ಧರ್ಮ-ಜಾತಿ ಎರಡೂ ಬೇರೆ


Team Udayavani, Apr 30, 2018, 10:17 AM IST

dav-4.jpg

ಹರಪನಹಳ್ಳಿ: ರಾಜಕೀಯ ನಾಯಕರು ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಭಗವಂತ ಸೃಷ್ಟಿಸಿರುವುದು ಮನುಷ್ಯ ಜಾತಿ ಮಾತ್ರ. ಧರ್ಮ ಮತ್ತು ಜಾತಿ ಎರಡೂ ಬೇರೆಯಾಗಿದ್ದು, ಧರ್ಮ ಮಾನವರನ್ನು ಒಗ್ಗೂಡಿಸುತ್ತದೆ, ಜಾತಿ ವಿಂಗಡಿಸುತ್ತದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದರು. ತಾಲೂಕಿನ ಎಂ.ಬಾವಿಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಹಾಗೂ ಪತ್ರಿ ಬಸವೇಶ್ವರ ಸ್ವಾಮಿಯ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕಾರಣ ಸಮಾಜವನ್ನು ಕಲುಷಿತಗೊಳಿಸಿದ್ದು, ಚುನಾವಣೆ ಸಂದರ್ಭದಲ್ಲಿ ಜಾತಿಗಳು ಬಯಲಿಗೆ ಬರುತ್ತವೆ. ರಾಜಕಾರಣಿಗಳು ನೀತಿಯನ್ನು ಬಂಡವಾಳ ಮಾಡುವ ಬದಲು ಜಾತಿಯನ್ನು ಬಂಡವಾಳನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಇಂದು ರಾಜಕಾರಣಿಗಳನ್ನು ಭ್ರಷ್ಟರನ್ನಾಗಿ ಮಾಡಿರುವುದು ಮತದಾರರು. ಹಾಗಾಗಿ ಮತದಾರರು ಮಹಾ ಭ್ರಷ್ಟರಾಗಿದ್ದಾರೆ ಎಂದು ಹೇಳಿದರು.

ಮತದಾರರು ತೆಗೆದುಕೊಳ್ಳುವ ಹಣ 5 ವರ್ಷಕ್ಕೆ ಲೆಕ್ಕ ಹಾಕಿದಾಗ ಭಿಕ್ಷುಕರಿಗಿಂತಲೂ ಕಡೆಯಾಗಿರುತ್ತದೆ. ಅಲ್ಲದೇ ತಾಯಂದಿರು ಕೂಡ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಇನ್ಯಾರೋ ತಂದು ಕೊಟ್ಟ ಸೀರೆಯನ್ನು ತೆಗೆದುಕೊಳ್ಳುವುದು ತಪ್ಪು. ಆದ್ದರಿಂದ ತಾಯಂದಿರು ಮರ್ಯಾದೆಯನ್ನು ಕಾಪಾಡಿಕೊಳ್ಳಬೇಕು. 

ಎಲ್ಲರೂ ಧರ್ಮವನ್ನು ಎತ್ತಿ ಹಿಡಿಯಬೇಕು. ಯಾವುದೇ ಅಮಿಷಗಳಿಗೆ ಒಳಗಾಗದೆ ಪರಿಶುದ್ಧ ಚುನಾವಣೆ ಆಗಲು ಪರಿಶುದ್ಧತೆಯಿಂದ ಮತದಾನ ಮಾಡಬೇಕು. ಆ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. ಮನಗೋಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರೂ ಜಾತಿ, ಭೇದ ಭಾವ ಇಲ್ಲದಂತೆ ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಬೇಕು. ನಾವು ಮಾಡಿದ ಕಾಯಕ, ಸಾಧನೆಗೆ ಕಾರಣವಾಗುತ್ತದೆ. ಆದ್ದರಿಂದ ಎಲ್ಲರೂ ಧಾರ್ಮಿಕ ಸಭೆ,
ಸಮಾರಂಭಗಳಲ್ಲಿ ಭಾಗವಹಿಸಿ ಸಂಸ್ಕಾರ ಕಲಿಯಬೇಕು. ಮಠ, ಮಾನ್ಯಗಳಿಗೆ ತನು, ಮನ, ಧನದ ಸಹಕಾರ ಭಾವನೆ ಇರಲಿ ಎಂದರು.

ನಿವೃತ್ತ ಕನ್ನಡ ಉಪನ್ಯಾಸಕ ಎಂ.ಪಿ.ಎಂ. ಶಾಂತವೀರಯ್ಯ ಮಾತನಾಡಿ, ವಿಜ್ಞಾನ, ತಂತ್ರಜ್ಞಾನ ಮುಂದುವರೆದಂತೆ ಶಾಂತಿ ನೆಮ್ಮದಿ ಇಲ್ಲದಾಗಿದೆ. ಶಿಷ್ಟಚಾರವಿಲ್ಲದೇ ಭ್ರಷ್ಟಾಚಾರವಾಗುತ್ತಿದೆ. ಧರ್ಮ ಬಿಟ್ಟು ಹೋಗದೇ ಎಲ್ಲರೂ ನ್ಯಾಯ, ನೀತಿ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು. 

ಸಾಧು ವೀರಶೈವ ಸಮಾಜದ ಅಧ್ಯಕ್ಷ ಬಿ. ಮಂಜುನಾಥ, ವೀರಶೈವ ಪಂಚಮಸಾಲಿ ತಾಲೂಕು ಅಧ್ಯಕ್ಷ ಪಾಟೀಲ್‌ ಬೆಟ್ಟನಗೌಡ, ನಿವೃತ್ತ ಪ್ರಾಚಾರ್ಯ ಎ. ಸಿದ್ದೇಶ್ವರ್‌, ವಕೀಲ ಕೆ. ಬಸವರಾಜ್‌, ನಿವೃತ್ತ ಶಿಕ್ಷಕ ಎಂ.ಬಸಪ್ಪ, ಕೆ.ಕುಬೇರಪ್ಪ, ಮಲ್ಲಿಕಾರ್ಜುನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.