ಸಿಟಿ ಸೆಂಟರ್ ಮಾಲ್‌ನಲ್ಲಿಸ್ವೀಪ್‌ನಿಂದ ಮತ ಜಾಗೃತಿ
Team Udayavani, May 12, 2018, 11:03 AM IST
ಕಲಬುರಗಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮತದಾನ ಪ್ರಮಾಣ ಹೆಚ್ಚಳಕ್ಕೆ ಅಂತಿಮ ಪ್ರಯತ್ನವಾಗಿ ಸ್ವೀಪ್ ಸಮಿತಿಯಿಂದ ನಗರದ ಸೂಪರ್ ಮಾರ್ಕೇಟ್ ಪ್ರದೇಶದ ಸಿಟಿ ಸೆಂಟರ್ ಮಾಲ್‌ನಲ್ಲಿ ಮತದಾನ ಜಾಗೃತಿಗಾಗಿ ಹಾಸ್ಯ ಸಂಜೆ ಆಯೋಜಿಸಲಾಗಿತ್ತು.
ಜಿಲ್ಲೆಯ ಚುನಾವಣೆ ಐಕಾನ್ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ, ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ, ಶಿವರಾಜ ಅಂಡಗಿ, ನವಲಿಂಗ ಹಾಸ್ಯ ಚಟಾಕಿ ಹಾರಿಸುವ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು. ಕಲಾವಿದ ಸೂರಜ್ ಜೋಶಿ ಮತದಾನ ಜಾಗೃತಿಯ ಸ್ವೀಪ್ ಗೀತೆ ಹಾಡಿದರು.
ಸಿಟಿ ಸೆಂಟರ್ ಮಾಲ್‌ನ ನೌಕರರು ಮತ್ತು ನೂರಾರು ಸಂಖ್ಯೆಯ ಗ್ರಾಹಕರು ಹಾಸ್ಯ ಸಂಜೆಯ ಸ್ವೀಪ್ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ಮೈಸೂರು ಗಿರೀಶ, ಕ್ರೀಡಾ ಮತ್ತು ಯುವಸೇವಾ ಇಲಾಖೆಯ ಸಹಾಯಕ ನಿರ್ದೇಶಕ ನಾಡಿಗೇರ, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ| ನಾಗರತ್ನ ದೇಶಮಾನೆ, ಸಹಾಯಕ ಕೃಷಿ ನಿರ್ದೇಶಕ ಅನೀಲ ರಾಠೊಡ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ, ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.