ಪೊಲೀಸರೆಂದು ವಂಚಿಸುತ್ತಿದ್ದವರ ಸೆರೆ
Team Udayavani, May 6, 2018, 4:34 PM IST
ತಿಪಟೂರು: ಪೊಲೀಸರು, ಲೋಕಾಯುಕ್ತರು, ಅಬಕಾರಿ ಅಧಿಕಾರಿಗಳು ಎಂದು ಹೇಳಿಕೊಂಡು ಉದ್ಯಮಿಗಳನ್ನು ಹಾಗೂ ಸಾರ್ವಜನಿಕರನ್ನು ವಂಚಿಸುತ್ತಿದ್ದ ತಾಲೂಕಿನ ಯುವಕರ ತಂಡವನ್ನು ಗ್ರಾಮಾಂತರ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ತಾಲೂಕಿನ ಹುಚ್ಚನಹಟ್ಟಿಯಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಘಟನೆ ನಡೆದಿದೆ. ಸುಳ್ಳು ಹೇಳಿಕೊಂಡು ಬಂದಿದ್ದ ಯುವಕರಾದ ನಗರದ ಗಾಂಧಿನಗರದ ವಾಸಿ ಪುನೀತ್, ನವೀದ್, ನವೀನ್, ಹಿಪ್ಪೆತೋಪು ವಾಸಿ ಮಂಜುನಾಥ್ ಎಂಬುವವರ ತಂಡ ಗ್ರಾಮಕ್ಕೆ ಭೇಟಿ ನೀಡಿ, ನಾವು ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದೀರಿ ಎಂದು ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ.
ಅಲ್ಲದೆ ನಮಗೆ ಹಣ ನೀಡಿದರೆ ನಿಮ್ಮ ಮೇಲೆ ಕೇಸ್ ದಾಖಲಿಸುವುದಿಲ್ಲ ಎಂಬ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೃಷ್ಣರಾಜು ಯುವಕರ ತಂಡವನ್ನು ಪರಿಶೀಲಿಸಿ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಈ ಆರೋಪಿಗಳು ತಾಲೂಕಿನ ಹಲವಾರು ಕಡೆಗಳಲ್ಲಿ ನಕಲಿ ದಾಳಿ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.