ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ


Team Udayavani, May 7, 2018, 2:50 PM IST

m4-kaveri.jpg

ಬನ್ನೂರು: ನನ್ನ ಐದು ವರ್ಷದ ಅವಧಿಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಗ್ರ ಅಭವೃದ್ಧಿ ಮಾಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದ ಸಮೀಪದ ಯಾಚೇನಹಳ್ಳಿಯಲ್ಲಿ ಮತಪ್ರಚಾರ ಮಾಡಿದರು.

ಯಾರೂ ನನಗೆ ಹೇಳದೆ ಇದ್ದರೂ, ಎಂ.ಎಂ.ರಸ್ತೆಯನ್ನು ರಾಷ್ಟ್ರೀಯ ರಸ್ತೆಯಾಗಿ ಮಾಡಿದೆ. ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದೆ. ಬನ್ನೂರು ಹೆಗ್ಗೆರೆಯನ್ನು ಮಾದರಿ ಕೆರೆಯಾಗಿ ಪರಿವರ್ತಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ರೈತರ ಬವಣೆ ಅರಿತು ಕಾಲುವೆಗಳನ್ನು ಮೇಲ್ದರ್ಜೆಗೇರಿಸಿ ವ್ಯವಸಾಯಕ್ಕೆ ಅನುಕೂಲ ಕಲ್ಪಸಿಕೊಡಲಾಗಿದೆ ಎಂದು ಹೇಳಿದರು. 

ಅಭಿವೃದ್ಧಿ ಹಿನ್ನೆಡೆ: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾರಣ ಅವರ ಅಧಿಕಾರದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಸರಿದಿದೆ. ಹಾಗೆಯೇ ಜೆಡಿಎಸ್‌ ಕೂಡ ಈ ಬಾರಿ ಬಹುಮತ ಪಡೆಯುವುದಿಲ್ಲ. ಕಳೆದ ಬಾರಿ 40 ಶಾಸಕರಿದ್ದು, ಈ ಬಾರಿ 12 ಜನ ಬಿಟ್ಟು 28 ಜನರಿದ್ದಾರೆ. ಅದರಲ್ಲೂ ಅವರೆಲ್ಲರೂ ಈ ಬಾರಿ ಗೆಲುವು ಪಡೆಯುತ್ತಾರೆ ಎನ್ನುವಂತ ಸಂಶಯವಿದೆ ಎಂದರು. 

ಒಗ್ಗಟ್ಟಿನಿಂದ ಕೆಲಸ ಮಾಡಿ: ನಾವೆಲ್ಲರೂ ರಾಜಕೀಯವಾಗಿ ಯೋಚನೆ ಮಾಡಬೇಕು. ಇಲ್ಲಿ ಜಾತಿ, ಧರ್ಮ ಮುಖ್ಯ ಅಲ್ಲ. ಅಭಿವೃದ್ಧಿ ಮುಖ್ಯ. ಎಲ್ಲ ಧರ್ಮೀಯರು ಶಾಂತಿಯುತವಾಗಿ ಬದುಕುವುದು ಮುಖ್ಯ. ಈಗ ಮಾತನಾಡುವ ಜೆಡಿಎಸ್‌ ಮತ್ತು ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಯಾವುದೆ ಅಭಿವೃದ್ಧಿಯನ್ನು ಮಾಡಿಲ್ಲ. ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಭಿವೃದ್ಧಿಯೇ ಗುರಿ ಎಂದು ತಿಳಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ, ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಮನವಿ ಮಾಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎನ್‌.ಶಂಕರೇಗೌಡ ಮಾತನಾಡಿ, ಪ್ರತಿ ಗ್ರಾಮದಲ್ಲಿನ ಸಮಸ್ಯೆ ಅರಿತು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಿರುವ ಕೆಲಸವನ್ನು ಯಾರು ಅಲ್ಲಗಳೆಯುವಂತಿಲ್ಲ. ಮಹದೇವಪ್ಪ ಶಾಸಕರಾಗಿ, ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಉತ್ತಮ ಲೋಕೋಪಯೋಗಿ ಸಚಿವ ಎಂದು ಹೆಸರು ಮಾಡಿರುವುದು ಅವರ ಉತ್ತಮ ಕೆಲಸಕ್ಕೆ ಸಂದ ಗೌರವ ಎಂದರು.

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಪದ್ಮನಾಭ್‌, ಮುನಾವರ ಪಾಷಾ, ಅಜೀಜುಲ್ಲಾ, ಸುನಿಲ್‌ಬೋಸ್‌, ಅನಿಲ್‌ಬೋಸ್‌, ಲಕ್ಷ್ಮೀನಾರಾಯಣ್‌, ಗೋಪಾಲ್‌, ಜಿಪಂ ಸದಸ್ಯ ಮಂಜುನಾಥ, ಚಾಮನಹಳ್ಳಿ ತಿಮ್ಮೇಗೌಡ, ಮಾಜಿ ಶಾಸಕ ಎಸ್‌.ಕೃಷ್ಣಪ್ಪ, ಶ್ರೀನಿವಾಸ್‌, ರವೀಂದ್ರ ಕುಮಾರ್‌, ಸಹಕಾರ ಸಂಘದ ಉಪಾಧ್ಯಕ್ಷ ಕುಚೇಲ, ಪುರಸಭಾ ಸದಸ್ಯ ಮೂರ್ತಿ, ಬಸುರಾಜು,ಲೋಕೇಶ್‌, ವೀಣಾ, ಶಿವಮೂರ್ತಿ, ಬೈರವಮೂರ್ತಿ, ಅಶೋಕ್‌, ಎ.ಎನ್‌.ಸ್ವಾಮಿ, ಡಾ.ಮಹದೇವು, ಪುರಸಭಾ ಉಪಾಧ್ಯಕ್ಷ ರಾಮಲಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.