ಇಂದು 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Team Udayavani, May 12, 2018, 2:51 PM IST
ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಶನಿವಾರ ಚುನಾವಣೆ ನಡೆಯಲಿದ್ದು, 43 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ
ಶುಕ್ರವಾರ ಮತಗಟ್ಟೆಗಳಿಗೆ ತೆರಳಿದರು.
ಜಿಲ್ಲೆಯಲ್ಲಿ ಒಟ್ಟು 43 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು, ಹನೂರು ಕ್ಷೇತ್ರದಲ್ಲಿ 15, ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ 7, ಚಾಮ ರಾಜನಗರ ಕ್ಷೇತ್ರದಲ್ಲಿ 14 ಹಾಗೂ ಗುಂಡ್ಲುಪೇಟೆ ಕ್ಷೇತ್ರದಲ್ಲಿ 7 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ನಾಲ್ಕೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಎಸ್ಪಿ 3 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜೆಡಿಎಸ್ 1 ಕ್ಷೇತ್ರದಲ್ಲಿ, ಇತರ ರಾಜಕೀಯ ಪಕ್ಷಗಳ 15, ಪಕ್ಷೇತರರು 16 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.
ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಒಟ್ಟು 976 ಮತಗಟ್ಟೆಗಳನ್ನು ಸ್ಥಾಪಿಸಿದೆ. ಹನೂರು ಕ್ಷೇತ್ರದಲ್ಲಿ 247, ಕೊಳ್ಳೇಗಾಲ ಕ್ಷೇತ್ರದಲ್ಲಿ 243, ಚಾಮರಾಜನಗರ ಕ್ಷೇತ್ರದಲ್ಲಿ 236 ಹಾಗೂ
ಗುಂಡ್ಲುಪೇಟೆ ಕ್ಷೇತ್ರದಲ್ಲಿ 250 ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾನ ಶನಿವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಒಟ್ಟು 10 ಮತಗಟ್ಟೆಗಳ ಪೈಕಿ ನಗರ ಪ್ರದೇಶಗಳಲ್ಲಿ 6 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 4 ಮತಗಟ್ಟೆಗಳಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮತ ಗಟ್ಟೆಗಳನ್ನು ಪಿಂಕ್ ಪೋಲಿಂಗ್ ಸ್ಟೇಷನ್ ಎಂದು ಗುರುತಿಸಿ, ಅಂತಹ ಮತಗಟ್ಟೆಗಳಿಗೆ ಮಹಿಳಾ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಅಲ್ಲದೇ, ಗಿರಿಜನರು ವಾಸಿಸುವ ಪ್ರದೇಶಗಳನ್ನು ಗುರುತಿಸಿ ಒಟ್ಟು ನಾಲ್ಕು ಮತಗಟ್ಟೆಗಳನ್ನು ಸಾಂಪ್ರದಾಯಿಕ ಮತಗಟ್ಟೆ ಗಳೆಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ಗಿರಿಜನರು ತಮ್ಮ ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ ಬಂದು ಮತ ಚಲಾಯಿ ಸಲಿದ್ದಾರೆ. ಹನೂರು ಕ್ಷೇತ್ರದ ಕೋಣನಕೆರೆ, ಕೊಳ್ಳೇಗಾಲ ಪುರಾಣಿಪೋಡು, ಚಾ.ನಗರದ ಕೆ.ಗುಡಿ ಹಾಗೂ ಗುಂಡ್ಲುಪೇಟೆಯ ಮದ್ದೂರು ಗ್ರಾಮಗಳಲ್ಲಿ ಇಂಥ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ, 7 ಮಾದರಿ ಮತಗಟೆಗಳನ್ನೂ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾಗಿದೆ.
ಚುನಾವಣಾ ಕಾರ್ಯಕ್ಕೆ 1268 ಬ್ಯಾಲೆಟ್ ಯೂನಿಟ್‌ಗಳನ್ನು 1162 ಕಂಟ್ರೋಲ್ ಯೂನಿಟ್‌ಗಳನ್ನು, 1212 ವಿವಿ ಪ್ಯಾಟ್ ಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. ಜಿಲ್ಲೆಯ 976 ಮತಗಟ್ಟೆಗಳಿಗೆ 1173 ಪಿಆರ್‌ಒ, 1173 ಎಪಿಆರೋ, 3515 ಪಿಒ ಗಳೂ ಸೇರಿ ಒಟ್ಟು 5861 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಜಾತ್ರೆ ಸಂತೆ ನಿಷೇಧ: ಶನಿವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಲಲಿತ ವಾಗಿ ನಡೆಯಲು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರದೇಶಗಳಲ್ಲಿನ ಸಂತೆ ಮತ್ತು ಎಲ್ಲಾ
ತರಹದ ಜಾತ್ರೆಗಳನ್ನು ನಿಷೇಧಿಸಲಾಗಿದೆ.
ಸರ್ಕಾರಿ ಪಾಲಿಟೆಕ್ನಿಕ್‌ಕಾಲೇಜಿನಲ್ಲಿ ಮಸ್ಟರಿಂಗ್
ಚಾಮರಾಜನಗರ: ನಗರದ ಸರ್ಕಾರಿ ಪಾಲಿ ಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಚಾಮರಾಜ ನಗರ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ನಡೆಯಿತು. ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾ ಗಿರುವ ಸಿಬ್ಬಂದಿ ಮತದಾನದ ಪರಿಕರಗ ಳೊಡನೆ ಮತಗಟ್ಟೆಗಳಿಗೆ ತೆರಳಿದರು.
ಬೆಳಗ್ಗೆಯಿಂದಲೇ ಮತಗಟ್ಟೆ ಅಧಿಕಾರಿ ಸಿಬ್ಬಂದಿ ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ತಮಗೆ ನಿಯೋಜಿಸಲಾಗಿರುವ ಸ್ಥಳಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ತಮಗೆ ನೀಡಲಾದ ಮತಯಂತ್ರ, ವಿವಿ ಪ್ಯಾಟ್, ಶಾಯಿ ಇತ್ಯಾದಿ ಪರಿಕರಗಳನ್ನು ಜೋಡಿಸಿಕೊಳ್ಳುವಲ್ಲಿ ನಿರತರಾಗಿದ್ದರು. ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇದೇ ಮೊದಲ ಬಾರಿಗೆ ಮಸ್ಟರಿಂಗ್ ಕೇಂದ್ರದಲ್ಲೇ ಮತ ಗಟ್ಟೆ ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಮತಗಟ್ಟೆಗಳಿಗೆ ತೆರಳು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಮತಗಟ್ಟೆ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು.
ಮತದಾರ ಸಂಖ್ಯೆ ಜಿಲ್ಲೆಯಲ್ಲಿ 8,30,887 ಮತದಾರರಿದ್ದು, 4,14,366 ಪುರುಷ, 4,16,460 ಮಹಿಳೆಯರು ಹಾಗೂ 61 ದ್ವಿಲಿಂಗಿಗಳಿದ್ದಾರೆ. ಹನೂರಲ್ಲಿ 2,07, 603 ಕೊಳ್ಳೇಗಾಲ ಕ್ಷೇತ್ರದಲ್ಲಿ 2,11,522 ಮತದಾರರು, ಚಾ.ನಗರ ಕ್ಷೇತ್ರದಲ್ಲಿ 2,06,146 ಮತದಾರರು, ಗುಂಡ್ಲುಪೇ ಟೆಯಲ್ಲಿ 2,05,616 ಮತದಾರರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.