ಗೂಂಡಾಗಿರಿ, ದೌರ್ಜನ್ಯ ನಿಯಂತ್ರಣ ಅಗತ್ಯ
Team Udayavani, May 9, 2018, 12:54 PM IST
ಬೆಂಗಳೂರು: ಗೋವಿಂದರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಮಂಗಳವಾರ ಎಸ್ವಿಜೆ ನಗರ, ಪಟ್ಟೇಗಾರಪಾಳ್ಯದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ಕ್ಷೇತ್ರದ ಬಿಜೆಪಿ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ದಂಡಿನಿಂದಿಗೆ ಪಾದಯಾತ್ರೆ ನಡೆಸಿದ ಅವರು, ಕ್ಷೇತ್ರದಲ್ಲಿ ಗೂಂಡಾಗಿರಿ, ದೌರ್ಜನ್ಯ ಹೆಚ್ಚಾಗಿದ್ದು ಅದನ್ನು ನಿಯಂತ್ರಿಸಬೇಕಿದೆ. ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೊಸ ವೇಗ ಕಲ್ಪಿಸಬೇಕಾಗಿದೆ. ಹೀಗಾಗಿ ಈ ಬಾರಿ ತಮಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.
ಈ ಹಿಂದೆ ಬಿನ್ನಿಪೇಟೆ ಕ್ಷೇತ್ರದ ಶಾಸಕನಾಗಿ, ಸಚಿವನಾಗಿ ಇಡೀ ಬೆಂಗಳೂರಿನ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ. ವಿಧಾನಪರಿಷತ್ ಸದಸ್ಯನಾಗಿ ಕ್ಷೇತ್ರದ ಜತೆ ನಿರಂತರ ಸಂಪರ್ಕ ಸಾಧಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕ್ಷೇತ್ರದಲ್ಲಿ ಉದ್ಯಾನ ಅಭಿವೃದ್ಧಿ, ರಸ್ತೆ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಕ್ರಮ ಕೈಗೊಂಡಿದ್ದೇನೆ ಎಂದು ಹೇಳಿದರು.
ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಡವರಿಗೆ ಮನೆ, ಆರೋಗ್ಯ ಸೇವೆ ಕಲ್ಪಿಸಿದ್ದೇನೆ. ನನ್ನ ಸೇವೆ ಗುರುತಿಸಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.