ಚೆಂಬೂರು ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ: ಬಸವ ಜಯಂತಿ

Team Udayavani, May 10, 2018, 5:13 PM IST

0905mum01.jpg

 ಮುಂಬಯಿ: ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ 886 ನೇ ಬಸವಜಯಂತಿ ಆಚರಣೆಯು ಎ. 29 ರಂದು ಸಂಜೆ  ಸಂಸ್ಥೆಯ ಬಸವೇಶ್ವರ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಬಾಲ್ಕಿಯ ಚನ್ನಬಸವ ಪಟ್ಟದ ದೇವರು ಅವರ ಘನ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ| ಶಶಿಕಲಾ ಗುರುಪುರ ಹಾಗೂ ಶ್ರೀಗಳು ಬಸವೇಶ್ವರ ಭಾವಚಿತ್ರಕ್ಕೆ ಮಾಲಾಧಾರಣೆಗೈದು, ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಾಯಕ ಗಿರೀಶ್‌ ಸಾರವಾಡ ಇವರು ಪ್ರಾರ್ಥನೆಗೈದರು.

ಸಂಸ್ಥೆಯ ವಿಶ್ವಸ್ತ ಮಂಡಳಿಯ ಮನೋಹರ ಎಂ. ಕೋರಿ ಮತ್ತು ಸಂಸ್ಥೆಯ ಅಧ್ಯಕ್ಷ ಬಿ. ಜಿ. ಬಿರಾದಾರ್‌ ಇವರು ಅತಿಥಿ-ಗಣ್ಯರುಗಳನ್ನು ಗೌರವಿಸಿದರು. ಸಮಾಜದ ಹಿರಿಯರಾದ ಬಿ. ಎಸ್‌. ಹುರಿಗೇರಿ ಮಠ ಅವರನ್ನು ಶ್ರೀಗಳು ಗೌರವಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.

ಮುಖ್ಯ ಅತಿಥಿ ಡಾ| ಶಶಿಕಲಾ ಗುರುಪುರ ಇವರು ಮಾತನಾಡಿ, ಬಸವೇಶ್ವರರು ಸಮಾನತೆ, ಸ್ತಿÅà ಸ್ವಾತಂತ್ರÂ, ಕಾಯಕ ದಾಸೋಹದಂತಹ ಮಹತ್ವದ ಕ್ರಾಂತಿಯನ್ನು 12 ನೇ ಶತಮಾನದಲ್ಲಿ ಮಾಡಿದ್ದು, ಅದ್ಭುತ ಕಾರ್ಯವಾಗಿದೆ. ಜಗತ್ತಿನ ಪ್ರಥಮ ಮಹಾ ಮಾನವತಾವಾದಿ ಮಹತ್ಮಾ ಬಸವೇಶ್ವರರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸುವ ಅಗತ್ಯತೆಯಿದೆ ಎಂದು ನುಡಿದರು.

ಬಾಲ್ಕಿಯ ಚನ್ನಬಸವ ಪಟ್ಟದ ದೇವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರು ಬಸವೇಶ್ವರರ ವಾರೀಸುದಾರರಾಗಿದ್ದೇವೆ. ನಮ್ಮ ವಚನ ಸಂಗ್ರಹವನ್ನು ಪರಭಾಷಾ ಬಾಂಧವರಿಗೆ ಮುಟ್ಟಿಸಿ,  ನಮ್ಮ ನಡೆ-ನುಡಿಗಳಲ್ಲಿ ಬದಲಾವಣೆಗಳನ್ನು ತಂದರೆ ಕಲ್ಯಾಣ ರಾಜ್ಯ ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಶಾಂತಿ ಕಾಪಾಡಲು ಬಸವ ತತ್ವಗಳಿಂದ ಸಾಧ್ಯವಿದೆ. ಆದ್ದರಿಂದ ಯುವ ಪೀಳಿಗೆಗೆ ಬಸವ ವಚನಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಾವು ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಪ್ರಸಾದ ವಿತರಣೆಯ ಪ್ರಾಯೋಜಕತ್ವ ವಹಿಸಿದ್ದ ಶರಣ ಡಿ. ದಂಪತಿ, ಬಿ. ಎನ್‌. ಪಾಟೀಲ್‌ ಇವರನ್ನು ಶ್ರೀಗಳು ಗೌರವಿಸಿದರು. ವಿಶ್ವಸ್ಥ ಮಂಡಳಿಯ ಶಿವಾನಂದ ಅಮರಖೇಡ, ಎನ್‌. ಜಿ. ಮ್ಹಾತ್ರೆ, ಮನೋಹರ ಎಂ. ಕೋರಿ, ವಿದ್ಯಾಖಾಗೆ, ಅಧ್ಯಕ್ಷ ಬಿ. ಜಿ. ಬಿರಾದಾರ, ಕೋಶಾಧಿಕಾರಿ ರವಿ ಹಿರೇಮಠ, ಕಾರ್ಯದರ್ಶಿ ಎನ್‌. ಬಿ. ನಾವಳಸಂಗ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಲಿತಾ ಅಂಗಡಿ ಕಾರ್ಯಕ್ರಮ ನಿರ್ವಹಿಸಿದರು. ಆರ್‌. ಭೀ. ಗೌಡರ ಅವರು ವಂದಿಸಿದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.