ಭಾಗ್ಯಗಳ ಕೊಟ್ಟ ಕಾಂಗ್ರೆಸ್ ಬೆಂಬಲಿಸಿ
Team Udayavani, May 4, 2018, 11:16 AM IST
ದಾವಣಗೆರೆ: ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಅಲ್ಪಸಂಖ್ಯಾತ ಸಮುದಾಯಕ್ಕೆ ಶಾದಿ ಭಾಗ್ಯ ಯೋಜನೆ ರೂಪಿಸಿರುವ
ಕಾಂಗ್ರೆಸ್ ಬೆಂಬಲಿಸಿ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ. ಗುರುವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ 4,6 ಮತ್ತು 7ನೇ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಶಾದಿ ಭಾಗ್ಯದಂತಹ ಮಹತ್ವದ ಯೋಜನೆ ಜಾರಿಗೆ ತಂದು ಅನೇಕ ಬಡವರಿಗೆ ಅನುಕೂಲ ಕಲ್ಪಿಸಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಾತಿ- ಧರ್ಮದ ಬಡವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಕೂಲಿ ಕಾರ್ಮಿಕರಿಗಾಗಿಯೇ ಇಂದಿರಾ ಕ್ಯಾಂಟೀನ್ ಮೂಲಕ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ನೀಡಲಾಗುತ್ತಿದೆ ಎಂದು ತಿಳಿಸಿದರು.
ಡೆಪ್ಯುಟಿ ಮೇಯರ್ ಕೆ. ಚಮನ್ ಸಾಬ್, ಸದಸ್ಯರಾದ ಎ.ಬಿ. ರಹೀಂ, ಬುತ್ತಿಗೌಸ್ ಮೊಹಮ್ಮದ್, ಕೆ.ಆರ್. ಮೆಹಬೂಬ್‌ಸಾಬ್, ದಿಲ್‌ಶಾದ್ ಷೇಕ್ ಅಹ್ಮದ್, ನಾಮನಿರ್ದೇಶಿತ ಸದಸ್ಯ ಫಾರೂಕ್, ಮಾಜಿ ಸದಸ್ಯರಾದ ಶಫಿಕ್ ಪಂಡಿತ್, ಮುನ್ನಾ ಪೈಲ್ವಾನ್, ಉದ್ಯಮಿ ಎಸ್.ಎಸ್. ಗಣೇಶ್, ಎ.ಸಿ. ಜಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.