ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
Team Udayavani, May 8, 2018, 5:35 PM IST
ಶಿವಮೊಗ್ಗ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ. ಕೇಂದ್ರದಲ್ಲೂ ನಮ್ಮದೇ ಸರ್ಕಾರ ಇರುವುದರಿಂದ ಅದರ ನೆರವಿನೊಂದಿಗೆ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ “ನಮ್ಮ ಸಂಕಲ್ಪ’ ಪಕ್ಷದ ಜಿಲ್ಲಾವಾರು ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪಕ್ಷದ ರಾಜ್ಯ ಪ್ರಣಾಳಿಕೆ ಮತ್ತು ಜಿಲ್ಲಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಆಯಾ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಹೊಸ ಯೋಜನೆ ಜಾರಿ ಕುರಿತು ಸಲಹೆ ಸ್ವೀಕರಿಸಿ ಅದನ್ನು ಜಿಲ್ಲಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಮುಂದೆ ನಾಗರಿಕರು ನೀಡುವ ಸಲಹೆಗಳನ್ನು ಸ್ವೀಕರಿಸಿ ಅನುಷ್ಠಾನಗೊಳಿಸುವ ಪ್ರಮಾಣಿಕ ಪ್ರಯತ್ನ
ನಡೆಸಲಾಗುವುದು ಎಂದರು.
ಮುಖ್ಯವಾಗಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆ, ಸ್ಮಾರ್ಟ್ ಸಿಟಿ ಅನುಷ್ಠಾನ, ಹಕ್ಕುಪತ್ರ ವಿತರಣೆ, ಬಡವರಿಗೆ ಮನೆ ನಿರ್ಮಾಣ ಅತಿಮುಖ್ಯವಾಗಿದೆ. ಸ್ಮಾರ್ಟಸಿಟಿ ಯೋಜನೆ ಶಿವಮೊಗ್ಗ ಸೇರ್ಪಡೆಗೊಂಡು ಮೂರು ವರ್ಷವಾಗಿದೆ. ಕೇಂದ್ರದಿಂದ 600 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ. ಆದರೆ ಅನುಷ್ಠಾನಗೊಳಿಸುವ ಆಸಕ್ತಿ ರಾಜ್ಯ ಸರ್ಕಾರ ಹಾಗು ಇಲ್ಲಿನ ಸ್ಥಳೀಯ ಶಾಸಕರಿಗೆ
ಇಲ್ಲವಾಗಿದೆ ಎಂದು ದೂರಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯದಲ್ಲಿನ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿಕೊಡಲಾಗುವುದು. ರಾಜ್ಯ ಸರ್ಕಾರ ಮರಳು ದಂಧೆಯಲ್ಲಿ ಲೂಟಿ ಹೊಡೆದಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಈ ಹಿಂದಿನಂತೆ ಸಾರ್ವಜನಿಕರಿಗೆ ಮುಕ್ತವಾಗಿ ಮರಳು ಮತ್ತು ಜಲ್ಲಿ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ, ಪ್ರಮುಖರಾದ ಆಯನೂರು ಮಂಜುನಾಥ್, ಎಂ.ಬಿ. ಭಾನುಪ್ರಕಾಶ್, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಎಂ. ಶಂಕರ್, ಮಧುಸೂದನ್, ಜ್ಞಾನೇಶ್ವರ್, ಹಿರಣ್ಣಯ್ಯ ಸೇರಿದಂತೆ ಹಲವರಿದ್ದರು.
ಪ್ರಣಾಳಿಕೆ ಮುಖ್ಯಾಂಶಗಳು
ಶಿವಮೊಗ್ಗ ವಿಮಾನ ನಿಲ್ದಾಣ ಪೂರ್ಣಗೊಳಿಸುವುದು
ಜಿಲ್ಲಾದ್ಯಂತ ಬಡವರಿಗೆ ಅಗ್ಗದ ಮನೆಗಳ ನಿರ್ಮಾಣ
ಕೊಂಕಣ ರೈಲ್ವೆಗೆ ಸಂಪರ್ಕ
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣ
ಭದ್ರಾವತಿ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ಆಧುನೀಕರಣ
ಕಾರ್ಮಿಕರಿಗಾಗಿ ಹೈಟೆಕ್ ಇಎಸ್‌ಐ ಆಸ್ಪತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.