ಕರೆಮ್ಮ ಗೆಲುವಿಗೆ ಉಡಿ ತುಂಬಿ ಹಾರೈಕೆ
Team Udayavani, May 7, 2018, 12:49 PM IST
ದೇವದುರ್ಗ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿದ ಘಟಾನುಘಟಿಗಳಿಗೆ ಪಕ್ಷೇತರ ಅಭ್ಯರ್ಥಿ ಕರೆಮ್ಮ ಜಿ. ಗೋಪಾಲಕೃಷ್ಣ ನಾಯಕ ತೀವ್ರ ಪೈಪೋಟಿ ನೀಡುವ ಲಕ್ಷಣಗಳು ಗೋಚರಿಸುತ್ತಿವೆ.
ಕರೆಮ್ಮ ಅವರು ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಮತಯಾಚನೆಗೆ ಹೋದಾಗ ಗ್ರಾಮಸ್ಥರು, ಮಹಿಳೆಯರು ಸ್ವಾಗತಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಮಹಿಳೆಯರು ಕರೆಮ್ಮ ಅವರಿಗೆ ಉಡಿ ತುಂಬಿ ಚುನಾವಣಾ ವೆಚ್ಚಕ್ಕೆ ಹಣ ನೀಡಿ ಗೆಲುವಿಗೆ ಹಾರೈಸಿ ಕಳುಹಿಸುತ್ತಿದ್ದು, ನಿಮ್ಮ ಬೆನ್ನಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.
ಮೊದಲು ಜೆಡಿಎಸ್ ಟಿಕೆಟ್ ನೀಡುವುದಾಗಿ ಹೇಳಿದ್ದರಿಂದ ಕರೆಮ್ಮ ಅವರು ಕ್ಷೇತ್ರದಾದ್ಯಂತ ಸಂಚರಿಸಿ ಪಕ್ಷ ಸಂಘಟಿಸಿದ್ದರು. ಆದರೆ ಜೆಡಿಎಸ್ ಚುನಾವಣೆ ಸಮಯದಲ್ಲಿ ಕೈಕೊಟ್ಟಿದ್ದರಿಂದ ಕರೆಮ್ಮ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಜೆಡಿಎಸ್ ಟಿಕೆಟ್ ಕೊಡದೇ ವಂಚಿಸಿರುವುದು ಮತ್ತು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರೂ ಪಕ್ಷಗಳು ಒಂದೇ ಕುಟುಂಬದವರಿಗೆ ಮಣೆ ಹಾಕಿರುವುದು ಈ ಬಾರಿ ಕ್ಷೇತ್ರದಲ್ಲಿ ಕರೆಮ್ಮ ಅವರ ಪರ ಅಲೆ ಏಳಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಹಿರೇಬೂದೂರು, ಮಸರಕಲ್, ಮಶಿಹಾಳ, ಗಲಗ, ಗಾಣಧಾಳ, ಗಣಿಜಿಲಿ, ಪಿಲಿಗುಂಡ, ಕರಿಗುಡ್ಡ, ಸೋಮನಮರಡಿ, ಕಕ್ಕಲದೊಡ್ಡಿ ಸೇರಿ ಇತರೆ ಗ್ರಾಮಗಳಲ್ಲಿ ಮತದಾರರು ಸ್ವಯಂ ಪ್ರೇರಿತವಾಗಿ ಕರೆಮ್ಮ ಅವರಿಗೆ ಉಡಿ ತುಂಬಿ ಚುನಾವಣಾ ಖರ್ಚಿಗೆ ಸಾವಿರಾರು ರೂ. ದೇಣಿಗೆ ನೀಡುತ್ತಿದ್ದು, ಇದು ದೇವದುರ್ಗ ರಾಜಕೀಯ ಇತಿಹಾಸದಲ್ಲೇ ಪ್ರಥಮವಾಗಿದೆ ಎಂಬುದು ಸಾರ್ವಜನಿಕರ ಅಂಬೋಣವಾಗಿದೆ.
ಪುತ್ರ-ಪುತ್ರಿ ಸಾಥ್: ಕರೆಮ್ಮ ಜಿ. ಗೋಪಾಲಕೃಷ್ಣ ಅವರ ಮತಯಾಚನೆಗೆ ಪುತ್ರ, ಪುತ್ರಿ ಸಾಥ್ ನೀಡುತ್ತಿದ್ದಾರೆ. ಕರೆಮ್ಮ ಅವರು ಹೋದಲ್ಲೆಲ್ಲ ಮಕ್ಕಳ ಮೇಲೆ ಪ್ರಮಾಣ ಮಾಡಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳುತ್ತಿದ್ದಾರೆ.
ಇದು ಸ್ಪರ್ಧಾ ಕಣದಲ್ಲಿರುವ ಕಾಂಗ್ರೆಸ್‌ನ ಎ. ರಾಜಶೇಖರ ನಾಯಕ, ಬಿಜೆಪಿಯ ಶಾಸಕ ಕೆ. ಶಿವನಗೌಡ ನಾಯಕ, ಜೆಡಿಎಸ್‌ನ ವೆಂಕಟೇಶ ಪೂಜಾರಿ ಅವರ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಕೂಡಾ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಗೆಲುವಿಗಾಗಿ ಪ್ರಯತ್ನ ನಡೆಸಿದ್ದಾರೆ. ಮತದಾನಕ್ಕೆ ಇನ್ನೂ ಆರು ದಿನ ಬಾಕಿ ಇದ್ದು ಮತದಾರರ ಒಲವು ಯಾರತ್ತ ಹೊರಳಲಿದೆ ಎಂದು ಕಾದು ನೋಡಬೇಕಿ¨
ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.