ಕಾಂಗ್ರೆಸ್‌-ಜೆಡಿಎಸ್‌ ಒಳ ಒಪ್ಪಂದ: ಆರೋಪ


Team Udayavani, May 6, 2018, 6:00 AM IST

180505kpn74.jpg

ರಾಜ್ಯದಲ್ಲಿ ಈ ಬಾರಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿ, ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದೆ. ಗದಗ, ತುಮಕೂರು, ಶಿವಮೊಗ್ಗ, ಮಂಗಳೂರಿನಲ್ಲಿ ಶನಿವಾರ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದರು. ಇದೇ ವೇಳೆ, ಮೈಸೂರು ಜಿಲ್ಲೆಯ ಹಲವೆಡೆ ಭರ್ಜರಿ ರೋಡ್‌ ಶೋ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ಈ ಮಧ್ಯೆ, ಕೇಂದ್ರ ಸಚಿವೆ ಸ್ಮತಿ ಇರಾನಿ ಹರಿಹರದಲ್ಲಿ ರೋಡ್‌ ಶೋ ನಡೆಸಿದರೆ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು ಸೇಡಂನಲ್ಲಿ ಬೃಹತ್‌ ಸಮಾವೇಶ ನಡೆಸಿ, ಮತದಾರರ ಒಲವು ಗಳಿಸಲು ಯತ್ನಿಸಿದರು.

ಶಿವಮೊಗ್ಗ/ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಹಸ್ಯ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಪ್ರಚಾರ ಭಾಷಣ ಮಾಡಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿರುದ್ಧ ಹರಿಹಾಯ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಹಸ್ಯ ಒಪ್ಪಂದ ಮಾಡಿಕೊಂಡಿವೆ. ಇದಕ್ಕೆ ಬಿಬಿಎಂಪಿಯಲ್ಲಿ ನಡೆದಿರುವ ಮೈತ್ರಿಯೇ ಸಾಕ್ಷಿ. ಅದೇ ರೀತಿಯಲ್ಲಿ ತುಮಕೂರು ಪಾಲಿಕೆಯಲ್ಲಿ ಕೂಡ ಕಾಂಗ್ರೆಸ್‌ನೊಂದಿಗೆ ಜೆಡಿಎಸ್‌ ಒಪ್ಪಂದ ಮಾಡಿಕೊಂಡಿದೆ ಎಂದರು.

ಎಲ್ಲಾ ಸಮೀಕ್ಷೆಗಳು ಜೆಡಿಎಸ್‌ ಮೂರನೇ ಸ್ಥಾನದಲ್ಲಿದೆ ಎಂದು ಹೇಳುತ್ತಿವೆ. ಆದರೂ, ಜೆಡಿಎಸ್‌ ಅಧಿಕಾರ ಹಿಡಿಯುವ ಹಗಲು ಕನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು. 2014ರ ಲೋಕಸಭಾ ಚುನಾವಣೆ ವೇಳೆ ನರೇಂದ್ರ ಮೋದಿ ಪ್ರಧಾನಿಯಾದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಎಚ್‌.ಡಿ. ದೇವೇಗೌಡರು ಹೇಳಿಕೆ ನೀಡಿದ್ದರು. ನಾನು ಪ್ರಧಾನಿಯಾದ ನಂತರ ದೇವೇಗೌಡರನ್ನು ಭೇಟಿಯಾಗಿ ನೀವು ಆತ್ಮಹತ್ಯೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ನೀವು ನೂರಾRಲ ಬದುಕಬೇಕು ಎಂದು ಕೇಳಿಕೊಂಡಿದ್ದೆ. ಆದರೆ, ಇಂದು ಅವರು ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದರು.ಬಳಿಕ ಶಿವಮೊಗ್ಗದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ಮತ್ತು ಕರಪ್ಷನ್‌ ಎರಡೂ ಶಬ್ದಗಳ ಮೊದಲ ಅಕ್ಷರ “ಸಿ’ ಆಗಿದ್ದು, ಈ ಎರಡೂ ಪದಗಳ ನಡುವಿನ ಅಂತರವನ್ನು ಕಾಂಗ್ರೆಸ್‌ ನಾಯಕರು ಎನಿಸಿಕೊಂಡವರು ಕಡಿಮೆ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಯಡಿಯೂರಪ್ಪನವರ ಹಿರಿತನ, ಹೋರಾಟದ ಬದುಕು ಗಮನಿಸದೆ ಕಾಂಗ್ರೆಸ್‌ನ ಚಿಕ್ಕಪುಟ್ಟ ನಾಯಕರೂ ವ್ಯಂಗ್ಯವಾಡಿ ಮಾತನಾಡುತ್ತಿದ್ದಾರೆ. ಅವರು ದಲಿತರು, ಬಡವರ ಮನೆಗಳಲ್ಲಿ ಉಳಿದುಕೊಳ್ಳುತ್ತಿರುವುದಕ್ಕೂ ತಮಾಷೆ ಮಾಡುತ್ತಿದ್ದಾರೆ. ಇದು ಯಡಿಯೂರಪ್ಪ ಅವರಿಗಲ್ಲ, ಬಡವರಿಗೆ ಮಾಡಿದ ಅವಮಾನ.
– ನರೇಂದ್ರ ಮೋದಿ, ಪ್ರಧಾನಿ

ಮೈಸೂರಲ್ಲಿ  ಶಾ ಬೃಹತ್‌ ರೋಡ್‌ ಶೋ
ಮೈಸೂರು:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಶನಿವಾರ ಮೈಸೂರಿನ ವರುಣಾ, ಪಿರಿಯಾಪಟ್ಟಣ ಹಾಗೂ ತಿ.ನರಸೀಪುರಗಳಲ್ಲಿ ಬೃಹತ್‌ ರೋಡ್‌ ಶೋ ನಡೆಸಿ, ಬಿಜೆಪಿ ಪರ ಮತಯಾಚಿಸಿದರು. ಪಿರಿಯಾಪಟ್ಟಣದ ಮುಖ್ಯರಸ್ತೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಮಂಜುನಾಥ್‌ ಪರ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದ ಶಾ, ಮತದಾರರು ಬಿಜೆಪಿಯನ್ನು ಬೆಂಬಲಿಸಿ ಮತ ಹಾಕಬೇಕು ಎಂದು ಮನವಿ ಮಾಡಿದರು. ಬಳಿಕ, ತಿ.ನರಸೀಪುರದ ತಿರಮಕೂಡಲಿನಿಂದ ವಿದ್ಯೋದಯ ಕಾಲೇಜು ವೃತ್ತದವರೆಗೆ ವರುಣಾ ಕ್ಷೇತ್ರದ ಅಭ್ಯರ್ಥಿ ತೋಟದಪ್ಪ ಬಸವರಾಜು ಹಾಗೂ ತಿ.ನರಸೀಪುರ ಕ್ಷೇತ್ರದ ಅಭ್ಯರ್ಥಿ ಎಸ್‌. ಶಂಕರ್‌ ಪರ ರೋಡ್‌ ಶೋ ನಡೆಸಿದರು.

ಬಿಜೆಪಿ ಬಂದ್ರೆ ಸಂದರ್ಶನ ಪದ್ಧತಿ ರದ್ದು
ಕಲಬುರಗಿ:
ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುವ ಸಿಇಟಿ ಪರೀಕ್ಷೆ ಫಲಿತಾಂಶವೇ ಅಂತಿಮವಾಗಿದ್ದು, ತದನಂತರ ನಡೆಸಲಾಗುವ ಸಂದರ್ಶನ ಪದ್ಧತಿಯನ್ನು ಬಿಜೆಪಿ ಸರ್ಕಾರ ಬಂದರೆ ರದ್ದುಪಡಿಸಲಾಗುವುದು ಎಂದು ಕೇಂದ್ರ ಸಚಿವ ರಾಜನಾಥ್‌ಸಿಂಗ್‌ ಹೇಳಿದರು. ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ ಪರ ಮತಯಾಚಿಸಿದ ಅವರು, ಸಂದರ್ಶನದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸ್ಪರ್ಧಾತ್ಮಕ ಫಲಿತಾಂಶ ಪಟ್ಟಿ ಪ್ರಕಟಿಸಿ ಅದರ ಆಧಾರದ ಮೇಲೆ ನೇಮಕಾತಿ ಆದೇಶ ನೀಡಿದರೆ ಭ್ರಷ್ಟಾಚಾರಕ್ಕೆ ಅವಕಾಶ ಇರೋದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.