ಸಿಜೆಐ ದೀಪಕ್ ಮಿಶ್ರಾ ಉಚ್ಚಾಟನೆ ಅರ್ಜಿ ಹಿಂಪಡೆದುಕೊಂಡ ಕಾಂಗ್ರೆಸ್
Team Udayavani, May 8, 2018, 11:47 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಹುದ್ದೆಯಿಂದ ಉಚ್ಚಾಟಿಸಲು ವಿರೋಧ ಪಕ್ಷಗಳು ನೀಡಿದ್ದ ಮಹಾಭಿಯೋಗದ ನೊಟೀಸನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದುದನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ತಾನು ಸಲ್ಲಿಸಿದ್ದ ಅರ್ಜಿಯನ್ನು ಕಾಂಗ್ರೆಸ್ ಇಂದು ಮಂಗಳವಾರ ಹಿಂಪಡೆದುಕೊಂಡು ಅಚ್ಚರಿ ಉಂಟುಮಾಡಿದೆ.
ಸಿಜೆಐ ಜಸ್ಟಿಸ್ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗದ ನೊಟೀಸ್ ಜಾರಿ ಮಾಡುವಲ್ಲಿ ಕಾಂಗ್ರೆಸ್, ವಿರೋಧ ಪಕ್ಷಗಳೊಂದಿಗೆ ಸೇರಿಕೊಂಡಿತ್ತಾದರೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಚಿದಂಬರಂ ಮುಂತಾದ ಹಿರಿಯ ನಾಯಕರು ಅದರಿಂದ ದೂರ ಸರಿದು ನೊಟೀಸಿಗೆ ಸಹಿ ಹಾಕದ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.
ಮಹಾಭಿಯೋಗದ ನೊಟೀಸ್ ನೀಡುವಲ್ಲಿ ವಿರೋಧ ಪಕ್ಷಗಳ ಜತೆಗೆ ಕಾಂಗ್ರೆಸ್ ಸೇರಿಕೊಂಡದ್ದೇ ರಾಷ್ಟ್ರಾದ್ಯಂತ ವ್ಯಾಪಕ ಟೀಕೆ, ಚರ್ಚೆಗೆ ಗುರಿಯಾಗಿತ್ತು. ಅನಂತರ ಕಾಂಗ್ರೆಸ್ ಈ ವಿಷಯದಲ್ಲಿ ಮೌನಾಚರಣೆ ಮಾಡಿತ್ತು.
ಹಾಗಿದ್ದರೂ ಉಪ ರಾಷ್ಟ್ರಪತಿಗಳು ಮಹಾಭಿಯೋಗದ ನೊಟೀಸ್ ತಿರಸ್ಕರಿಸಿದುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇಂದು ಅದು ಹಠಾತ್ತನೇ ತನ್ನ ಅರ್ಜಿಯನ್ನು ಹಿಂಪಡೆದು ರಾಜಕೀಯ ವಲಯದಲ್ಲಿ ಸಂಚಲನೆ ಉಂಟುಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.