ಕ್ರಿಶ್ಚಿಯನ್,ಮುಸ್ಲಿಮರಿಗೆ ಟಿಕೆಟ್ ನೀಡದ ನೀವು ಕನ್ನಡಿಗರೆ?
Team Udayavani, May 1, 2018, 11:55 AM IST
ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ನಿರಂತರವಾಗಿ ವಾಗ್ಧಾಳಿ ನಡೆಸುವ ಸಿಎಂ ಸಿದ್ದರಾಮಯ್ಯ ಅವರು ಟ್ವೀಟರ್ನಲ್ಲೂ ಸಮರ ಮುಂದುವರಿಸಿದ್ದಾರೆ. ನಾನು ಕನ್ನಡಿಗ, ಕರ್ನಾಟಕದ ಭಾಜಪ ಕಾರ್ಯಕರ್ತ ಎಂದ ಮೋದಿ ಅವರಿಗೆ 5 ಪ್ರಶ್ನೆಗಳ ಸವಾಲನ್ನು ಸಿಎಂ ಸಿದ್ದರಾಮಯ್ಯ ಎಸೆದಿದ್ದಾರೆ.
ಸರಣಿ ಟ್ವಿಟ್ಗಳ ಪ್ರಶ್ನೆಗಳು ಹೀಗಿವೆ
1.ಕನ್ನಡಿಗನೆಂದು ಘೋಷಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ.
ಕನ್ನಡಿಗನಾಗುವುದೆಂದರೆ….ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು.
ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ, ನಿಜವಾದ ಕನ್ನಡಿಗರಾಗುವಿರಾ?.
2.ಕನ್ನಡಿಗನಾಗುವುದೆಂದರೆ…ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು ಗೌರವಿಸುವುದು.ಒಬ್ಬನೇ ಒಬ್ಬ ಮುಸ್ಲಿಮ್,ಕ್ರಿಶ್ಚಿಯನ್ಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ?
3.ಕನ್ನಡಿಗನಾಗುವುದೆಂದರೆ…ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು, ಕನ್ನಡಕ್ಕೆ ಪ್ರಾಮುಖ್ಯ ಕೊಡುವುದು.
4.ಕನ್ನಡಿಗರಾಗಲು ಸಿದ್ದ ಇದ್ದೀರಾ? ಕನ್ನಡಿಗನಾಗುವುದೆಂದರೆ….ಕನ್ನಡ ಕನ್ನಡಿಗ ಕರ್ನಾಟಕದ ಹಿತರಕ್ಷಣೆ.ರಾಷ್ಟೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡಿಗರಿಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕನ್ನಡಿಗರಾಗುವಿರಾ?
5.ಕನ್ನಡಿಗನಾಗುವುದೆಂದರೆ…ನೆಲ,ಜಲ,ಭಾಷೆಯ ರಕ್ಷಣೆಗೆ ಬದ್ದವಾಗಿರುವುದು.
ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆದು ಕನ್ನಡಿಗರಾಗುವಿರಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.