ಬಿಳಿಕೆರೆ ಭಾಗದ ಕೆರೆಗಳಿಗೆ ನೀರು

Team Udayavani, May 5, 2018, 12:31 PM IST

m2-bilikere.jpg

ಹುಣಸೂರು: ಹುಣಸೂರು ತಾಲೂಕಿನ ಹೋಬಳಿ ಕೇಂದ್ರವಾದ ಬಿಳಿಕೆರೆಯಲ್ಲಿ ಶಾಸಕ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್‌ ರೋಡ್‌ ಶೋ ನಡೆಸಿ ಮತಯಾಚಿಸಿದರು. ಗ್ರಾಮದ ಕೆರೆ ಬಳಿಯ ಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ  ರೋಡ್‌ ಶೋ ಮೂಲಕ ಮುಖ್ಯಬೀದಿ, ವಿಶ್ವಕರ್ಮ ಸಮುದಾಯದ ಬೀದಿ ಸೇರಿದಂತೆ ವಿವಿಧೆಡೆ ಮೆರವಣಿಗೆ ನಡೆಸಿದರು.

ಶಾಸಕರು ತಮ್ಮ ಅವಧಿಯಲ್ಲಿ ಬಿಳಿಕೆರೆ ಭಾಗಕ್ಕೆ ಕೆರೆಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಮಾಡಿರುವ ಆತ್ಮ ತೃಪ್ತಿ ಇದೆ. ಸದಾ ಬರಗಾಲದ ಬೀಡೆಂದೇ ಕರೆಯುತ್ತಿದ್ದ ಈ ಭಾಗದ ಪ್ರಮುಖ ಬಿಳಿಕೆರೆ, ಜೀನಹಳ್ಳಿ ಕೆರೆಗಳಿಗೆ ಕಳೆದ 40 ವರ್ಷಗಳಿಂದ ನೀರು ತುಂಬಿರಲಿಲ್ಲ, ಈ ಕೆರೆಗಳಿಗೆ ಹೊಸರಾಮನಹಳ್ಳಿ ಏತ ನೀರಾವರಿ ಮೂಲಕ ನೀರು ತುಂಬಿಸಿದ್ದು, ಸುತ್ತ ಮುತ್ತಲ ಪ್ರದೇಶಗಳಲ್ಲಿ ಅಂತರ್ಜಲ ವೃದ್ಧಿಸಿದೆ ಎಂದರು.

ನಾಲ್ಕು ಕೆರೆಗಳಿಗೆ ನೀರು: ಮರದೂರು ಮತ್ತು ಕಿರಿಜಾಜಿಯಿಂದ ಏತ ನೀರಾವರಿ ಮೂಲಕ ಸೋಮನಹಳ್ಳಿ, ಮೂಕನಹಳ್ಳಿ ಭಾಗದ ನಾಲ್ಕು ಕೆರೆಗಳಿಗೆ ನೀರು ತುಂಬಿಸಲಾಗಿದೆ. ಆಯರಹಳ್ಳಿ ಬಳಿ ಹಿನ್ನೀರಿಗೆ ಅಣೆಕಟ್ಟೆ ನಿರ್ಮಿಸಲಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ ಬಿಳಿಕೆರೆಯಲ್ಲಿ ನೆನಗುದಿಗೆ ಬಿದ್ದಿದ್ದ ಬಸ್‌ ನಿಲ್ದಾಣ ನಿರ್ಮಾಣ, ಗ್ರಾಮದೊಳಗಿನ ಎಲ್ಲ ರಸ್ತೆ ಅಭಿವೃದ್ಧಿಗೊಳಿಸಲಾಗಿದೆ. ಕಳೆದ 18 ವರ್ಷಗಳಿಂದ ನಿಂತು ಹೋಗಿದ್ದ ಬನ್ನಿಕುಪ್ಪೆಯ ಬನ್ನಂತಮ್ಮ ಜಾತ್ರೆ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿ ಸ್ಥಗಿತಗೊಂಡಿದ್ದ ಜಾತ್ರೆಗಳನ್ನು ಪುನರಾರಂಭಿಸಲು ಶ್ರಮ ಹಾಕಿದ್ದೇನೆ ಎಂದರು.

ಅಭಿವೃದ್ಧಿ ಕನಸು: ತಾಲೂಕಿನಲ್ಲಿ ಶಿಥಿಲಗೊಂಡಿದ್ದ ಸುಮಾರು 200ಕ್ಕೂ ಹೆಚ್ಚು ದೇವಾಲಯಗಳ ಜೀಣೋದ್ಧಾರಕ್ಕೆ ನೆರವಾಗಿದ್ದೇನೆ. ತಾಲೂಕಿನ ಸಮಗ್ರ ಅಭಿವೃದ್ಧಿಯೇ ತಮ್ಮ ಕನಸಾಗಿತ್ತು. ಮತ್ತಷ್ಟು ಅಭಿವೃದ್ಧಿಗೊಳಿಸುವ ಆಶಾಭಾವನೆ ಹೊಂದಿದ್ದೇನೆ. ನಿಮ್ಮ ಭಾಗದಲ್ಲಿ ಕೆಲಸ ಮಾಡಿರುವುದನ್ನು ಗುರುತಿಸಿ, ನನ್ನ ಗೆಲುವನ್ನು ಶ್ರೀಕಾರಗೊಳಿಸಿರೆಂದು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಮಂಜು ಮಾತನಾಡಿ, ಜೆಡಿಎಸ್‌ನಲ್ಲಿದ್ದ ಚಿಕ್ಕಮಾದು ಪುತ್ರ ಅನಿಲ್‌ಗೆ ನಂಬಿಸಿ ಜೆಡಿಎಸ್‌ನವರು ಟಿಕೆಟ್‌ ನೀಡದೆ ವಂಚಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಮಂಜುನಾಥ್‌ ಪಕ್ಷಕ್ಕೆ ಕರೆತಂದು ಟಿಕೆಟ್‌ ನೀಡಿ ಆಶ್ರಯ ಕಲ್ಪಿಸಿದ್ದಾರೆ ಎಂದು ಹೇಳಿದರು.

 ಜಿಪಂ ಮಾಜಿ ಸದಸ್ಯ ಬಿಳಿಕೆರೆ ಮಂಜು ಮಾತನಾಡಿ, ಬರಗಾಲದ ಬೀಡಾಗಿದ್ದ ಈ ಭಾಗಕ್ಕೆ ನೀರು ಕಲ್ಪಿಸಿದ ಶಾಸಕರು ಆಧುನಿಕ ಭಗೀರಥರಾಗಿದ್ದು, ಜನತೆ ಒಮ್ಮತದಿಂದ ಮತ ಹಾಕುವ ನಿರ್ಣಯ ಕೈಗೊಳ್ಳುವಂತೆ ಮನವಿ ಮಾಡಿದರು.

ಮುಖಂಡರಾದ ಡೇರಿ ರಾಮಕೃಷ್ಣೇಗೌಡ, ಹಂದನಹಳ್ಳಿ ಸೋಮಶೇಖರ್‌, ರಾಜೇಶ್‌, ತಾಪಂ ಮಾಜಿ ಸದಸ್ಯ ಮಹದೇವ್‌ ಮಾತನಾಡಿದರು. ಶೇಖರೇಗೌಡ, ಲೋಕೇಶ್‌ವಿಶ್ವಕರ್ಮ, ಬಾಬು, ಆರ್‌.ರಾಜೇಶ್‌, ಬೈರನಾಯ್ಕ, ಕರಿಯಯ್ಯ, ಸುಬ್ಬಣ್ಣ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

15-

Hunsur: ಹಾಡಹಗಲೇ ಹಸುವಿನ ಮೇಲೆ ದಾಳಿ ಮಾಡಿದ ಹುಲಿ; ಭಯಭೀತರಾದ ಕೃಷಿಕರು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.