ನಗರವನ್ನು ಕಾಡಿದ ಮಳೆ
Team Udayavani, May 4, 2018, 11:45 AM IST
ಬೆಂಗಳೂರು: ನಗರದಲ್ಲಿ ಮಳೆ ಮುಂದುವರಿದಿದ್ದು, ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನ ದಟ್ಟಣೆ ಉಂಟಾಗಿ ಸವಾರರು ತೊಂದರೆ ಅನುಭವಿಸುವಂತಾಯಿತು.
ಗುರುವಾರ ಸಂಜೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾತ್ರಿ 8.30ರ ವೇಳೆಗೆ ಗಾಳಿಯೊಂದಿಗೆ ಆರಂಭವಾದ ಮಳೆಯಿಂದಾಗಿ ನಗರದ ಕೆಲವೆಡೆ 10ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ. ಟೆಂಡರ್ ಶ್ಯೂರ್ ರಸ್ತೆಗಳು ಹಾಗೂ ಪ್ರಮುಖ ಜಂಕ್ಷನ್‌ಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ದಟ್ಟಣೆಯಲ್ಲಿ ಸಿಲುಕುವಂತಾಯಿತು.
ಬಸವನಗುಡಿ, ಸಾರಕ್ಕಿ, ಬೇಗೂರು, ಕೊಡಿಗೆಹಳ್ಳಿ, ಯಲಹಂಕ, ಕೆ.ಆರ್.ಪುರ, ಅಗ್ರಹಾರ ದಾಸರಹಳ್ಳಿ, ಕೋರಮಂಗಲ, ರಾಜರಾಜೇಶ್ವರಿ ನಗರ, ಕೋಗಿಲು, ಬೊಮ್ಮನಹಳ್ಳಿ, ಹೊಂಗಸಂದ್ರ, ರೂಪೇನ ಅಗ್ರಹಾರ, ಸದಾಶಿವನಗರ, ಮೆಜೆಸ್ಟಿಕ್, ಸಂಪಂಗಿ ರಾಮನಗರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಜತೆಗೆ ಗಂಗಮ್ಮ ವೃತ್ತ, ಮಾಗಡಿ ರಸ್ತೆ, ವೈಯಾಲಿ ಕಾವಲ್, ಮಲ್ಲೇಶ್ವರ, ಯಲಹಂಕ ಸೇರಿದಂತೆ ಹಲವೆಡೆ 10ಕ್ಕೂ ಹೆಚ್ಚು ಮರ ಹಾಗೂ ಕೊಂಬೆಗಳು ಧರೆಗುರುಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI: ಪಾಪ್ ಸಂಗೀತಗಾರ ರಾಬಿ ವಿಲಿಯಮ್ಸ್ ಬೆಟರ್ ಮ್ಯಾನ್ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.