ಸಂವಿಧಾನ ಬದಲಿಸಲು ಬಿಡಲ್ಲ: ರಾಹುಲ್
Team Udayavani, May 8, 2018, 6:25 AM IST
ಮಾಲೂರು: ಕೇಂದ್ರ ಸಂಪುಟದ ಮಂತ್ರಿಗಳು ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿದ್ದರೂ, ನರೇಂದ್ರ ಮೋದಿ·ಪರೋಕ್ಷವಾಗಿ ದಲಿತರು ಮತ್ತು ಮುಸ್ಲಿಂರ ದಮನಕ್ಕೆ ಸಹಕಾರ ನೀಡುತ್ತಿದ್ದಾರೆ. ಸಿದ್ಧಾಂತ ರಹಿತ ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳಿಂದ ಸಂವಿಧಾನವನ್ನು ಬದಲಿಸಲು ಬಿಡುವುದಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕೋಲಾರ ಜಿಲ್ಲೆ ಮಾಲೂರಿನಲ್ಲಿ ಸೋಮವಾರ ಕಾಂಗ್ರೆಸ್ ರೋಡ್ ಶೋ ನಂತರ ಬಾಲಾಜಿ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಸಿದ್ಧಾಂತ ಮತ್ತು ಮೌಲ್ಯಗಳಿಲ್ಲದ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ವಿರೋಧಿ ಮಾತನಾಡುತ್ತಿರುವ ಮೋದಿ, ಕರ್ನಾಟಕದಲ್ಲಿ ಭ್ರಷ್ಟಾಚಾರದ ಭಾಗಿಗಳಾಗಿ ಜೈಲು ಸೇರಿದ್ದ ಮಾಜಿ ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟದ ಮಾಜಿ ಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ’ ಎಂದು ವಾಗ್ಧಾಳಿ ನಡೆಸಿದರು.
ಕರ್ನಾಟಕದ ಚುನಾವಣೆ ಕೇವಲ ಪಕ್ಷ ಪಕ್ಷಗಳ ಚುನಾವಣೆಯಲ್ಲ. ಸಿದ್ಧಾಂತ ರಹಿತ ಬಿಜೆಪಿ, ಸಂಘ ಪರಿವಾರಗಳು ಮತ್ತು ಮಹಾತ್ಮ ಗಾಂಧಿ ಅವರ ತತ್ವ ಸಿದ್ಧಾಂತಗಳ ಮೇಲಿನ ಮೌಲ್ಯದ ನಡುವಿನ ಚುನಾವಣೆಯಾಗಿದೆ.ಇದರ ನಡುವೆ ಜೆಡಿಎಸ್ ಪಕ್ಷ ಅವಕಾಶವಾದಿ ರಾಜಕಾರಣಕ್ಕೆ ಅಣಿಯಾಗಿದೆ ಎಂದರು.
ಇಂಧನ ಬೆಲೆ ಹೆಚ್ಚಳ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸದ ಕೇಂದ್ರ ಸರ್ಕಾರ ಅಧಿಕವಾಗಿ ಬರುತ್ತಿರುವ ಲಾಭವನ್ನು ಏನುಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹೊಗೆ ರಹಿತ ಭಾರತ ಮಾಡಲು ಮುಂದಾಗಿರುವ ಮೋದಿ,ಅಡುಗೆ ಅನಿಲದ ಬೆಲೆಯನ್ನು ಗಗನ ಮುಖೀಯಾಗಿಸಿದ್ದಾರೆ ಎಂದರು. ನಂತರ ರಾಹುಲ್ ಗಾಂಧಿ ಅವರು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ಪ್ರಚಾರ ನಡೆಸಿದರು.
ಪ್ರತಿಭಟನೆಯೇ ಪ್ರಚಾರವಾಯಿತು!
ಮಾಲೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೋಲಾರ ಜಿಲ್ಲೆಯ
ಮಾಲೂರಿನಲ್ಲಿ ಪೆಟ್ರೋಲಿಯಂ ವಸ್ತುಗಳ ದರ ಏರಿಕೆ ವಿರುದ್ಧ ಸೈಕಲ್ ಏರಿ ಪ್ರತಿಭಟನೆ ಮಾಡಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸದ ಕೇಂದ್ರ ಸರ್ಕಾರ ಅಧಿಕವಾಗಿ ಬರುತ್ತಿರುವ ಲಾಭವನ್ನು ಏನುಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಅಲ್ಲದೆ ಹೊಗೆ ರಹಿತ ಭಾರತ ಮಾಡಲು ಮುಂದಾಗಿರುವ ನರೇಂದ್ರ ಮೋದಿ, ಅಡುಗೆ ಅನಿಲದ ಬೆಲೆಯನ್ನು ಗಗನ ಮುಖೀಯಾಗಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಪ್ರತಿಭಟನೆ ವೇಳೆ ಕೊಂಚ ದೂರು ಸೈಕಲ್ ತುಳಿದರಲ್ಲದೇ, ಬಳಿಕ ಅಡುಗೆ ಅನಿಲದ ಸಿಲಿಂಡರ್ ಮಾದರಿಗಳನ್ನು ಹಿಡಿದು ಹೆಜ್ಜೆ ಹಾಕಿದರು. ಬಳಿಕ ಎತ್ತಿನ ಗಾಡಿ ಏರಿ ಪ್ರತಿಭಟನೆಗೆ ಸಾಥ್ ನೀಡಿದರು.
ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯ ರೋಡ್ ಶೋನ ನಂತರ ಬಾಲಾಜಿ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸಚಿವ ಸಂಪುಟದ ಮಂತ್ರಿಗಳು ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿದ್ದರೂ, ನರೇಂದ್ರ ಮೋದಿ ಪರೋಕ್ಷವಾಗಿ ದಲಿತರು ಮತ್ತು ಮುಸ್ಲಿಂರ ದಮನಕ್ಕೆ ಸಹಕಾರ ನೀಡುತ್ತಿದ್ದಾರೆ. ಸಿದಾಟಛಿಂತ ರಹಿತ ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ಸಂವಿಧಾನವನ್ನು ಬದಲಿಸಲು ಬಿಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಕರ್ನಾಟಕದ ಚುನಾವಣೆ ಕೇವಲ ಪಕ್ಷ ಪಕ್ಷಗಳ ಚುನಾವಣೆಯಲ್ಲ. ಸಿದ್ಧಾಂತ ರಹಿತ ಬಿಜೆಪಿ, ಸಂಘ ಪರಿವಾರಗಳು ಮತ್ತು ಮಹಾತ್ಮ ಗಾಂಧಿ ಅವರ ತತ್ವ ಸಿದ್ಧಾಂತಗಳ ಮೇಲಿನ ಮೌಲ್ಯದ ನಡುವಿನ ಚುನಾವಣೆಯಾಗಿದೆ. ಇದರ ನಡುವೆ ಜೆಡಿಎಸ್ ಪಕ್ಷ ಅವಕಾಶವಾದಿ ರಾಜಕಾರಣಕ್ಕೆ ಅಣಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.