ಚಿಕ್ಕಮಗಳೂರಿನಲ್ಲಿ ಶಾಂತಿ ನೆಲೆಸಲು ಸಿ.ಟಿ.ರವಿ ಸೋಲಿಸಿ
Team Udayavani, May 4, 2018, 12:25 PM IST
ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸರ್ವಜನಾಂಗದ ಶಾಂತಿಯ ತೋಟವಾಗಿ ಉಳಿಯಬೇಕಾದರೆ ಕ್ಷೇತ್ರದ ಜನತೆ ಮೊದಲು ಶಾಸಕ ಸಿ.ಟಿ.ರವಿ ಅವರನ್ನು ಮನೆಗೆ ಕಳಿಸಬೇಕು ಎಂದು ಹಿರಿಯ ರಂಗಭೂಮಿ ಕಲಾವಿದ, ಕಿರುತೆರೆ ನಟ ನಾಗರಾಜ್ ಮೂರ್ತಿ ಸಲಹೆ ಮಾಡಿದರು.
ಕಡೂರು ತಾಲೂಕು ಸಖರಾಯಪಟ್ಟಣ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ| ಬಿ.ಎಲ್. ಶಂಕರ್ ಅವರೊಂದಿಗೆ ಗುರುವಾರ ಚುನಾವಣಾ ಪ್ರಚಾರ ನಡೆಸಿದರು. ಇದೇ ವೇಳೆ ವಿವಿಧ ಗ್ರಾಮಗಳಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಯುವಜನತೆ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕಾದರೆ ಬಿ.ಎಲ್.ಶಂಕರ್ ಅವರನ್ನು ಗೆಲ್ಲಿಸುವುದಕ್ಕಿಂತ ಮೊದಲು ಶಾಸಕ ಸಿ.ಟಿ.ರವಿ ಅವರನ್ನು ಸೋಲಿಸಿ ಎಂದರು.
ಶಾಸಕ ಸಿ.ಟಿ. ರವಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಕಳೆದ 15 ವರ್ಷಗಳಿಂದ ಜಾತಿ ಜಾತಿ ಮತ್ತು ಧರ್ಮ ಧರ್ಮಗಳ ನಡುವೆ ವಿಷ ಬೀಜ ಭಿತ್ತಿ ಸಂಘರ್ಷವನ್ನು ಸೃಷ್ಠಿಸುತ್ತಿದ್ದಾರೆ. ಮುಗ್ದ ಯುವ ಜನತೆಗೆ ಧರ್ಮದ ಅಫೀಮನ್ನು ಉಣಿಸುವ ಮೂಲಕ ಅವರಲ್ಲಿ ಅಸಹಿಷ್ಣುತೆಯನ್ನು ಬೆಳೆಸುತ್ತಿದ್ದಾರೆ ಇದರಿಂದಾಗಿ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಅಶಾಂತಿಯ ಬೀಡಾಗುತ್ತಿದೆ ಎಂದು ಆರೋಪಿಸಿದರು.
ಕ್ಷೇತ್ರದ ಜನತೆಗೆ ಕುಡಿಯಲು ನೀರು ಕೊಡದ ರವಿ ಅವರು ಚುನಾವಣೆಯಲ್ಲಿ ಗೆಲ್ಲಲು ಯುವ ಜನತೆಯನ್ನು ಮದ್ಯದ ದಾಸರನ್ನಾಗಿ ಮಾಡುತ್ತಿದ್ದಾರೆ. ದುಶ್ಚಟಗಳನ್ನು ಅಕ್ರಮ ದಂಧೆಗಳನ್ನು ಹೇಳಿಕೊಡುವ ಮೂಲಕ ಯುವಕರನ್ನು ಸಮಾಜ ಘಾತಕರನ್ನಾಗಿ ಬೆಳೆಸುತ್ತಿದ್ದಾರೆ ಎಂದು ದೂರಿದರು.
ಭಾವೈಕ್ಯತೆಗೆ, ಕೋಮು ಸೌರ್ಹಾದತೆಗೆ, ಶಾಂತಿಗೆ ಹೆಸರಾದ ಈ ಕ್ಷೇತ್ರ ಅಶಾಂತಿಯ ಗೂಡಾಗುವುದಕ್ಕೆ ಮುಂಚೆಯೇ ಎಚ್ಚೆತ್ತುಕೊಳ್ಳಿ ಎಂದು ಮನವಿ ಮಾಡಿದ ಅವರು, ಶಾಸಕ ಸಿ.ಟಿ.ರವಿ ಅವರನ್ನು ಮನೆಗೆ ಕಳುಹಿಸಿದರೆ ಕ್ಷೇತ್ರದ ಜನತೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.
ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಶಾಸಕ ಸಿ.ಟಿ.ರವಿ ಅವರು ಚುನಾವಣೆಯಲ್ಲಿ
ಗೆಲ್ಲಲು ವಾಮ ಮಾರ್ಗ ಅನುಸರಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಹಣದ ಹೊಳೆಯನ್ನು ಹರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಭ್ಯರ್ಥಿ ಡಾ|ಬಿ.ಎಲ್.ಶಂಕರ್ ಮಾತನಾಡಿ, ಕಳೆದ 15 ವರ್ಷಗಳ ಅವಧಿಯಲ್ಲಿ ಕ್ಷೇತ್ರ ಅಭಿವೃದ್ದಿಯಾಗಿಲ್ಲ. ಆದರೆ ಶಾಸಕ ಸಿ.ಟಿ.ರವಿ ಮತ್ತು ಅವರ ಹಿಂಬಾಲಕರು ಮಾತ್ರ ಉದ್ಧಾರವಾಗಿದ್ದಾರೆ. ಶಾಸಕ ಸಿ.ಟಿ.ರವಿಯವರ ದುರಾಡಳಿತ ಕೊನೆಗಾಣಿಸಿ ಪ್ರಗತಿಗಾಗಿ ತಮ್ಮನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಪಕ್ಷದ ಮುಖಂಡರಾದ ರವೀಶ್ ಬಸಪ್ಪ, ಮಹಡಿಮನೆ ಸತೀಶ್, ನಟರಾಜ್ ಎಸ್. ಕೊಪ್ಪಲು, ಹೇಮಾವತಿ, ರೇಣುಕಾಮೂರ್ತಿ, ಅಶೋಕ್, ಎನ್.ಡಿ. ಚಂದ್ರಪ್ಪ, ಎಸ್.ಎನ್. ಮಂಜುನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.