ಶಾಸಕ ರಾಜೇಶ್ ರೋಡ್ ಶೋ
Team Udayavani, May 11, 2018, 3:11 PM IST
ಜಗಳೂರು: ಬರಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊತ್ತಿರುವ ತಾಲೂಕಿಗೆ ಮುಕ್ತಿ ದೊರಕಿಸಲು ಶಾಶ್ವತ ಯೋಜನೆಗಳ ಜಾರಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಎಚ್.ಪಿ. ರಾಜೇಶ್ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ರಸ್ತೆ, ಚರಂಡಿಯಂತಹ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ. ಮುಂದಿನ ಬಾರಿಗೆ ಕ್ಷೇತ್ರದಲ್ಲಿ ಶಾಶ್ವತ ಯೋಜನೆಗಳ ಜಾರಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ನಿರುದ್ಯೋಗ ಹೆಚ್ಚಾಗಿರುವ ಜಗಳೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆಯಾಗಬೇಕಿದೆ. ಅದಕ್ಕೆ ಪೂರಕ ವಾತಾವರಣವನ್ನು ಕಲ್ಪಿಸಲಾಗುವುದು ಎಂದರು.
ಇದಕ್ಕಿಂತ ಮುಖ್ಯವಾಗಿ ತಾಲೂಕಿನಲ್ಲಿ ನೀರಾವರಿ ಆಗದೇ ಹೋದರೆ ಭವಿಷ್ಯವಿಲ್ಲ. ಹೀಗಾಗಿ ಪ್ರಗತಿ ಹಂತದಲ್ಲಿರುವ ಭದ್ರಾ ಮೇಲ್ದಂಡೆ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸುವ ಶಪಥ ಮಾಡಿದ್ದೇನೆ. 52 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದರು.
ಪ್ರತಿಪಕ್ಷದವರು ಮೂಡಿಸುತ್ತಿರುವ ಯಾವುದೇ ಗೊಂದಲಕ್ಕೆ ಜನತೆ ಕಿವಿಗೊಡಬಾರದು. ಕಾಂಗ್ರೆಸ್‌ಗೆ ಮತ ನೀಡುವ
ಮೂಲಕ ತಾಲೂಕಿನ ಅಭಿವೃದ್ಧಿಗೆ ಬೆಂಬಲಿಸಬೇಕೆಂದುಅವರು ಮತದಾರರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಮುಖಂಡರಾದ ಬಸಾಪುರ ರವಿಚಂದ್ರ, ಎಲ್.ಬಿ. ಭೈರೇಶ್, ಗಿರೀಶ್ ಒಡೆಯರ್, ತಾಪಂ ಉಪಾಧ್ಯಕ್ಷ ಮುದೇಗೌಡ್ರ ಬಸವರಾಜಪ್ಪ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಲ್ಲೇಶರಾಜ್ ಪಟೇಲ್, ತಿಮ್ಮರಾಯಪ್ಪ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.