ಬಸ್ ಹೈಜಾಕ್ ಪ್ರಕರಣ: ಪ್ರಮುಖ ಆರೋಪಿ ಸೆರೆ
Team Udayavani, Apr 30, 2018, 7:55 AM IST
ಬೆಂಗಳೂರು: ಸಾಲ ಮರುಪಾವತಿ ಮಾಡದ ಕಾರಣಕ್ಕೆ ಪ್ರಯಾಣಿಕರಿದ್ದ “ಲಾಮಾ ಟ್ರಾವೆಲ್ಸ್’ ಬಸ್ ಹೈಜಾಕ್ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ಚಿಕ್ಕರಂಗೇಗೌಡ (35) ಎಂಬಾತನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫುಲ್ಟ್ರಾನ್ ಇಂಡಿಯಾ ಫೈನಾನ್ಸ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿಕ್ಕರಂಗೇಗೌಡನೇ ಬಸ್ ಅಪಹರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಈತನ ಸೂಚನೆ ಮೇಲೆ ಇತರರು ಬಸ್ ಹೈಜಾಕ್ ಮಾಡಿದ್ದರೆಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಹೊರಟಿದ್ದ ಲಾಮಾ ಟ್ರಾವೆಲ್ಸ್‌ಗೆ ಸೇರಿದ ಬಸ್‌ನ್ನು ಅಡ್ಡಗಟ್ಟಿ ಅಪಹರಿಸುವಂತೆ ಚಿಕ್ಕರಂಗೇಗೌಡ ಸೂಚಿಸಿದ್ದ. ಅದರಂತೆ ಚಿಕ್ಕರಂಗೇಗೌಡ ಮತ್ತಿತರರು ಬಸ್ ಅಡ್ಡಗಟ್ಟಿ ಪ್ರಯಾಣಿಕರ ಸಮೇತ ಅದನ್ನು ಗೋದಾಮು ಒಂದಕ್ಕೆ ಕೊಂಡೊಯ್ದಿದ್ದರು. ನಂತರ ಚಿಕ್ಕರಂಗೇಗೌಡ ಅಲ್ಲಿಂದ ತೆರಳಿದ್ದ. ಪ್ರಕರಣದ ಇತರ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ, ಕುಟುಂಬದ ಜತೆ ತುಮಕೂರು ಕಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ.
ಪ್ರಕರಣದ ತನಿಖೆ ಮುಂದುವರಿಸಲಾಗಿದ್ದು, ಇನ್ನೂ ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಅಲ್ಲದೆ, ಬಸ್ ಅಪಹರಣಕ್ಕೆ ಕಾರಣವಾದ ಇನ್ನೂ ಹಲವರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ. ಡಿ ಚೆನ್ನಣ್ಣನವರ್ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಹೊರಟ್ಟಿದ್ದ ಖಾಸಗಿ ಬಸ್‌ನ್ನು ಪ್ರಯಾಣಿಕರ ಸಮೇತ ದುಷ್ಕರ್ಮಿಗಳು ಹೈಜಾಕ್ ಮಾಡಿ ಗೋದಾಮು ಒಂದರಲ್ಲಿ ನಿಲ್ಲಿಸಿದ್ದರು. ಈ ಕುರಿತು ಪೊಲೀಸರು ವಿಚಾರಣೆ ನಡೆಸಿದಾಗ ಸಾಲ ಮರುಪಾವತಿ ಮಾಡದಕ್ಕೆ ಫೈನಾನ್ಸ್ ಕಂಪನಿಯೊಂದರ ಸೂಚನೆ ಮೇಲೆ ಬಸ್ ಹೈಜಾಕ್ ಮಾಡಿದ್ದು ಗೊತ್ತಾಗಿತ್ತು.
ಆರೋಪಿಗಳು ಆ ಫೈನಾನ್ಸ್ ಕಂಪೆನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಾಲ ವಸೂಲಾತಿ ಕಾರ್ಯದಲ್ಲಿ ತೊಡಗಿದ್ದರು. ಬಸ್ ಖರೀದಿಗೆ ಮಾಡಿದ್ದ ಸಾಲ ಹಿಂತಿರುಗಿಸದ ಬಸ್ ವಶಕ್ಕೆ ಪಡೆಯುವಂತೆ ಫೈನಾನ್ಸ್ ಕಂಪೆನಿ ಸೂಚಿಸಿದ್ದ ಹಿನ್ನೆಲೆಯಲ್ಲಿ ತಾವು ಈ ರೀತಿ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.