ಕ್ರಿಕೆಟಿಗ ಬದರೀನಾಥ್ ವಿದಾಯ ಸೂಚನೆ
Team Udayavani, May 11, 2018, 6:30 AM IST
ಚೆನ್ನೈ: ಸುದೀರ್ಘ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲು ತಮಿಳುನಾಡು ಕ್ರಿಕೆಟಿಗ ಎಸ್. ಬದರೀನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬದರೀನಾಥ್‌ಗೆ ಪ್ರಸ್ತುತ ಸಾಲಿನ ಐಪಿಎಲ್‌ನಲ್ಲಿ ಯಾವ ತಂಡವನ್ನೂ ಪ್ರತಿನಿಧಿಸುವ ಅವಕಾಶ ಸಿಗಲಿಲ್ಲ. ಇದರಿಂದಾಗಿ ಅವರು ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
37ರ ಹರೆಯದ ಸುಬ್ರಹ್ಮಣ್ಯಂ ಬದರೀನಾಥ್ ಭಾರತದ ಪರ 2 ಟೆಸ್ಟ್ ಪಂದ್ಯ ಆಡಿದ್ದಾರೆ. ಒಂದು ಅರ್ಧ ಶತಕ ಗಳಿಸಿದ್ದಾರೆ. ಉಳಿದಂತೆ 7 ಏಕದಿನ ಕ್ರಿಕೆಟ್‌ನಲ್ಲಿ ಆಡಿರುವ ಅವರು ಒಟ್ಟಾರೆ 79 ರನ್ ಗಳಿಸಿದ್ದಾರೆ. ಒಂದು ಟಿ20 ಪಂದ್ಯವನ್ನೂ ಆಡಿದ್ದಾರೆ. ಐಪಿಎಲ್‌ನಲ್ಲಿ ಪ್ರಮುಖ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ ಬೆಂಗಳೂರು ತಂಡಗಳನ್ನು ಪ್ರತಿನಿಧಿಸಿದ್ದಾರೆ.
ತಮಿಳುನಾಡು ರಣಜಿ ತಂಡದ ಸ್ಟಾರ್ ಆಟಗಾರನಾಗಿರುವ ಬದರೀನಾಥ್ ಒಟ್ಟು 145 ಪಂದ್ಯ ಆಡಿದ್ದಾರೆ. 32 ಶತಕ, 45 ಅರ್ಧ ಶತಕ ಸೇರಿದಂತೆ ಒಟ್ಟಾರೆ 10,245 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.