ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ
Team Udayavani, May 7, 2018, 5:39 PM IST
ಚಳ್ಳಕೆರೆ: ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪ್ರಚಾರ ಬಹುತೇಕ ಪೂರ್ಣಗೊಂಡಿದೆ. ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಬೆಂಬಲ ನೀಡಿ ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ಮೂಡಿದೆ ಎಂದು ಪಕ್ಷದ ಅಭ್ಯರ್ಥಿ, ಶಾಸಕ ಟಿ. ರಘುಮೂರ್ತಿ ಹೇಳಿದರು.
ಭಾನುವಾರ ನಗರದ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರು ರಸ್ತೆ, ಮದಕರಿ ನಗರ, ವಾಸವಿ ಕಾಲೋನಿ, ನೆಹರೂ ವೃತ್ತ, ಮಹಾದೇವಿ ರಸ್ತೆ, ಸಂಗೊಳ್ಳಿ ರಾಯಣ್ಣ ರಸ್ತೆ ಮೊದಲಾದೆಡೆ ಮತಯಾಚನೆ ನಡೆಸಿ ಅವರು ಮಾತನಾಡಿದರು.
ನಾನು ಶಾಸಕನಾಗಿದ್ದಾಗ ಕ್ಷೇತ್ರದ ಎಲ್ಲಾ ಸಮುದಾಯಗಳಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ಷೇತ್ರದ ಸ್ತ್ರೀಶಕ್ತಿ ಸಂಘಗಳ ಸ್ವಸಹಾಯ ಗುಂಪುಗಳಿಗೆ ಪರಿಶಿಷ್ಟ ಜಾತಿ ಮತ್ತು ವರ್ಗ ನಿಗಮದ ಮೂಲಕ ಸಾಲ ಸೌಲಭ್ಯ ಒದಗಿಸಲಾಗಿದೆ. ಜನರಿಗೆ ಅನುಕೂಲ ಕಲ್ಪಿಸಲು ಶ್ರಮಿಸಿದ್ದೇನೆ. ಕ್ಷೇತ್ರದ ಎಲ್ಲಾ ಸಮುದಾಯಗಳ ಮುಖಂಡರು ನನ್ನ ಪರವಾಗಿ ಪ್ರಚಾರ ಮಾಡುತ್ತಿರುವುದು ಕೂಡ ಗೆಲುವಿಗೆ ಪೂರಕವಾಗಲಿದೆ ಎಂದು ತಿಳಿಸಿದರು.
ಎಐಸಿಸಿ ಚುನಾವಣಾ ವೀಕ್ಷಕ ತುಳಸಿ ರೆಡ್ಡಿ ಮಾತನಾಡಿ, ಚುನಾವಣಾ ದಿನಾಂಕ ಘೋಷಣೆಯಾದ ನಂತರ ನಾಲ್ಕನೇ ಸಲ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಪ್ರತಿ ಹಂತದಲ್ಲೂ ಪಕ್ಷದ ಪ್ರಚಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಶಾಸಕರಿಗೆ ಬೆಂಬಲ ವ್ಯಕ್ತ ಪಡಿಸಿರುವ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಹಗಲಿರುಳು ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾಸಕರ ಪರವಾಗಿ ಮತಯಾಚಿಸುತ್ತಿದ್ದಾರೆ ಎಂದರು.
ಶಾಸಕರ ಪತ್ನಿ ಗಾಯತ್ರಿ ರಘುಮೂರ್ತಿ, ಮುಖಂಡರಾದ ಸೂರನಹಳ್ಳಿ ಶ್ರೀನಿವಾಸ್, ಸಿ.ಟಿ. ಶ್ರೀನಿವಾಸ್, ಡಿ.ಕೆ. ಕಾಟಯ್ಯ, ಚನ್ನಕೇಶವ, ನಗರಸಭಾ ಸದಸ್ಯರಾದ ಬಿ.ಟಿ. ರಮೇಶ್ ಗೌಡ, ಜಿ.ಟಿ. ಗೋವಿಂದರಾಜು, ವಿ. ರಾಮು, ಲಕ್ಷ್ಮಿದೇವಿ, ಸಲೀಂ, ಶ್ರೀನಿವಾಸ್, ಬಡಗಿ ಪಾಪಣ್ಣ, ಗೀತಾಬಾಯಿ, ಎಂ.ಬಿ. ಭಾಗ್ಯಮ್ಮ, ಸರಸ್ವತಿ, ಸೈಫುಲ್ಲಾ, ಕಿರಣ್ ಶಂಕರ್ ಮತ್ತಿತರರು ಇದ್ದರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ಮತದಾರರು ಸಂತಸಗೊಂಡಿದ್ದಾರೆ. ಹಾಗಾಗಿ
ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವ ನಿರ್ಧಾರ ಕೈಗೊಂಡಿದ್ದಾರೆ.
ಟಿ. ರಘುಮೂರ್ತಿ, ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.