ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ
Team Udayavani, May 7, 2018, 2:49 PM IST
ಹುಣಸೂರು: ಮತದಾನ ಜಾಗೃತಿಗಾಗಿ ಸ್ವೀಪ್ ಸಮಿತಿ ಪ್ರಜಾಪ್ರಭುತ್ವ ಸಬಲೀಕರಣ ಅಭಿಯಾನದಡಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಹುಣಸೂರು ತಾಪಂ ಕಚೇರಿ ಹೊರಾವರಣದಲ್ಲಿ ದಿಶಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿದ್ದ ಸ್ಪರ್ಧೆಯಲ್ಲಿ 42 ಮಹಿಳೆಯರು ಭಾಗವಹಿಸಿ ಬಣ್ಣ-ಬಣ್ಣದ ರಂಗೋಲಿ ಬಿಡಿಸಿದರು. ಉತ್ತಮ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು.
ಪ್ರಮಾಣ ಸ್ವೀಕಾರ: ಇದೇ ಸಂದರ್ಭದಲ್ಲಿ ಸೇವಾ ಮನೋಭಾವವಿರುವ, ಸರ್ವರ ಕ್ಷೇಮಾಭಿವೃದ್ಧಿ ಅಭ್ಯರ್ಥಿಗೆ ಆಸೆ ಆಮಿಷಗಳಿಗೆ ಬಲಿಯಾಗದೆ ಕಡ್ಡಾಯವಾಗಿ ಮತ ಚಲಾಯಿಸುತ್ತೇವೆಂದು ಮಹಿಳೆಯರು ಹಾಗೂ ತಾಪಂ ಇಒ ಕಷ್ಣಕುಮಾರ್, ಸಂಜೀವಿನಿ ಯೋಜನೆಯ ಮುಖ್ಯಸ್ಥೆ ಮಂಜುಳಾ ಸೇರಿದಂತೆ ಇತರರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಮತದಾನ ಹೆಚ್ಚಲಿ: ಚುನಾವಣಾ ಆಯೋಗದ ಸೂಚನೆಯಂತೆ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಳ್ಳಿಗಳಲ್ಲಿ ಸೈಕಲ್-ಬೈಕ್, ಜಾಗೃತಿ ಜಾಥಾಗಳು ನಡೆದಿವೆ. ಮತದಾನವನ್ನು ಹಬ್ಬದಂತೆ ಆಚರಿಸಲು ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದರು. ಈ ಸಂದರ್ಭದಲ್ಲಿ ದಿಶಾ ಫೌಂಡೇಶನ್‌ನ ಬೋರಪ್ಪ, ನಾಗೇಂದ್ರ, ಪಿಡಿಒ ನರಹರಿ, ಸಂಜೀವಿನಿ ಯೋಜನೆಯ ಪ್ರವೀಣ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.