ಇವ ಕಮರ್ಷಿಯಲ್‌ ಕವಿ

Team Udayavani, May 4, 2018, 6:00 AM IST

s-35.jpg

ಚಿತ್ರರಂಗಕ್ಕೆ ನಿರ್ದೇಶಕರಾಗಬೇಕು ಅಂತ ಬಂದರಂತೆ ಎಂ.ಎಸ್‌. ತ್ಯಾಗರಾಜ್‌. ಆದರೆ, ಅವರು ಆಗಿದ್ದು ಸಂಗೀತ ನಿರ್ದೇಶಕ. ಒಂದಿಷ್ಟು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದರೂ, ಅವರಿಗೆ ಒಂದು ಚಿತ್ರ ನಿರ್ದೇಶಿಸಬೇಕು ಎಂಬ ಆಸೆ ಒಳಗೆ ಕುದಿಯುತ್ತಲೇ ಇತ್ತಂತೆ. ಆ ಆಸೆ ಈಗ ಕೊನೆಗೂ ಈಡೇರಿದೆ. ತ್ಯಾಗರಾಜ್‌ ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಆ ಚಿತ್ರದ ಹೆಸರು “ಕವಿ’. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಆ ನೆಪದಲ್ಲಿ ಚಿತ್ರತಂಡದವರು ಮಾಧ್ಯಮದವರೆದುರು ಬಂದಿದ್ದಾರೆ.

ಅಂದಹಾಗೆ, “ಕವಿ’ ಚಿತ್ರಕ್ಕೆ ತ್ಯಾಗರಾಜ್‌ ಅವರೇ ಸಂಗೀತ ಸಂಯೋಜಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ಕಥೆಯೂ ಅವರದ್ದೇ. “ಕವಿ’ ಎಂಬ ಹೆಸರು ಕೇಳುತ್ತಿದ್ದಂತೆಯೇ ಇದೊಂದು ಕಾವ್ಯಾತ್ಮಕ ಸಿನಿಮಾ ಎಂಬ ಅಂದಾಜು ಬರಬಹುದು. ಹಾಗೇನಿಲ್ಲ. ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರವಂತೆ. “ಎಲ್ಲರೊಳಗೂ ಒಬ್ಬ ಕವಿ ಇರುತ್ತಾನೆ. ಆದರೆ, ಬಹಳಷ್ಟು ಜನರಿಗೆ ಅದು ಗೊತ್ತಿರುವುದಿಲ್ಲ. ಆ ಕವಿಯನ್ನು ಸಮಯಕ್ಕೆ ಸರಿಯಾಗಿ ಹೊರಗೆ ಬಿಟ್ಟಾಗ ಮನಸ್ಸು ಹಗುರವಾಗುತ್ತದೆ. ಈ ಎಳೆ ಇಟ್ಟುಕೊಂಡು ಕಥೆ ಮಾಡಿದ್ದೇನೆ’ ಎನ್ನುತ್ತಾರೆ ತ್ಯಾಗರಾಜ್‌.

ಈ ಚಿತ್ರಕ್ಕೆ ನಾಯಕ ಪುನೀತ್‌ ಗೌಡ. ನಾಯಕರಷ್ಟೇ ಅಲ್ಲ, ಈ ಚಿತ್ರದ ನಿರ್ಮಾಪಕರೂ ಅವರೇ. ಪುನೀತ್‌ಗೆ ತ್ಯಾಗರಾಜ್‌ ಹೇಳಿದ ಕಥೆ ಬಹಳ ಇಷ್ಟವಾಗಿದೆ. ಅದೇ ಕಾರಣಕ್ಕೆ ಚಿತ್ರವನ್ನು ನಿರ್ಮಿಸುವುದಕ್ಕೆ ಅವರು ಮುಂದಾಗಿದ್ದಾರೆ. ಇನ್ನು ಅವರಿಗೆ ನಾಯಕಿಯಾಗಿ “ಎಟಿಎಂ’ ಖ್ಯಾತಿಯ ಶೋಭಿತಾ ಇದ್ದಾರೆ. “ಇಲ್ಲಿ ನನ್ನ ಪಾತ್ರ ಬಹಳ ಚೆನ್ನಾಗಿದೆ. ನನ್ನ ಮನೆಯವರು ನನ್ನನ್ನ ಒಬ್ಬ ಕವಿಗೆ ಕೊಟ್ಟು ಮದುವೆ ಮಾಡಬೇಕು ಅಂತ ಆಸೆಪಡುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಕ ಸಿಗುತ್ತಾನೆ. ಅವನು ಕವಿ ಎಂದುಕೊಂಡು ಪ್ರೀತಿಸುತ್ತೇನೆ. ಆದರೆ, ಅಲ್ಲ ಎಂಬುದು ಕೊನೆಗೆ ಗೊತ್ತಾಗುತ್ತದೆ. ನಮ್ಮಿಬ್ಬರ ನಡುವೆ ಬ್ರೇಕ್‌ ಅಪ್‌ ಆಗುತ್ತದೆ. ಕೊನೆಗೆ ಅವನು ಕವಿ ಆಗುತ್ತಾನೆ’ ಎಂದು ವಿವರಿಸಿದರು ಅವರು.

ಈ ಚಿತ್ರದ ಶೇ 75ರಷ್ಟು ಭಾಗವನ್ನು ತೀರ್ಥಹಳ್ಳಿಯಲ್ಲಿ ಚಿತ್ರೀಕರಣ ಮಾಡಿದರೆ, ಬೆಂಗಳೂರಿನಲ್ಲೂ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆ. ತ್ಯಾಗರಾಜು, ಮಧುಸೂಧನ್‌ ಮತ್ತು ಪ್ರೇಮ್‌ ಖುಷಿ ಸಾಹಿತ್ಯ ಬರೆದಿದ್ದಾರೆ. ಇನ್ನು ಉಮೇಶ್‌, ರಾಕ್‌ಲೈನ್‌ ಸುಧಾಕರ್‌, ಮಹೇಶ್‌ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.