ಕರ್ನಾಟಕ ಚುನಾವಣೆ: ತೈಲ ದರ ಪರಿಷ್ಕರಣೆ ಸ್ಥಗಿತ
Team Udayavani, May 2, 2018, 9:20 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ 12ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಏರಿಸದಂತೆ ಕೇಂದ್ರ ಸರಕಾರ ತೈಲ ಕಂಪೆನಿಗಳಿಗೆ ಸೂಚಿಸಿದೆಯೇ?
ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್ ಒಂದಕ್ಕೆ 2 ಡಾಲರ್ನಷ್ಟು ಏರಿಕೆಯಾಗಿದ್ದರೂ, ಎ.24ರ ಬಳಿಕ ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯಾಗಿಲ್ಲ. ಸದ್ಯ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 74.63 ರೂ. ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲೂ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಪ್ರತಿನಿಧಿಗಳು ನಿರಾಕರಿಸಿದ್ದಾರೆ. ಪೆಟ್ರೋಲಿಯಂ ಸಚಿವಾಲಯ ಕೂಡ ತೈಲ ಕಂಪೆನಿಗಳತ್ತ ಕೈ ತೋರಿಸಿ ಜಾರಿಕೊಂಡಿದೆ. ಈ ನಡುವೆ ಕೇಂದ್ರ ಹಣಕಾಸು ಇಲಾಖೆ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ (ಎಕ್ಸೈಸ್ ಡ್ಯೂಟಿ) ಕಡಿಮೆ ಮಾಡಲೂ ಒಪ್ಪಿಲ್ಲ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.