ರೋಗಿ ಗುಣವಾಗಲೂ ಮಾನವೀಯ ಗುಣವೂ ಮುಖ್ಯ

Team Udayavani, Apr 30, 2018, 12:29 PM IST

rogi.jpg

ಬೆಂಗಳೂರು: ರೋಗಿ ಗುಣಮುಖವಾಗಬೇಕಾದರೆ ಚಿಕಿತ್ಸೆಯ ಜತೆಗೆ ಆತನೊಂದಿಗೆ ವೈದ್ಯರು ಅನುಸರಿಸುವ ಮಾನವೀಯ ಗುಣಗಳೂ ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಆಲ್ಟಿಯಸ್‌ ಹಾಸ್ಪಿಟಲ್‌ ಪ್ರೈ.ಲಿ. ಭಾನುವಾರ ರೆಜಸ್‌ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗೈನಕಾಲಜಿ, ಎಂಡೋಸ್ಕೋಪಿ ಮತ್ತು ಯೂರೋಗೈನಕಾಲಜಿಯಲ್ಲಿ ಇತ್ತೀಚಿನ ಆವಿಷ್ಕಾರಗಳ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಮಾನವೀಯ ಮೌಲ್ಯಗಳು ಕೂಡ ಪರಿಣಾಮಕಾರಿ ಚಿಕಿತ್ಸೆಯ ಭಾಗವಾಗಿವೆ.

ರೋಗಿಯೊಂದಿಗೆ ವೈದ್ಯರು ವರ್ತಿಸುವ ರೀತಿಯೂ ಪ್ರಭಾವ ಬೀರುತ್ತದೆ. ಇದಕ್ಕೆ ಮುನ್ನಾಭಾಯಿ ಎಂಬಿಬಿಎಸ್‌ ಚಿತ್ರ ಉತ್ತಮ ಉದಾಹರಣೆ ಎಂದ ಅವರು, ಆ ಚಿತ್ರದಲ್ಲಿನ ಒಳ್ಳೆಯ ಅಂಶಗಳನ್ನು ವೈದ್ಯರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆದರೆ, ದುರದೃಷ್ಟವೆಂದರೆ ವೈದ್ಯರು ಸೇರಿದಂತೆ ಬಹುತೇಕರಲ್ಲಿ ಈ ಮಾನವೀಯ ಗುಣಗಳು ಗೌಣವಾಗುತ್ತಿವೆ. ಬಡವರು ಮತ್ತು ಶ್ರೀಮಂತರಿಗೆ ಸಿಗುವ ವೈದ್ಯಕೀಯ ಚಿಕಿತ್ಸೆಯಲ್ಲಿ ಸಾಕಷ್ಟು ಭಿನ್ನತೆ ಇದೆ ಎಂದರು.  

ಜೈಲಿಗೆ ಹೋಗಿಬಂದವರು ನಾಯಕರು: ಕಾಮನ್‌ವೆಲ್ತ್‌, ಕಲ್ಲಿದ್ದಲು ಸೇರಿದಂತೆ ಅನೇಕ ಹಗರಣಗಳಲ್ಲಿ ಸಾವಿರಾರು ಕೋಟಿ ಹಣ ಲೂಟಿ ಮಾಡಲಾಗಿದೆ. ಒಂದೆಡೆ ಜೈಲು ಶಿಕ್ಷೆ ಅನುಭವಿಸಿ ಬಂದವರಿಗೆ ಹಾರ ಹಾಕಿ, ತಮ್ಮ ನಾಯಕನನ್ನಾಗಿ ವಿಜೃಂಭಿಸಲಾಗುತ್ತಿದೆ.

ಒಟ್ಟಾರೆ ಇತ್ತೀಚಿನ ಬೆಳವಣಿಗೆಗಳು ತೃಪ್ತಿಕರವಾಗಿಲ್ಲ. ಹಗರಣದ ಹಣವನ್ನು ಬಡವರಿಗೆ ಹಂಚಿದ್ದರೆ, ಇಡೀ ದೇಶ ಇಷ್ಟೊತ್ತಿಗೆ ಬಡತನಮುಕ್ತವಾಗುತ್ತಿತ್ತು ಎಂದ ಸಂತೋಷ್‌ ಹೆಗ್ಡೆ, ಯುವಕರಿಗೆ ತಮ್ಮ ಸುತ್ತಮುತ್ತಲಿನ ಆಗುಹೋಗುಗಳ ಅರಿವಿರಬೇಕು ಹಾಗೂ ಅದಕ್ಕೆ ಸ್ಪಂದಿಸಬೇಕು.

ಸಮಸ್ಯೆಗಳಿಂದ ವಿಮುಖ ಆಗುವುದು ಪರಿಹಾರ ಅಲ್ಲ. ಅನ್ಯಾಯ ಆದಾಗ ಅದನ್ನು ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಭಾರತೀಯ ವೈದ್ಯಕೀಯ ಸಂಘ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಎನ್‌.ರವೀಂದ್ರ, ಶಿವಮೊಗ್ಗ ಸಿಟಿ ಆಸ್ಪತ್ರೆ ನಿರ್ದೇಶಕ ಡಾ.ಮಲ್ಲೇಶ್‌ ಹುಳಮನಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.