ಪತ್ರಕರ್ತರ ಸಂಘದಿಂದ ಅಭಿಜ್ಞಾ ರಾವ್‌ಗೆ ಸಮ್ಮಾನ

Team Udayavani, May 10, 2018, 11:15 AM IST

10-May-8.jpg

ಸುಬ್ರಹ್ಮಣ್ಯ: ಸಾಧನೆಗೆ ಕಠಿನ ಶ್ರಮ ಜತೆಗೆ ಛಲ ಅವಶ್ಯ. ಜೀವನದಲ್ಲಿ ಶಿಸ್ತು, ಸಾಧಿಸಬೇಕೆಂಬ ಹಂಬಲದಿಂದ ಮುನ್ನಡೆದರೆ ಸಾಧನೆ ಸಿದ್ಧಿಸುತ್ತದೆ ಎಂಬುದಕ್ಕೆ ಅಭಿಜ್ಞಾ ರಾವ್‌ ಅವರೇ ಸಾಕ್ಷಿ ಎಂದು ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಲೋಕೇಶ್‌ ಬಿ.ಎನ್‌.ಹೇಳಿದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಅಭಿಜ್ಞಾ ರಾವ್‌ ಬಿ. ಅವರಿಗೆ ಮಂಗಳವಾರ ಶಾಲು ಹೊದೆಸಿ, ಫಲಪುಷ್ಪ, ಕಿರು ಕಾಣಿಕೆ ನೀಡಿ, ಸಿಹಿ ತಿನ್ನಿಸಿ ಅವರು ಮಾತನಾಡಿದರು.

ನಗರಗಳಲ್ಲಿ ಕಲಿಕೆಗೆ ಸಾಕಷ್ಟು ವ್ಯವಸ್ಥೆಗಳಿರುತ್ತವೆ. ಗ್ರಾಮೀಣ ಭಾಗದಲ್ಲಿ ಅಷ್ಟು ಸೌಕರ್ಯಗಳು ಇರುವುದಿಲ್ಲ. ಇದೆಲ್ಲದರ ಮಧ್ಯೆ ಈಕೆ ಗ್ರಾಮೀಣ ಭಾಗದ ವಿದ್ಯಾರ್ಥಿಯಾಗಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಪ್ರಶಂಸನೀಯ. ಆಕೆ ಮುಂದೆ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಅವರು ಹೇಳಿದರು.

ಪತ್ರಕರ್ತ ಭರತ್‌ ನೆಕ್ರಾಜೆ ಮಾತನಾಡಿ ಅಭಿಜ್ಞಾ ಸಾಧನೆಯಿಂದ ನಮಗೆ ಅತೀವ ಸಂತಸವಾಗಿದೆ. ಆಕೆ ಪತ್ರಕರ್ತನ ಮಗಳು ಎಂಬುದು ಹೆಮ್ಮೆಯ ವಿಷಯ ಎಂದರು. ಪತ್ರಕರ್ತರಾದ ರತ್ನಾಕರ ಸುಬ್ರಹ್ಮಣ್ಯ, ವಿಶ್ವನಾಥ ನಡುತೋಟ, ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಕಾಶ್‌ ವಿಶ್ವಕರ್ಮ, ಅಭಿಜ್ಞಾ ಸಾಧನೆಯ ಗುಣಗಾನ ಮಾಡಿ, ಉಜ್ವಲ ಭವಿಷ್ಯ ಹಾರೈಸಿದರು.

ಗದ್ಗದಿತರಾದ ತಾಯಿ-ಮಗಳು
ಅಭಿಜ್ಞಾ ರಾವ್‌ ಅವರ ತಂದೆ ಬಿ. ವಿಠಲ್‌ ರಾವ್‌ ಉದಯವಾಣಿ ಪತ್ರಿಕೆಯಲ್ಲಿ ಸುದೀರ್ಘ‌ ಅವಧಿ ಪತ್ರಕರ್ತರಾಗಿದ್ದವರು. ಹಲವು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುತ್ತಿದ್ದರು. ಯುವ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರ ಪುತ್ರಿಯ ಸಾಧನೆ ಖುಷಿ ತಂದಿದೆ. ಈ ಹೊತ್ತು ವಿಠಲ್‌ ರಾವ್‌ ಇರಬೇಕಿತ್ತು, ಮತ್ತಷ್ಟು ಖುಷಿ ಪಡುತ್ತಿದ್ದರು ಎಂದು ಸಭಿಕರು ಹೇಳಿದಾಗ ಅಭಿಜ್ಞಾ ರಾವ್‌ ಹಾಗೂ ಅವರ ತಾಯಿ ಆಶಾ ಬಿ. ರಾವ್‌ ಗದ್ಗದಿತರಾದರು. ಸಭಿಕರ ಕಣ್ಣುಗಳಲ್ಲೂ ನೀರು ಜಿನುಗಿತು.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.