ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ
Team Udayavani, May 9, 2018, 3:45 PM IST
ತಿ.ನರಸೀಪುರ: ಕೇಂದ್ರ ಸರ್ಕಾರದ ನೆರವು ಪಡೆದು ಕೃಷಿಗೆ ನೀರಾವರಿ ಸೌಲಭ್ಯ, ರಾಂಪುರ ನಾಲೆಗೆ ನೀರು ಹರಿಸುವ ಯೋಜನೆ, ಜಲ ಸಂವರ್ಧನೆ ಯೋಜನೆಯಡಿ ಕೆರೆಗಳನ್ನು ಸಮಗ್ರ ಅಭಿವೃದ್ಧಿ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಪಡಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿ ಕ್ಷೇತ್ರದ ಚುನಾವಣಾ ಪ್ರಣಾಳಿಕೆ ರೂಪಿಸಿದೆ ಎಂದು ಕ್ಷೇತ್ರಾಧ್ಯಕ್ಷ ಎ.ಎನ್.ಶಿವಯ್ಯ ತಿಳಿಸಿದರು.
ಪಟ್ಟಣದ ವರುಣಾ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕುಡಿಯುವ ನೀರಿನ ಅವಶ್ಯಕತೆ ನೀಗಿಸಲು ಅಗತ್ಯವಿರುವ ಕಡೆ ಹಾಲಿ ಇರುವ ಆರ್‌ಒ ಘಟಕಗಳ ದುರಸ್ತಿ ಮಾಡಿ, ಪುನರ್ ಸ್ಥಾಪನೆ ಮಾಡಲಾಗುವುದು.
ಕ್ಷೇತ್ರಾದ್ಯಂತ ಇರುವ ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉತ್ತಮಪಡಿಸಿ ವೈದ್ಯಕೀಯ ಸೇವೆಯನ್ನು ಸಮರ್ಪಕವಾಗಿ ಕಲ್ಪಿಸಿ ವರುಣಾ ಜನರ ಸುದೀರ್ಘ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದರು.
ಕೃಷಿಗೆ ಅಗತ್ಯ ಸೌಲಭ್ಯ: ನವ ಡಿಜಿಟಲ್ ಯುಗಕ್ಕೆ ತಕ್ಕಂತೆ ಸರ್ಕಾರಿ ಶಾಲಾ ಕಾಲೇಜುಗಳನ್ನು ತಂತ್ರಜ್ಞಾನದ ಮೂಲಕ ಮೇಲ್ದಜೇìಗೆ ಏರಿಸಲಾಗುವುದು. ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಯುವ ಜನತೆಗೆ ಕೌಶಲ್ಯ ತರಬೇತಿ, ರೈತರಿಗೆ ಪುಷ್ಪ ಕೃಷಿ, ತೋಟಗಾರಿಕೆಯಂತಹ ಲಾಭದಾಯಕ ಕೃಷಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಅಗತ್ಯ ಸೌಲಭ್ಯ ಒದಗಿಸುವ ಆಕಾಂಕ್ಷೆಯಿದೆ.
ಅಲ್ಲದೆ ಸಾವಯವ ಕೃಷಿ ಪ್ರೋತ್ಸಾಹ ಭತ್ಯೆಗಳನ್ನು ನೀಡಲಾಗವುದು. ಮಹಿಳೆಯರಿಗೆ ಹಣಕಾಸು ನೆರವು ಒದಗಿಸಿ ಸ್ತ್ರೀ ಸಬಲೀಕರಣಕ್ಕೆ ಒತ್ತು ನೀಡಲಾಗುವುದು. ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ಧೀರ್ಘಾವಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗವುದು. ನದಿ ನೀರಿನ ನಿಯಂತ್ರಿತ ಬಳಕೆಗೆ ಒತ್ತು ನೀಡಲಾಗುವುದು.
ಬಿಜೆಪಿ ಅಭ್ಯರ್ಥಿ ಟಿ.ಬಸವರಾಜು, ಕ್ಷೇತ್ರದ ಚುನಾವಣೆ ಉಸ್ತುವಾರಿ ಹರ್ಯಾಣ ಶಾಸಕ ಮಹೇಶ್ ಚೌಹಾಣ್, ಚುನಾವಣೆ ಪ್ರಣಾಳಿಕೆ ಸಂಚಾಲಕ ಕೆ.ಎನ್.ಪುಟ್ಟಬುದ್ಧಿ, ಜಿಪಂ ಸದಸ್ಯ ಸದಾನಂದ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.