ಜಿಲ್ಲೇಲಿ ಹದಿನೆಂಟು ಪಿಂಕ್ ಮತಗಟ್ಟೆ
Team Udayavani, Apr 29, 2018, 4:39 PM IST
ಶಿವಮೊಗ್ಗ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ 18 ಮತಗಟ್ಟೆಗಳನ್ನು ‘ಪಿಂಕ್ ಮತಗಟ್ಟೆ’ ಗಳೆಂದು ಗುರುತಿಸಲಾಗಿದ್ದು, ಈ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎಲ್ಲಾ ಮತಗಟ್ಟೆಗಳಿಗೆ ಗುಲಾಬಿ ಬಣ್ಣ ಬಳಿಯಲಾಗಿದ್ದು, ವಿಶೇಷವಾಗಿ ಸಿಂಗರಿಸಲಾಗುವುದು. ಈ ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿ ಸೇರಿದಂತೆ ಸಂಪೂರ್ಣ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸುವರು. ಬಹುತೇಕ ಪೊಲೀಸ್ ಸಿಬ್ಬಂದಿ ಸಹ ಮಹಿಳೆಯರೇ ಆಗಿರುವುದು ಪಿಂಕ್ ಮತಗಟ್ಟೆಗಳ ವಿಶೇಷವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸುವಂತೆ ಪ್ರೇರೇಪಿಸಲು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶೇ.50 ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇರುವ ಮತ ಗಟ್ಟೆಗಳನ್ನು ಇದಕ್ಕಾಗಿ ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳೆಯರು ಮಾತ್ರವಲ್ಲದೆ ಆಯಾ ಮತಗಟ್ಟೆ ವ್ಯಾಪ್ತಿಯ ಪುರುಷ ಮತದಾರರು ಸಹ ಮತವನ್ನು ಚಲಾಯಿಸಬೇಕಾಗಿದೆ ಎಂದು ತಿಳಿಸಿದರು.
ಪಿಂಕ್ ಮತಗಟ್ಟೆಗಳ ವಿವರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾರೋಬೆನವಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂತೆಕಡೂರು.
ಭದ್ರಾವತಿ ಕ್ಷೇತ್ರ: ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಓಲ್ಡ್ ಟೌನ್, ಭದ್ರಾವತಿ, ಬಸವೇಶ್ವರ ವಿದ್ಯಾ ಸಂಸ್ಥೆ, ಜನ್ನಾಪುರ, ಸರ್ ಎಂವಿ ಆಟ್ರ್ಸಮತ್ತು ಕಾಮರ್ಸ್ ಕಾಲೇಜು ಭದ್ರಾವತಿ.
ಶಿವಮೊಗ್ಗ ಕ್ಷೇತ್ರ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೊಸಮನೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದೇಶ್ವರನಗರ, ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಅಶೋಕನಗರ, ಶಿವಮೊಗ್ಗ, ಜ್ಞಾನಪ್ರಭ ಎಜುಕೇಶನಲ್ ಇನ್ಸ್ಟಿಟ್ಯೂಟ್ ಶಿವಮೊಗ್ಗ. ತೀರ್ಥಹಳ್ಳಿ ಕ್ಷೇತ್ರ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸೀಬಿನಕೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೇಕಲ್.
ಶಿಕಾರಿಪುರ ಕ್ಷೇತ್ರ: ಜವಾಹರಲಾಲ್ ನೆಹರು ಹಿರಿಯ ಪ್ರಾಥಮಿಕ ಶಾಲೆ, ವಿನಾಯಕನಗರ, ಶ್ರೀ ಸಿದ್ಧಲಿಂಗೇಶ್ವರ ಟೌನ್ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ಶಿಕಾರಿಪುರ.
ಸೊರಬ ಕ್ಷೇತ್ರ: ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕನಕೇರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಗ್ವೆ. ಸಾಗರ ಕ್ಷೇತ್ರ: ಸಮುದಾಯ ಭವನ ಸಾಗರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲಗೇರಿ ಮಂಡ್ರಿ, ತಾಪಂ ಕಚೇರಿ ಹೊಸನಗರ.
ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಚುನಾವಣಾ ವೀಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.