ಪಾಪದ ಕಣಿವೆಯಾದ ಬೆಂಗಳೂರು!


Team Udayavani, May 4, 2018, 11:45 AM IST

papada-kaniv.jpg

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ಕಳೆದ ಐದು ವರ್ಷಗಳಲ್ಲಿ ರಾಜಧಾನಿ ಬೆಂಗಳೂರನ್ನು ಕೈಂ ಸಿಟಿ ಹಾಗೂ ಗಾರ್ಬೇಜ್‌ ಸಿಟಿಯನ್ನಾಗಿಸಿ ಜನರ ನೆಮ್ಮದಿಯನ್ನೇ ಕೆಡಿಸಿದೆ. ಬೆಂಗಳೂರಿನ ಪುನರ್‌ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುರುವಾರ ಕೆಂಗೇರಿಯಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷದ ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ಕಥೆ ಕೇಳಿದ ತಕ್ಷಣವೇ ಕೋಪ, ಆಕ್ರೋಶ ಬರುತ್ತದೆ. ಕಾಂಗ್ರೆಸ್‌ ಸರ್ಕಾರ ಐದು ವರ್ಷದಲ್ಲಿ ಜನರಿಗೆ ಐದು ಗಿಫ್ಟ್ ನೀಡಿದೆ ಎಂದು ಲೇವಡಿ ಮಾಡಿದರು.

ಯುವ ಶಕ್ತಿಯ ಪರಿಶ್ರಮದಿಂದ ಸೃಷ್ಟಿಯಾಗಿದ್ದ ಸಿಲಿಕಾನ್‌ ಸಿಟಿಯನ್ನು ಕಾಂಗ್ರೆಸ್‌ ಸರ್ಕಾರ ಪಾಪದ ಕಣಿವೆಯಾಗಿ ಪರಿವರ್ತಿಸಿದೆ. ಸಜ್ಜನ ನಾಗರಿಕರ ಫ‌ಲದಿಂದ ಗಾರ್ಡನ್‌ ಸಿಟಿಯಾಗಿದ್ದ ಬೆಂಗಳೂರನ್ನು ಗಾರ್ಬೇಜ್‌ ಸಿಟಿ ಮಾಡಿದೆ. ಐಟಿ, ಬಿಟಿ ಸಿಟಿಯನ್ನು ಅಪರಾಧಗಳ ರಾಜಧಾನಿಯಾಗಿಸಿದ್ದಾರೆ. ಉದ್ದಿಮೆಶೀಲ ಯುವ ಜನತೆಯಿಂದ ನಿರ್ಮಾಣವಾಗಿದ್ದ ಸ್ಟಾರ್ಟ್‌ಅಪ್‌ ಹಬ್‌ ಬೆಂಗಳೂರನ್ನು ಗುಂಡಿಗಳ ಕ್ಲಬ್‌ ಆಗಿ ಪರಿವರ್ತಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಗುಂಡಿ, ಟ್ರಾಫಿಕ್‌ ಸಂಕಷ್ಟ: ಬೆಂಗಳೂರಿನ ರಸ್ತೆಯಲ್ಲಿನ ಗುಂಡಿಗಳು, ಟ್ರಾಫಿಕ್‌ ಜಾಮ್‌ ಸಮಸ್ಯೆ ಜನರನ್ನು ಸಂಕಷ್ಟಕ್ಕೆ ಸಲುಕಿಸಿದೆ. ಇದು ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಬಂದಿದೆ. ಬೆಂಗಳೂರಿನ ಜನತೆಗೆ ಉತ್ತಮ ರಸ್ತೆ, ಒಳ್ಳೆಯ ಬದುಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕು. ಮೇ 12ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ ಇಲ್ಲಿನ ದುರಾಡಳಿತ, ಭ್ರಷ್ಟಾಚಾರ ಕೊನೆಗೊಳಿಸಿ, ನವ ಕರ್ನಾಟಕ ನಿರ್ಮಾಣಕ್ಕೆ ಭವಿಷ್ಯ ಬರೆಯಿರಿ ಎಂದು ಹೇಳಿದರು.

ಅಧಿಕಾರದ ಮದ: ತಮ್ಮ ಭಾಷಣದಲ್ಲಿ ಶಾಸಕ ಹ್ಯಾರಿಸ್‌ ಪುತ್ರನ ಪ್ರಕರಣ ಪರೋಕ್ಷವಾಗಿ ಪ್ರಸ್ತಾಪಿಸಿದ ಮೋದಿ, ಬೆಂಗಳೂರಿನಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ರಾಜಕೀಯ ನಾಯಕರ ಕುಮ್ಮಕ್ಕು ಇದೆ. ಕಾಂಗ್ರೆಸ್‌ ಶಾಸಕನ ಮಗ ಬೀದಿಯಲ್ಲಿ ಹೋಗಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಪರಾಧಿಯ ಪರವಾಗಿಯೇ ನಿಂತಿದೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿಬಿಎಂಪಿ ಕಚೇರಿಯೊಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ವಿಕಲಚೇತನ ವ್ಯಕ್ತಿಯೊಬ್ಬ ಸಚಿವರನ್ನು ಭೇಟಿಯಾಗಲು ಹೋಗಿದ್ದಾಗ ಲಿಫ್ಟ್ನಿಂದ ಹೊರ ಹಾಕಿದ್ದರು. ಕಾಂಗ್ರೆಸ್‌ಗೆ ಅಧಿಕಾರದ ಮದ ಎಷ್ಟಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಟೀಕಿಸಿದರು.

ಬೆಳ್ಳಂದೂರು ಕೆರೆ ನೊರೆ ಹಾಗೂ ಬೆಂಕಿ ಪ್ರಕರಣ ಪ್ರಸ್ತಾಪಿಸಿದ ಪ್ರಧಾನಿ, ಬೆಂಗಳೂರು ಕೆರೆಗಳಿಗೆ ಖ್ಯಾತಿಯಾಗಿತ್ತು. ಕಾಂಗ್ರೆಸ್‌ ಸರ್ಕಾರ ಕೆರೆಗಳ ಮಹಾನಗರವನ್ನು ಬೆಂಕಿ ಹತ್ತುವ ಕೆರೆಗಳ ನಗರವಾಗಿ ಪರಿರ್ತಿಸಿದೆ. ಬೆಳ್ಳಂದೂರು ಕೆರೆಯ ಆ ಬೆಂಕಿ ಹೊಗೆ ಮತ್ತು ಕೆಮಿಕಲ್‌, ರೂಪದಲ್ಲಿ ಹೊತ್ತಿ ಉರಿಯುತ್ತಿದೆ. ಇದು ಕಾಂಗ್ರೆಸ್‌ ದುರಾಡಳಿತಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ದೂರಿದರು.

ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಕರ್ನಾಟಕ ಸುಸಂಸ್ಕೃತರ ನಾಡು. ಇಲ್ಲಿನ ಜನರು ಸಭ್ಯರಾಗಿದ್ದು, ನೆಮ್ಮದಿಯ ಜೀವನ ನಡೆಸುತ್ತಿದ್ದರು. ಕಾಂಗ್ರೆಸ್‌ ದುರಾಡಳಿತದಿಂದ ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲದಾಗಿದೆ. ಹೊಸ ವರ್ಷದ ಆಚರಣೆಗೆ ಬೆಂಗಳೂರಿಗೆ ಬರುವವರು ಹೆದರುತ್ತಿದ್ದಾರೆ.

ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತೆಡೆಗೆ ಕೇಂದ್ರ ಸರ್ಕಾರ ಹೊಸ ಕಾಯ್ದೆಯನ್ನು ರೂಪಿಸಿದೆ. ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲಾಗುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ಬರುತ್ತಿದ್ದಂತೆ ಈ ಕಾಯ್ದೆ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಲಿದೆ ಎಂದು ಹೇಳಿದರು.

ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಪಿ.ಸಿಮೋಹನ್‌, ಯಶವಂತಪುರ ಅಭ್ಯರ್ಥಿ ಜಗ್ಗೇಶ್‌, ದಾಸರಹಳ್ಳಿಯ ಮುನಿರಾಜು, ಹೆಬ್ಟಾಳದ ವೈ.ಎ.ನಾರಾಯಣಸ್ವಾಮಿ, ರಾಜರಾಜೇಶ್ವರಿನಗರ ಕ್ಷೇತ್ರದ ತುಳಸಿಮುನಿರಾಜುಗೌಡ ಸೇರಿದಂತೆ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳು ಉಪಸ್ಥಿತರಿದ್ದರು.

ಅಧಿಕಾರಿ, ಮಂತ್ರಿಗಳ ನಡುವೆ ಭ್ರಷ್ಟಾಚಾರದ ಸ್ಪರ್ಧೆ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ, ಒಬ್ಬ ಮಂತ್ರಿಯಿಂದ ಇನ್ನೊಬ್ಬ ಮಂತ್ರಿಗೆ ಭ್ರಷ್ಟಾಚಾರದ ಸ್ಪರ್ಧೆ ನಿರ್ಮಾಣವಾಗಿದೆ. ಭ್ರಷ್ಟಾಚಾರದಲ್ಲಿ ದಾಖಲೆ ಮಾಡಲು ಸ್ಪರ್ಧೆಗೆ ನಿಂತಿದ್ದಾರೆ. ಸ್ಟೀಲ್‌ಬ್ರಿಡ್ಜ್ ಯೋಜನೆ ಜಾರಿಗೆ ಮುಂದಾಗಿದ್ದರು.

ಅದು ಕಾರ್ಯಗತವಾಗಿದ್ದರೆ ಹಣದ ಗಂಗೆ ಸಚಿವರ ಮನೆಗಳಿಗೆ ಹರಿಯುತ್ತಿತ್ತು. ಬೆಂಗಳೂರಿನ ನಾಗರಿಕರ ಹಾಗೂ ಬಿಜೆಪಿ ಕಾರ್ಯಕರ್ತರ ಹೋರಾಟದ ಫ‌ಲವಾಗಿ ಸ್ಟೀಲ್‌ ಬ್ರಿಡ್ಜ್ ಸರಕಾರ ಕೈಬಿಟ್ಟಿದ್ದು, ಇದಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್‌ನವರ ಯೋಜನೆ ಸ್ಟೀಲ್‌ (steel) ಬ್ರಿಡ್ಜ್ ಅಲ್ಲ, ಬದಲಾಗಿ ಸ್ಟಿಯಿಲ್‌ (steel) ಬ್ರಿಡ್ಜ್ ಎಂದು ವ್ಯಂಗ್ಯವಾಡಿದರು.

ಕರ್ನಾಟಕ ಉದ್ದಾರವಾಗಬೇಕು, ಅಭಿವೃದ್ಧಿಯಲ್ಲಿ ಮುಂದೆ ಸಾಗಬೇಕಾದರೆ ಭ್ರಷ್ಟಾಚಾರದಲ್ಲಿ ಬಂಗಾರದ ಪದಕ ಹಾಕಿಕೊಂಡಿರುವ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಬೇಕು. ವ್ಯಾಪಾರ ವಹಿವಾಟಿನಲ್ಲಿ ದೇಶ 42 ಸ್ಥಾನಗಳಷ್ಟು ಮುಂದೆ ಬಂದಿದೆ. ಆದರೆ, ಕರ್ನಾಟಕದ ಜನತೆಗೆ ಇದರ ಲಾಭ ಸಿಕ್ಕಿಲ್ಲ. ಇಲ್ಲಿ ವ್ಯಾಪಾರಿಗಳಿಗೆ ಸೂಕ್ತವಾದ ವ್ಯವಸ್ಥೆ ಇಲ್ಲ. ಕೊಲೆ, ಹತ್ಯೆಯಲ್ಲಿ ಕಾಂಗ್ರೆಸ್‌ ಸರ್ಕಾರ ಚಾಣಕ್ಯವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.