ಕಾಂಗ್ರೆಸ್‌ ಗಾಂಧಿನಗರ ಅಭಿವೃದ್ಧಿ ಕಡೆಗಣಿಸಿದೆ


Team Udayavani, Apr 30, 2018, 12:29 PM IST

congressninda.jpg

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವಿ.ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. 

ನೂರಾರು ಮಂದಿ ಕಾರ್ಯಕರ್ತರು ಹಾಗೂ ಜೆಡಿಎಸ್‌ ಪಕ್ಷದ ಮುಖಂಡ ಮಲ್ಲೇಶ್‌ ಅವರೊಂದಿಗೆ ಗಾಂಧಿನಗರ ಕ್ಷೇತ್ರದಲ್ಲಿ ಭಾನುವಾರ ಬಿರುಸಿನ ಪ್ರಚಾರ ನಡೆಸಿದ ಅವರು ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಪಕ್ಷದ ಅಧಿಕಾರಾವಧಿಯಲ್ಲಿ ಗಾಂಧಿನಗರ ಕ್ಷೇತ್ರದ ಕೊಳಗೇರಿ ಪ್ರದೇಶಗಳ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಪ್ರಾಣಿಗಳು ಸಹ ವಾಸ ಮಾಡಲಾರದಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಕ್ಷೇತ್ರ ಮರುವಿಂಗಡಣೆ ನಂತರ ಕಳೆದ ಎರಡು ಬಾರಿ ಕಾಂಗ್ರೆಸ್‌ ಪಕ್ಷದ ಶಾಸಕರೇ ಇಲ್ಲಿ ಆಯ್ಕೆಯಾಗಿದ್ದು, ಕೊಳಗೇರಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳದೆ ಇರುವುದರಿಂದ ಈ ಭಾಗದ ಜನರು ಅತ್ಯಂತ ಕನಿಷ್ಠ ಮಟ್ಟದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊಳೆಗೇರಿಯ ಮಕ್ಕಳು, ಹಿರಿಯ ನಾಗರಿಕರು ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಸದಾಕಾಲ ತೊಂದರೆ ಅನುಭವಿಸುವಂತಾಗಿದೆ. ಸರಿಯಾಗಿ ಒಳಚರಂಡಿ ಸೌಲಭ್ಯ ಇಲ್ಲದೆ ಇರುವುದರಿಂದ ಕೊಳಚೆ ನೀರು ಜನರು ಮತ್ತು ಮಕ್ಕಳು ಓಡಾಡುವ ಪ್ರದೇಶದಲ್ಲಿ ಹರಿಯುತ್ತಿದ್ದು ಇದು ಮಾರಕ ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಅಪಾಯಕಾರಿ ಸೊಳ್ಳೆ ಕಡಿತದಿಂದ ಕೊಳಗೇರಿ ಪ್ರದೇಶದ ನಿವಾಸಿಗಳು ಡೆಂ  ಹಾಗೂ ವಿವಿಧ ಜ್ವರದಿಂದ ಸಂಕಟ ಅನುಭವಿಸುವಂತಾಗಿದೆ ಎಂದು ಕೊಳಗೇರಿ ಪ್ರದೇಶದ ಚಿತ್ರಣವನ್ನು ಬಿಚ್ಚಿಟ್ಟ ಅವರು, ಈ ಭಾಗಗಳಲ್ಲಿ ಕುಡಿಯುವ ನೀರಿಗೆ ಕೊಳಚೆ ನೀರು ಆಗಾಗೆ ಮಿಶ್ರಣವಾಗುವುದರಿಂದ ಜನ ಇನ್ನಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಲ್ಲದೆ, ತಮ್ಮನ್ನು ಆಯ್ಕೆ ಮಾಡಿದರೆ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.