ಗುರುಕುಲ ಕಾಲೇಜ್ ವಿಜ್ಞಾನ-ವಾಣಿಜ್ಯದಲ್ಲಿ ಟಾಪರ್
Team Udayavani, May 1, 2018, 12:37 PM IST
ಕಲಬುರಗಿ: ಜಾಜಿ ಶಿಕ್ಷಣ ಸಂಸ್ಥೆಯ ಗುರುಕುಲ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಪಿಯುಸಿಯಲ್ಲಿ ಮತ್ತೆ ದಾಖಲೆ ಫಲಿತಾಂಶ ಬಂದಿದೆ. ಈ ಮಹಾವಿದ್ಯಾಲಯದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ 10ರೊಳಗಿನ ಸ್ಥಾನಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ಈ ಭಾಗಕ್ಕೆ ಕೀರ್ತಿ ತಂದಿದ್ದಾರೆ.
ವಿಜ್ಞಾನ ವಿಭಾಗದ ಸಾಯಿದಾ ಕುರತ್ ಉಲ್ ಐನ್ 588 ಅಂಕಗಳನ್ನು ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾಳೆ. ಸೈಯದ್ ಹಿಂದಿಯಲ್ಲಿ 97, ಇಂಗ್ಲೀಷದಲ್ಲಿ 95, ಭೌತಶಾಸ್ತ್ರದಲ್ಲಿ 99, ರಸಾಯನಶಾಸ್ತ್ರದಲ್ಲಿ 98, ಗಣಿತದಲ್ಲಿ 99 ಹಾಗೂ ಜೀವಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿದ್ದಾಳೆ. ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ರಬ್ಜಿತ್‌ಸಿಂಗ್ ಛಾಬ್ರಾ ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಪಡೆದು ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ 8 ನೇ ಸ್ಥಾನ ಪಡೆದಿದ್ದಾರೆ. ರಬ್ಜಿತ್ ಸಿಂಗ್ ಇಂಗ್ಲಿಷ್‌ದಲ್ಲಿ 93, ಹಿಂದಿಯಲ್ಲಿ 96, ವ್ಯವಹಾರ ಅಧ್ಯಯನ 100, ಲೆಕ್ಕಶಾಸ್ತ್ರದಲ್ಲಿ 99, ಸಂಖ್ಯಾಶಾಸ್ತ್ರದಲ್ಲಿ 100, ಮೂಲಗಣಿತದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ. 2016ರಲ್ಲೂ ವಿಜ್ಞಾನ ವಿಭಾಗದಲ್ಲಿ ಇದೇ ಕಾಲೇಜು ಜಿಲ್ಲೆಗೆ ಟಾಪರ್ ಸ್ಥಾನ ಪಡೆದಿತ್ತು.
ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ 10ರೊಳಗೆ ಸ್ಥಾನ ಪಡೆದ ಸೈಯದ್ ಕುರತ್ ಸಿರಾಜುದ್ದೀನ್ ಹಾಗೂ ರಬ್ಜಿತ್‌ಸಿಂಗ್ ಛಾಬ್ರಾ ಅವರಿಗೆ ಕಾಲೇಜಿನ ಪ್ರಾಚಾರ್ಯ ಡಾ| ಭುರ್ಲಿ ಪ್ರಲ್ಹಾದ ಸಿಹಿ ತಿನ್ನಿಸಿ ಶುಭ ಹಾರೈಸಿದರು. ಕಾಲೇಜಿನಲ್ಲಿ ಉತ್ತಮ ಬೋಧನೆ ಹಾಗೂ ಸೂಕ್ತ ಮಾರ್ಗದರ್ಶನವೇ ರಾಜ್ಯ ಮಟ್ಟದಲ್ಲಿ ರ್‍ಯಾಂಕ್ ಪಡೆಯಲು ಕಾರಣವಾಗಿದೆ ಎಂದು ಟಾಪರ್ ಪಡೆದ ವಿದ್ಯಾರ್ಥಿಗಳಿಬ್ಬರು ತಮ್ಮ
ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿಗೆ ಶೇ. 98.5 ಫಲಿತಾಂಶ ಬಂದಿದೆ. ಕಾಲೇಜಿಗೆ ಹಾಜರಾದ 477 ವಿದ್ಯಾರ್ಥಿಗಳಲ್ಲಿ 217 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. 248 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 137
ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.
ವಿಜ್ಞಾನ ವಿಭಾಗದ ಭೌತಶಾಸ್ತ್ರದಲ್ಲಿ 3, ಜೀವಶಾಸ್ತ್ರ 4, ಗಣಿತಶಾಸ್ತ್ರ 13, ರಸಾಯನಶಾಸ್ತ್ರ 4 ಹಾಗೂ ಎಲೆಕ್ಟ್ರಾನಿಕ್ ದಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಹಾಗೂ ವಾಣಿಜ್ಯ ವಿಭಾಗದ ಸಂಖ್ಯಾಶಾಸ್ತ್ರದಲ್ಲಿ 11, ಲೆಕ್ಕಶಾಸ್ತ್ರದಲ್ಲಿ 10, ವ್ಯವಹಾರ ಅಧ್ಯಯನ 08, ಮೂಲಗಣಿತ 3 ಹಾಗೂ ಹಿಂದಿಯಲ್ಲಿ ಒಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ಹರ್ಷ: ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಟಾಪರ್ ಸ್ಥಾನ ಫಲಿತಾಂಶ ಬಂದಿರುವುದು ಹಾಗೂ ಕಾಲೇಜ್‌ಗೆ ಅತ್ಯುತ್ತಮ ಫಲಿತಾಂಶ ಬಂದಿರುವುದಕ್ಕೆ ಜಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ವಿಜಯಕುಮಾರ ಜಾಜಿ, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಕಾಲೇಜ್‌ನ ನಿರ್ದೇಶಕರು ಮತ್ತು ಪ್ರಾಚಾರ್ಯರಾದ ಡಾ| ಭುರ್ಲಿ ಪ್ರಲ್ಹಾದ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.