ನೀರಾವರಿ ಯೋಜನೆ ಜಾರಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ


Team Udayavani, May 1, 2018, 5:10 PM IST

shiv-1.jpg

ಶಿಕಾರಿಪುರ: ಮುಖ್ಯಮಂತ್ರಿಯಾದವರು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತರಲ್ಲ. ರಾಜ್ಯದ ಎಲ್ಲಾ ಕ್ಷೇತ್ರಕ್ಕೂ ಸಮಾನ
ಆದ್ಯತೆ ನೀಡಬೇಕು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆ ಅನುಷ್ಠಾನದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಶಾಸಕ ಬಿ.ವೈ. ರಾಘವೇಂದ್ರ ಆರೋಪಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಮುಖಂಡರೊಂದಿಗೆ ಚುನಾವಣೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲ ತಾಂಡವವಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿ ಯಡಿಯೂರಪ್ಪನವರು ಕೇಂದ್ರದ ಜಲಸಂಪನ್ಮೂಲ ಸಚಿವರ ಜೊತೆ ಸಮಾಲೋಚಿಸಿ ತಾಲೂಕಿನ ನಾಲ್ಕು ಶಾಶ್ವತ ನೀರಾವರಿ ಯೋಜನೆ ಅನುಷ್ಠಾನದ ಬಗ್ಗೆ ಒತ್ತಡ ತಂದ ಪರಿಣಾಮವಾಗಿ ಕೇಂದ್ರದ ದಕ್ಷಿಣ ರಾಜ್ಯದ ಮಾನಿಟರಿಂಗ್‌ ಕಮಿಟಿ, ಬಂದು ಸಮೀಕ್ಷೆ ನಡೆಸಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಪೂರಕವಾಗಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಡಿ.ಪಿ.ಆರ್‌. ತಯಾರಿಸಲು 3 ಬಾರಿ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರ ಉಪೇಕ್ಷೆ ಮಾಡಿ ಇದುವರೆಗೆ ಡಿ.ಪಿ.ಆರ್‌. ತಯಾರಿಸಿ ಕಳುಹಿಸಲಿಲ್ಲ. ಮುಖ್ಯಮಂತ್ರಿಗಳು ಬಜೆಟ್‌ಲ್ಲೂ ಈ ನೀರಾವರಿ ಯೋಜನೆಗಳಿಗೆ ಅನುದಾನ ಮಿಸಲಿಟ್ಟಿಲ್ಲ ಎಂದು
ವಾಗ್ಧಾಳಿ ನಡೆಸಿದರು ಶಿಕಾರಿಪುರ ತಾಲೂಕಿನಲ್ಲೂ ರೈತರು, ಬಡವರು ಇದ್ದಾರೆ. ಅವರ ಕಷ್ಟಕ್ಕೆ ನೀರಾವರಿ ಯೋಜನೆಗಳ
ಮೂಲಕ ಸ್ಪಂದಿಸದ ನೀವು ಯಾವ ನೈತಿಕತೆ ಆಧಾರದ ಮೇಲೆ ಶಿಕಾರಿಪುರಕ್ಕೆ ಮತಯಾಚನೆ ಮಾಡಲು ಆಗಮಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ತಾಲೂಕಿನಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.

ಜೆಡಿಎಸ್‌ ಮುಖಂಡ ಎಚ್‌.ಟಿ. ಬಳಿಗಾರ್‌ ಹೋದಲ್ಲೆಲ್ಲ ಅಧಿಕಾರದಲ್ಲಿದ್ದಾಗ ಬಿಎಸ್‌ವೈ ತಾಲೂಕಿನ ನೀರಾವರಿಗಾಗಿ ಏನೂ ಮಾಡಲಿಲ್ಲ ಎಂದು ಹೇಳುತ್ತಾ ಹೋಗುತ್ತಿದ್ದಾರೆ. ಆದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದ ಇವರು ತಾಲೂಕಿನಲ್ಲಿ ಶಾಶ್ವತ ನೀರಾವರಿ ಯೋಜನೆ ಮಾಡಿದರೆ ಮಾತ್ರ ಬೆಂಬಲ ನೀಡುತ್ತೇವೆ ಎಂದು ಏಕೆ ಹೇಳಲಿಲ್ಲ ಎಂದರು ರೈತಸಂಘವನ್ನು ತೊರೆದು ಬಿಜೆಪಿ ಸೇರಿದ ಡಿ.ಎಸ್‌. ಈಶ್ವರಪ್ಪ ಮಾತನಾಡಿ, ನೂರಾರು ವರ್ಷಗಳ ಸುದೀರ್ಘ‌ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ಜನರಿಗೆ ಭಯದ ವಾತಾವರಣ ನಿರ್ಮಿಸುವ ವ್ಯಕ್ತಿಗೆ ತಾಲೂಕಿನಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಅವಕಾಶ ಮಾಡಿಕೊಟ್ಟಿದ್ದು ಸರಿಯಲ್ಲ.

ಇಂತವರು ವಿಧಾನಸಭೆ ಪ್ರವೇಶಿಸಿದರೆ ಹೇಗೆ ಎಂದು ಜನ ಚಿಂತನೆ ಮಾಡುತ್ತಾರೆ ಎಂದರುಇದೇ ಸಂಧರ್ಭದಲ್ಲಿ ಪುರಸಭಾ ಮಾಜಿ ಸದಸ್ಯ ರೇವಣಪ್ಪ ಮತ್ತು ಹಲವಾರು ಮುಖಂಡರು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಎಂ.ಬಿ. ಚನ್ನವೀರಪ್ಪ, ಪುರಸಭಾ ಸದಸ್ಯರಾದ ಟಿ.ಎಸ್‌. ಮೋಹನ, ವಸಂತಗೌಡ, ಚಾರಗಲ್ಲಿ ಪರಶುರಾಮ, ಡಿ.ಎಲ್‌. ಬಸವರಾಜ, ಪ್ರವೀಣ್‌ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.