ಇಂದು ಮೋದಿ, ಯೋಗಿ, ನಿತಿನ್ ಗಡ್ಕರಿ ರಾಜ್ಯ ಪ್ರವಾಸ
Team Udayavani, May 3, 2018, 6:30 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕಲಬುರಗಿ, ಬಳ್ಳಾರಿ ಹಾಗೂ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಷ್ಟ್ರೀಯ ನಾಯಕರ ರಾಜ್ಯ ಪ್ರವಾಸದ ವಿವರ ನೀಡಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಮೇ 3ರಿಂದ 5ರ ತನಕ ರಾಜ್ಯದಲ್ಲಿದ್ದು ಶಿರಸಿ, ಸಾಗರ, ಬೈಂದೂರು, ಬೇಲೂರು, ಹೊನ್ನಾಳಿ, ಹಳಿಯಾಳ, ಮುದ್ದೇಬಿಹಾಳ, ತೇರದಾಳ, ಮುಧೋಳ, ಸೇಡಂ, ಬಾಲ್ಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
3ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ನಿಪ್ಪಾಣಿ ಮತ್ತು ಬೆಳಗಾವಿ ಗ್ರಾಮೀಣ ಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇ 4ರಂದು ಕೇಂದ್ರ ಸಚಿವೆ ಸ್ಮತಿ ಇರಾನಿಯವರು ನವಲಗುಂದ, ನರಗುಂದ, ಕುಂದಗೋಳ, ಗುಳ್ಳೇದಗುಡ್ಡ, ಹುಬ್ಬಳ್ಳಿ ಮೊದಲಾದೆಡೆ ರೋಡ್ ಶೋ ನಡೆಸಲಿದ್ದಾರೆ.
5ರಂದು ಕೇಂದ್ರ ಗೃಹಸಚಿವ ರಾಜನಾಥ್‌ಸಿಂಗ್ ಅವರು ಕಲಬುರಗಿ ಗ್ರಾಮೀಣ, ಅಫjಲ್‌ಪುರ, ಚಿತ್ತಾಪುರ, ಚಿಂಚೋಳಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 5ಕ್ಕೆ ಅಮಿತ್ ಶಾ ಅವರು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ ಎಂಬ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.