ಸವಣೂರು: ವಿದ್ಯುತ್ ಲೈನ್‌ಗೆ ಅಪಾಯಕಾರಿಯಾಗಿದ್ದ ಕೊಂಬೆಗಳ ತೆರವು
Team Udayavani, May 6, 2018, 2:55 PM IST
ಸವಣೂರು: ಮೆಸ್ಕಾಂ ಸವಣೂರು ಶಾಖೆ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗಳಿಗೆ ಸಮಸ್ಯೆಯಾಗಿ ಕಂಡುಬರುತ್ತಿದ್ದ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ 15 ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ.
ಉತ್ತಮ ಗುಣಮಟ್ಟದ ವಿದ್ಯುತ್ತನ್ನು ಗ್ರಾಹಕರಿಗೆ ಪೂರೈಸುವ ನಿಟ್ಟಿನಲ್ಲಿ ಮತ್ತು ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗುತ್ತಿದ್ದ ಹಿನ್ನೆಲೆಯಲ್ಲಿ ಸವಣೂರು ಮೆಸ್ಕಾಂ ಶಾಖೆಯ ನೂತನ ಜೆಇ ನಾಗರಾಜ್ ಕೊಂಬೆಗಳನ್ನು ತೆರವರುಗೊಳಿಸುವ ನಿಟ್ಟಿನಲ್ಲಿ ತಮ್ಮ ಸಿಬಂದಿ ವರ್ಗದೊಂದಿಗೆ ಕಾರ್ಯಪ್ರವೃತ್ತರಾಗಿದ್ದಾರೆ. ಕಾಣಿಯೂರು, ಬೆಳಂದೂರು, ಸವಣೂರು ಗ್ರಾ.ಪಂ.ಗಳ ವ್ಯಾಪ್ತಿಯ ಬಹುತೇಕ ಎಲ್ಲ ಗ್ರಾಮಗಳಿಗೂ ಸವಣೂರು ಸಬ್ ಸ್ಟೇಷನ್‌ನಿಂದ ವಿದ್ಯುತ್ ಸರಬರಾಜಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ತಂತಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದ್ದ ಮರದ ಕೊಂಬೆ, ಪೊದೆಗಳನ್ನು ತೆರವುಗೊಳಿಸಲಾಗುತ್ತಿದೆ.
ನೂತನ ಜೆಇ ನಾಗರಾಜ್ ಅವರು ಸವಣೂರು ಸಬ್ ಸ್ಟೇಷನ್ ಗೆ ವರ್ಗಾವಣೆಯಾಗಿ ಬಂದ ಬಳಿಕ ವಿದ್ಯುತ್ ಗುಣಮಟ್ಟ ಸುಧಾರಿಸಿದೆ ಮತ್ತು ಗ್ರಾಹಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದನೆ ದೊರೆಯುತ್ತಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಂತಿಗಳಿಗೆ ಮರದ ಗೆಲ್ಲುಗಳು ತಾಗಿಕೊಂಡಿದ್ದಲ್ಲಿ ಲೈನ್‌ಮನ್‌ಗಳ ಗಮನಕ್ಕೆ ತರುವಂತೆ ಜೆಇ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.