ನೈಜ ಘಟನೆಯ ಸುತ್ತ ಹೊಸಬರು
Team Udayavani, May 2, 2018, 12:36 PM IST
ನೈಜ ಘಟನೆ ಆಧಾರಿತ … ಹೀಗೆ ಹೇಳಿಕೊಂಡು ಅದೆಷ್ಟು ಸಿನಿಮಾಗಳು ಸೆಟ್ಟೇರುತ್ತವೋ ಲೆಕ್ಕವಿಲ್ಲ. ನೈಜ ಘಟನೆ ಎಂದಾಗ ಸಿನಿಮಾ ಬಗ್ಗೆ ಕುತೂಹಲ ಹೆಚ್ಚುತ್ತದೆ ಎಂಬ ಕಾರಣಕ್ಕೆ ಎಲ್ಲೋ ನಡೆದ ಘಟನೆಗೆ ಸಿನಿಮೀಯ ಸ್ಪರ್ಶ ಕೊಟ್ಟು ತೆರೆಗೆ ತರುತ್ತಾರೆ. ಈಗ ಹೊಸಬರ ತಂಡವೊಂದು ಕೂಡಾ ನೈಜ ಘಟನೆಯೊಂದನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾಗಿದೆ.
ಚಿತ್ರಕ್ಕೆ ಟೈಟಲ್ ಇನ್ನಷ್ಟೇ ಅಂತಿಮವಾಗಬೇಕಿದೆ. ಇತ್ತೀಚೆಗೆ ಚಿತ್ರಕ್ಕೆ ನಟ ಮಯೂರ್ ಕ್ಲಾಪ್ ಮಾಡಿದರು. ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆಯಂತೆ. 1990ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಔಷಧಿ ದಂಧೆಯನ್ನಿಟ್ಟುಕೊಂಡು ಚಿತ್ರ ಮಾಡಲಾಗುತ್ತಿದೆ. ಐವರು ಯುವಕರು ಸಾಧನೆ ಮಾಡುವ ಸಲುವಾಗಿ ಹುರಪಿನಿಂದ ಈ ದಂಧೆಗೆ ಅರಿವಿಲ್ಲದೆ ಸೇರಿಕೊಳ್ಳುತ್ತಾರೆ.
ಅದರಿಂದ ತಪ್ಪಿಸಿಕೊಂಡು ಹೇಗೆ ಹೊರಗೆ ಬರುತ್ತಾರೆ ಎಂಬುದನ್ನು ಸಿನಿಮಾದನ್ನು ಚಿತ್ರದಲ್ಲಿ ತೋರಿಸಲಿದ್ದಾರಂತೆ. ಚಿತ್ರವನ್ನು ಶ್ರೀವತ್ಸ ಆರ್ ಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಥರ್ವ್, ವರುಣ್ ನಾರಾಯಣ್, ವಿನಯ್ ರಾವ್, ಸಚಿನ್ ಇವರೊಂದಿಗೆ ಮಾಸ್ಟರ್ ಗೋಕುಲ್ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದಲ್ಲಿನ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಸೂಕ್ತ ಕಲಾವಿದರನ್ನು ಆಯ್ಕೆ ಮಾಡಲು ಚಿತ್ರತಂಡ ಚಿಂತನೆ ನಡೆಸುತ್ತಿದೆ.
ಚಿತ್ರದ ಎರಡು ಹಾಡುಗಳಿಗೆ ಮಹಾರಾಜ್ ಸಂಗೀತ, ಪೂರ್ಣಚಂದ್ರ ಬೈಕಾಡಿ ಛಾಯಾಗ್ರಹಣ ಚಿತ್ರಕ್ಕಿದೆ. ಬೆಂಗಳೂರು ಮತ್ತು ಚಿಕ್ಕಮಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ. ಆರ್.ಜೆ.ಸಿನಿ ಕ್ರಿಯೇಷನ್ಸ್ ಮೂಲಕ ಜಯಶ್ರೀ ಮತ್ತು ಸಾವಿತ್ರಮ್ಮ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.