ಚುನಾವಣೆ ಬಂದಿದ್ದಕ್ಕೆ ಅಭಿವೃದ್ಧಿ ನೆನಪಾಗಿದೆ

Team Udayavani, May 8, 2018, 12:32 PM IST

chunavane.jpg

ಕೆ.ಆರ್‌.ಪುರ: ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಡಿ.ಎ.ಗೋಪಾಲ್‌ ಬಿ.ನಾರಾಯಣಪುರ, ದೇವಸಂದ್ರ, ಸಿಂಗಯ್ಯನಪಾಳ್ಯ, ಬಸವನಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರೋಡ್‌ ಶೋ ನಡೆಸಿ ಮತ ಯಾಚಿಸಿದರು.

ಕೆ.ಆರ್‌.ಪುರದ ವಿವಿಧ ಬಡಾವಣೆಗಳಲ್ಲಿ ಮತಯಾಚನೆ ವೇಳೆ ಮಾತನಾಡಿದ ಅವರು, 10 ವರ್ಷದ ಅವಧಿಯಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಬಿಬಿಎಂಪಿಗೆ ಸೇರ್ಪಡೆಗೊಂಡ 110ಹಳ್ಳಿಗಳ ಪೈಕಿ ಕೆ.ಆರ್‌.ಪುರ ಭಾಗದ ಹಳ್ಳಿಗಳಿಗೆ ಸೌಕರ್ಯ ಒದಗಿಸಿಲ್ಲ.

ಸೌಕರ್ಯ ಒದಗಿಸುವುದಾಗಿ ಕೊಚ್ಚಿಕೊಂಡ ಕಾಂಗ್ರೆಸ್‌ 4 ವರ್ಷಗಳ ಬಳಿಕ ಎಚ್ಚೆತ್ತುಕೊಂಡು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದೆ. ಶಾಸಕರಿಗೆ ಅಭಿವೃದ್ಧಿಯ ಗುರಿ ಇದ್ದಿದ್ದರೆ 5 ವರ್ಷಗಳ ಅವಧಿಯಲ್ಲಿ ಕಾವೇರಿ ನೀರು, ಯುಜಿಡಿ ಸಂಪರ್ಕ ಕಲ್ಪಿಸಬಹುದಿತ್ತು. ಆಧರೆ ಚುನಾವಣೆ ಸಮೀಪಿಸಿದಾಗ ಸಿಎಂ ಹಾಗೂ ಕ್ಷೇತ್ರದ ಶಾಸಕರಿಗೆ ಅಭಿವೃದ್ಧಿ ನೆನಪಾಗಿದೆ ಎಂದು ಆರೋಪಿಸಿದರು. 

ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಅವರ ಕಾರ್ಯವೈಖರಿಯನ್ನು ಜನ ಮೆಚ್ಚಿಕೊಂಡಿದ್ದರು. ಕ್ಷೇತ್ರ ಹಾಗೂ ರಾಜ್ಯದ ಜನತೆ ಪ್ರಸ್ತುತ ಎರಡೂ ಪಕ್ಷಗಳ ಆಡಳಿತ ಗಮನಿಸಿ, ಬೇಸತ್ತಿದ್ದಾರೆ. ಜತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದನ್ನು ಮನಗಂಡಿದ್ದಾರೆ. ಹೀಗಾಗಿ ಈ ಬಾರಿ ಕ್ಷೇತ್ರದ ಮತದಾರರು ಜೆಡಿಎಸ್‌ ಪಕ್ಷಕ್ಕೆ ಅಧಿಕ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನ ಜೆಡಿಎಸ್‌ಗೆ ಬೆಂಬಲಿಸುತ್ತಿರುವುದನ್ನು ಸಹಿಸಲಾಗದೆ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಪ್ರಚಾರದ ವೇಳೆ ವಿನಾಕಾರಣ ಅಡ್ಡಿಪಡಿಸುವುದು, ಜೀವ ಬೆದರಿಕೆ ಹಾಕುವುದು, ಕಾರ್ಯಕರ್ತರನ್ನು ಪ್ರಚಾರದಿಂದ ದೂರ ಉಳಿಯುವಂತೆ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಭಾನುವಾರವೂ ಎ.ನಾರಾಯಣಪುರದಲ್ಲಿ ಘಟನೆ ಮರುಕಳಿಸಿದೆ. ನಾಗರಿಕರು ಕೂಡಲೆ ಎಚ್ಚೆತ್ತುಕೊಂಡು ಗೂಂಡಾಗಳನ್ನು ಬೆಂಬಲಿಸುವ ಅಭ್ಯರ್ಥಿಗಳನ್ನು ಪರಾಭವಗೊಳಿಸಿ ಪಾಠ ಕಲಿಸಬೇಕಿದೆ ಎಂದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.