಿ ಜಲಾಶಯಗಳು ಭರ್ತಿಯಾಗಿದ್ದರೂ ಅಚ್ಚುಕಟ್ಟು ಭಾಗದ ರೈತರ ಬೆಳೆಗಳಿಗೆ ನೀರು ಹರಿಸದೆ ತಮಿಳುನಾಡಿಗೆ ಹರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ಆರೋಪಿಸಲಾಯಿತು.
ಬಣ್ಣಾರಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಾತುಕತೆ ನಡೆಸಿ ಕಬ್ಬಿಗೆ ನ್ಯಾಯಯುತ ಬೆಲೆನಿಗದಿ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ. ರೈತರ ಮೇಲಿನ ಹೋರಾಟದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಹುಸಿ ಭರವಸೆಯನ್ನು ನೀಡಿದ್ದಾರೆ. ಈ ಎಲ್ಲಾ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಸಿದ್ದರಾಮಯ್ಯ ಹಾಗೂ ಎಚ್.ಸಿ.ಮಹದೇವಪ್ಪರನ್ನು ಸೋಲಿಸಲು ರೈತರು ಸ್ವಾಭಿಮಾನದಿಂದ ಪಣ ತೊಡಬೇಕೆಂದು ತೀರ್ಮಾನಿಸಿದರು.
ರೈತರ ಜಾಗೃತಿ ಜಾಥಾ: ಸಭೆಯಲ್ಲಿ ತೀರ್ಮಾನಿಸಿದಂತೆ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರನ್ನು ಸೋಲಿಸುವ ಉದ್ದೇಶದಿಂದ ಮೇ 3 ಮತ್ತು 4ರಂದು ಚಾಮುಂಡೇಶ್ವರಿ ಹಾಗೂ ತಿ.ನರಸೀಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ರೈತರನ್ನು ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು. ಅಲ್ಲದೇ, ರೈತರ ಅನುಕೂಲಕ್ಕಾಗಿ ರೂಪಿಸಿರುವ 15 ಅಂಶಗಳ ರೈತರ ಪ್ರಣಾಳಿಕೆಯನ್ನು ಒಪ್ಪಿಕೊಳ್ಳುವ ಅಭ್ಯರ್ಥಿಗೆ ಚುನಾವಣೆಯಲ್ಲಿ ಬೆಂಬಲಿಸಲು ನಿರ್ಧರಿಸಲಾಯಿತು.
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಉಪಾಧ್ಯಕ್ಷ ಕೂಡನಹಳ್ಳಿ ರಾಜಣ್ಣ, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.
ಜಿಟಿಡಿ ಭೇಟಿ, ಎಚ್‌ಡಿಕೆ ಭರವಸೆ: ಕಬ್ಬು ಬೆಳೆಗಾರರ ಸಂಘದ ಸದಸ್ಯರು ಸಭೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಮತಯಾಚನೆ ಮಾಡಿದರು.
ರೈತರ ಅನುಕೂಲಕ್ಕಾಗಿ ರೂಪಿಸಿರುವ ಪ್ರಣಾಳಿಕೆಯನ್ನು ಒಪ್ಪುವ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಸಭೆಯಲ್ಲಿದ್ದ ರೈತರು ಜಿ.ಟಿ.ದೇವೇಗೌಡರಿಗೆ ತಿಳಿಸಿದರು. ಸಭೆಯ ನಡುವೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ತಮ್ಮ ನಿಲುವು ತಿಳಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡ, ತಮ್ಮದು ರೈತಪರ ಪಕ್ಷವಾಗಿದ್ದು, ನಿಮ್ಮ ಪ್ರಣಾಳಿಕೆಯೇ ನಮ್ಮ ಪ್ರಣಾಳಿಕೆಯಾಗಿದೆ. ಅಲ್ಲದೇ ಕುಮಾರಸ್ವಾಮಿ ಅವರು ಪ್ರಣಾಳಿಕೆಯನ್ನು ಒಪ್ಪಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಹೀಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.