ಪದ್ಮನಾಭನಗರದಲ್ಲಿ ಗುರು-ಶಿಷ್ಯರ ಕಾಳಗ
Team Udayavani, May 7, 2018, 2:16 PM IST
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಸ್ಪರ್ಧೆ ಮಾಡಿರುವ ಪದ್ಮನಾಭನಗರದಲ್ಲಿ “ಗುರು-ಶಿಷ್ಯರ ‘ಕಾಳಗ ಎಂದೇ ಬಿಂಬಿತವಾಗಿದ್ದು ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ಕಸರತ್ತು ನಡೆಸಿವೆ.
ಪದ್ಮನಾಭನಗರದಲ್ಲಿ ಹ್ಯಾಟ್ರಿಕ್ ಗೆಲುವಿಗಾಗಿ ಆರ್.ಅಶೋಕ್ ಬಿಜೆಪಿ ಮುಖಂಡರ ದಂಡಿನೊಂದಿಗೆ ಪ್ರಚಾರ ನಡೆಸಿದ್ದಾರೆ. ಜೆಡಿಎಸ್‌ನ ವಿ.ಕೆ.ಗೋಪಾಲ್ ಸಹ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕೊನೆಯ ಘಳಿಗೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದ ಹಿರಿಯ ಮುಖಂಡ ಎಂ.ಶ್ರೀನಿವಾಸ್ ಈಗಷ್ಟೇ ಮತದಾರರನ್ನು ಸೆಳೆಯಲು ಬೆವರು ಹರಿಸಲಾರಂಭಿಸಿದ್ದಾರೆ.ಮೂವರು ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಕಾಣುತ್ತಿದೆ.
ಕಳೆದ ಚುನಾವಣೆಯಲ್ಲಿ ಅಶೋಕ್ ಅವರು 53,680 ಮತ ಪಡೆದಿದ್ದರೆ, ಕಾಂಗ್ರೆಸ್‌ನ ಎಲ್.ಎಸ್.ಚೇತನ್‌ಗೌಡ 33,557 ಮತ ಗಳಿಸಿ ಪೈಪೋಟಿ ನೀಡಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಡಾ.ಎಂ.ಆರ್.ವಿ.ಪ್ರಸಾದ್ 26,272 ಮತ ಪಡೆದಿದ್ದರು. ಈ ಬಾರಿ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳ ಜತೆಗೆ ಎಂಇಪಿ ಸೇರಿದಂತೆ 8 ಮಂದಿ ಪಕ್ಷೇತರರು ಸ್ಪರ್ಧಿಸಿದ್ದು, 14 ಮಂದಿ ಕಣದಲ್ಲಿದ್ದಾರೆ.
ಹಿಂದುಳಿದ ವರ್ಗ ನಿರ್ಣಾಯಕ: ಪದ್ಮನಾಭನಗರ ಕ್ಷೇತ್ರದಲ್ಲಿ ಒಕ್ಕಲಿಗರು ಹಾಗೂ ಮುಸ್ಲಿಮರು ಸರಿಸುಮಾರು ತಲಾ 40,000 ಮಂದಿಯಿದ್ದು, ಬ್ರಾಹ್ಮಣ ಸಮುದಾಯದ 35,000 ಮಂದಿಯಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ 15,000 ಮಂದಿಯಿದ್ದರೆ, ಹಿಂದುಳಿದ ವರ್ಗದ ಮತದಾರರು 40,000ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಲಿಂಗಾಯಿತರು 8000, ನಾಯ್ದು ಸಮುದಾಯದವರು 22,000, ಕುರುಬ ಸಮಾಜದವರು 15,000, ಮಾರ್ವಾಡಿಗಳು 6000 ಮಂದಿಯಿದ್ದಾರೆ ಎಂಬ ಅಂದಾಜು ಇದೆ.
ಬಿಜೆಪಿ ಭದ್ರಕೋಟೆ: ಕ್ಷೇತ್ರದ ಎಂಟು ವಾರ್ಡ್‌ಗಳ ಪೈಕಿ ಪದ್ಮನಾಭನಗರ, ಯಡಿಯೂರು, ಚಿಕ್ಕಕಲ್ಲಸಂದ್ರ, ಗಣೇಶ ಮಂದಿರ, ಕುಮಾರಸ್ವಾಮಿ ಲೇಔಟ್, ಕರಿಸಂದ್ರ, ಹೊಸಕೆರೆಹಳ್ಳಿ ವಾರ್ಡ್‌ನಲ್ಲಿ ಬಿಜೆಪಿ ಸದಸ್ಯರಿದ್ದಾರೆ. ಬನಶಂಕರಿ ದೇವಸ್ಥಾನ ವಾರ್ಡ್‌ನಲ್ಲಷ್ಟೇ ಕಾಂಗ್ರೆಸ್ ಸದಸ್ಯರಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಮತಗಟ್ಟೆ ಮಟ್ಟದಲ್ಲಿ ಬಿಜೆಪಿ ಸಂಘಟನೆ ಉತ್ತಮವಾಗಿದೆ.
ಬ್ರಾಹ್ಮಣ ಸಮುದಾಯದ ಜತೆಗೆ ಒಕ್ಕಲಿಗ ಮತದಾರರನ್ನು ನೆಚ್ಚಿಕೊಂಡಿರುವ ಅಶೋಕ್, ನಾಯ್ಡು ಸಮುದಾಯ ಸೇರಿದಂತೆ ಇತರೆ ಸಮಾಜದವರ ಬೆಂಬಲ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದ ಎನ್.ಆರ್.ರಮೇಶ್ ಇಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
ಕ್ಷೇತ್ರದಲ್ಲಿ ಜೆಡಿಎಸ್‌ನ ಒಬ್ಬ ಕಾರ್ಪೊರೇಟರ್ ಸಹ ಇಲ್ಲದ ಕಾರಣ ಆರು ತಿಂಗಳಿನಿಂದಲೇ ಮತದಾರರನ್ನು ಸೆಳೆಯುವ ಕಾರ್ಯದಲ್ಲಿ ಗೋಪಾಲ್ ತೊಡಗಿಸಿಕೊಂಡಿದ್ದಾರೆ. ಮೊದಲಿಗೆ ತಮ್ಮದೇ ನಾಯ್ಡು ಸಮುದಾಯದವರನ್ನು ಒಲಿಸಿಕೊಳ್ಳುವ ಜತೆಗೆ ಒಕ್ಕಲಿಗರನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ವರ್ಚಸ್ಸನ್ನು ಬಳಸಿಕೊಂಡು ಹಲವು ಸುತ್ತಿನ ಪ್ರಚಾರ ಮುಗಿಸಿರುವ ಗೋಪಾಲ್ ಇನ್ನಷ್ಟು ಬಿರುಸಿನ ಪ್ರಚಾರಕ್ಕೆ ಮುಂದಾಗಿದ್ದಾರೆ.
ಡಾ.ಬಿ.ಗುರಪ್ಪನಾಯ್ಡು ಅವರು ಪಕ್ಷದ “ಬಿ’ ಫಾರಂ ನೀಡಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್ ಎಂ.ಶ್ರೀನಿವಾಸ್ ಅವರಿಗೆ “ಸಿ’ ಫಾರಂ ನೀಡಿ ಕಣಕ್ಕಿಳಿಸಿರುವುದು ಗೊಂದಲಕ್ಕೆ ಕಾರಣವಾಗಿತ್ತು. ಇದು ನಾಯ್ಡು ಸಮುದಾಯದವರ ಅಸಮಾಧಾನಕ್ಕೂ ಕಾರಣವಾಗಿದೆ. ಶ್ರೀನಿವಾಸ್ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ನೆಲೆಗಳನ್ನು ಗುರುತಿಸಿ ಬಲಪಡಿಸುವ ಕಾರ್ಯಕ್ಕೆ ಆದ್ಯತೆ ನೀಡಿದ್ದಾರೆ.
ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್, ಕಳೆದ ಬಾರಿ ಸೋತಿದ್ದ ಚೇತನ್‌ಗೌಡ ಜತೆಗೆ ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್ ಮುಖಂಡರನ್ನು ಸಂಘಟಿಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಸಾಂಪ್ರದಾಯಿಕ ಮತಗಳ ಜತೆಗೆ ಇತರೆ ವರ್ಗದವರನ್ನು ಸೆಳೆಯುವ ಕಾರ್ಯವೂ ಬಿರುಸಾಗಿ ನಡೆದಿದೆ.
* ಎಂ.ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.