ಕರಾವಳಿ ಜಿಲ್ಲೆಗಳಲ್ಲಿ “ಪ್ರಜಾಪ್ರಭುತ್ವದ ಹಬ್ಬ ‘ಯಶಸ್ವಿ


Team Udayavani, May 13, 2018, 9:25 AM IST

karavali.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬಿರುಸಿನ ಹಾಗೂ ಶಾಂತಿಯುತ ಮತದಾನವಾಗಿದ್ದು, ಒಟ್ಟು ಎಂಟು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 77.63ರಷ್ಟು ಮತದಾನ ದಾಖಲಾಗಿದೆ. 

2013ಕ್ಕಿಂತ ಈ ಬಾರಿ ಶೇ. 3.25ರಷ್ಟು ಅಧಿಕ ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 8 ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳ ಬಹುತೇಕ ಬೂತ್‌ಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭಗೊಂಡಾಗಿನಿಂದಲೇ ಮತ ದಾರರು ಬಹಳ ಉತ್ಸುಕತೆಯಿಂದ ಸರದಿಯಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲ ಮತಗಟ್ಟೆಗಳಲ್ಲಿಯೂ ಕಂಡು ಬಂದಿತ್ತು. ಕೆಲವು ಮತಗಟ್ಟೆಗಳಲ್ಲಿ ಮುಂಜಾನೆ 6.45ರ ವೇಳೆಗೇ ಮತದಾರರು ತಮ್ಮ ಹಕ್ಕು ಚಲಾಯಿಸುವುದಕ್ಕೆ ಬಂದು ಕಾದು ಕುಳಿತದ್ದು ವಿಶೇಷ. 

ಈ ಬಾರಿ ವಿ.ವಿ. ಪ್ಯಾಟ್‌ ವ್ಯವಸ್ಥೆ ಅಳವಡಿಸಿದ್ದ ಕಾರಣಕ್ಕೆ ಮತದಾನ ಪ್ರಕ್ರಿಯೆ ಕೊಂಚ ತಡವಾಗಿತ್ತು. ಜಿಲ್ಲೆಯ ಬಹುತೇಕ ಎಲ್ಲ ಮತ ಗಟ್ಟೆಗಳಲ್ಲಿ ಮಧ್ಯಾಹ್ನದ ವೇಳೆಗೆ ಶೇ.50ಕ್ಕಿಂತ ಅಧಿಕ ಮತದಾರರು ಮತ ಚಲಾಯಿಸಿದ್ದು ಮತ್ತೂಂದು ವಿಶೇಷ. ಮಧ್ಯಾಹ್ನದ ಬಳಿಕ ಮತದಾನ ಮಂದ ಗತಿಯಲ್ಲೇ ಸಾಗಿತ್ತು. 

ಮತಯಂತ್ರ ಸಂಬಂಧ 24 ಕಂಟ್ರೋಲ್‌ ಯೂನಿಟ್‌, 21 ಬ್ಯಾಲೆಟ್‌ ಯೂನಿಟ್‌ ಹಾಗೂ 42 ವಿವಿ ಪ್ಯಾಟ್‌ಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತತ್‌ಕ್ಷಣ ತಂತ್ರಜ್ಞ ರನ್ನು ಕರೆಸಿ ಅವುಗಳನ್ನು ಬದಲಾಯಿಸಿ ಮತದಾನ ಮುಂದುವರಿಕೆ ಅವಕಾಶ ಮಾಡಿಕೊಡಲಾಯಿತು.

ಶಾಂತಿಯುತ ಮತದಾನ
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆ ತನಕ ನಡೆದಿದ್ದು, ಜಿಲ್ಲೆಯ ಯಾವುದೇ ಮತಗಟ್ಟೆಯಲ್ಲಿಯೂ ಅಹಿತಕರ ಘಟನೆ ಆಗಿರುವ ಬಗ್ಗೆ ವರದಿಯಾಗಿಲ್ಲ. ಶಾಂತಿಯುತ ಮತದಾನ ನಡೆಸುವಲ್ಲಿ ಒಂದು ಕಡೆ ಮತದಾರರು ಪೂರ್ಣ ಸಹಕಾರ ನೀಡಿದ್ದರೆ, ಇನ್ನೊಂದೆಡೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕೂಡ ಪರಿಣಾಮಕಾರಿಯಾಗಿ ಬಂದೋಬಸ್ತ್ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ನಿಷೇಧಾಜ್ಞೆ ಅಂತ್ಯ
ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ಗುರುವಾರ (ಮೇ 10) ಸಂಜೆ 6 ಗಂಟೆಯಿಂದಲೇ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಜಿಲ್ಲಾದ್ಯಂತ ಸಿಆರ್‌ಪಿಸಿ ಸೆಕ್ಷನ್‌ 144 ಅನ್ವಯ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಶನಿವಾರ ಸಂಜೆ 6 ಗಂಟೆ ವೇಳೆಗೆ ಮುಕ್ತಾಯವಾಗಿದೆ. ಮದ್ಯ ಮಾರಾಟ ನಿಷೇಧವು ಮಧ್ಯ ರಾತ್ರಿ 12 ಗಂಟೆ ವೇಳೆಗೆ ಕೊನೆಗೊಂಡಿದೆ.

ಮತದಾರರಿಗೆ ವರದಾನವಾದ ಹವಾಮಾನ
ಮೂರ್ನಾಲ್ಕು ದಿನಗಳ ಹಿಂದೆ ಜಿಲ್ಲೆಯಲ್ಲಿ ಸುಡು ಬಿಸಿಲಿನ ತಾಪವಿದ್ದು, ಜನರು ಮನೆಯಿಂದ ಹೊರಗೆ ಕಾಲಿಡಲು ಭಯ ಪಡುವ ಪರಿಸ್ಥಿತಿ ಇತ್ತು. ಆದರೆ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಬಂದಿದೆ. ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಶನಿವಾರ ಮಧ್ಯಾಹ್ನದವರೆಗೆ ತಂಪು ವಾತಾವರಣವಿತ್ತು. ಇದರಿಂದ ಮತದಾರರಿಗೂ ಸೆಕೆ ಯಿಂದ ಅಷ್ಟೊಂದು ಕಿರಿಕಿರಿಯಾಗಿರಲಿಲ್ಲ. ಜತೆಗೆ ಮತದಾನದ ದಿನವಾದ ಶನಿವಾರ ಮಧ್ಯಾಹ್ನದ ಅನಂತರ ಜಿಲ್ಲೆಯಲ್ಲಿ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರೂ ಸಂಜೆ 6 ಗಂಟೆವರೆಗೆ ಮಳೆ ಬಾರದ್ದು ಮತದಾರರಿಗೆ ವರದಾನವಾಗಿದ್ದು, ಎಲ್ಲಿಯೂ ಮತದಾನಕ್ಕೆ ಮಳೆ ಅಡ್ಡಿಪಡಿಸಿಲ್ಲ. ಮತದಾನ ಪ್ರಮಾಣ ಹೆಚ್ಚಳಕ್ಕೆ ಇದೂ ಒಂದು ಕಾರಣವಾಗಿದೆ.

ಶೇ. 3.25 ಹೆಚ್ಚಳ
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಒಟ್ಟು ಮತದಾನದ ಶೇಕಡಾವಾರು ಪ್ರಮಾಣದಲ್ಲಿ 3.25 ಹೆಚ್ಚಳವಾಗಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಶೇ. 74.48 ಮತದಾನವಾಗಿತ್ತು.

ಮೇ 15: ಅಭ್ಯರ್ಥಿಗಳ ಭವಿಷ್ಯ 
ಮತದಾರರು ನೀಡಿದ ತೀರ್ಪು ಮತ ಯಂತ್ರಗಳಲ್ಲಿ ಭದ್ರವಾಗಿದ್ದು, ಕಣದಲ್ಲಿದ್ದ 58 ಮಂದಿಯ ಭವಿಷ್ಯ ಮೇ 15ರಂದು ಪ್ರಕಟವಾಗಲಿದೆ. 

ಬಸ್‌ ವಿಳಂಬ
ಜಿಲ್ಲೆಯ ಮತದಾರರಾಗಿದ್ದು, ದೂರದ ಮುಂಬಯಿ ಮತ್ತು ಬೆಂಗಳೂರಿನಲ್ಲಿದ್ದವರು ಬಸ್‌, ರೈಲುಗಳಲ್ಲಿ ಆಗಮಿಸಿದ್ದರು. ಬಸ್‌ಗಳಲ್ಲಿ ಪ್ರಯಾಣಿಕರ ಒತ್ತಡ ಜಾಸ್ತಿ ಇದ್ದ ಕಾರಣ ಶನಿವಾರ ಬೆಳಗ್ಗೆ ಬಸ್‌ಗಳು 
ವಿಳಂಬವಾಗಿ ಮಂಗಳೂರಿಗೆ ತಲುಪಿದವು. 

ಜನರಿಲ್ಲ: ಮಾಲ್‌, ಅಂಗಡಿ ಬಂದ್‌
ಮಂಗಳೂರಿನಲ್ಲಿ ವಾಹನ ಮತ್ತು ಜನ ಸಂಚಾರ ವಿರಳವಾಗಿತ್ತು. ಜನ ಸಂಚಾರ ಕಡಿಮೆಯಾಗಿದ್ದರಿಂದ‌ ಪ್ರಮುಖ ಮೂರು ಮಾಲ್‌ಗ‌ಳು ಸಹಿತ ಹಲವು ಅಂಗಡಿಗಳನ್ನು ಮುಚ್ಚಲಾಗಿತ್ತು. ಸಂಜೆ ವೇಳೆಗೆ ಕೆಲವು ಅಂಗಡಿಗಳು ತೆರೆದಿದ್ದವು. 

ನಗರದಲ್ಲಿ  ಕನಿಷ್ಠ-ಗ್ರಾಮೀಣದಲ್ಲಿ  ಗರಿಷ್ಠ‌
ಬೆಳ್ತಂಗಡಿ ಕ್ಷೇತ್ರದಲ್ಲಿ ಒಟ್ಟು ಶೇ.81.40, ಮೂಡಬಿದಿರೆಯಲ್ಲಿ ಶೇ.75.41, ಮಂಗಳೂರು ದಕ್ಷಿಣದಲ್ಲಿ ಶೇ.67.47, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ.74.55, ಮಂಗಳೂರು ಕ್ಷೇತ್ರದಲ್ಲಿ ಶೇ.75.73, ಬಂಟ್ವಾಳ ಕ್ಷೇತ್ರದಲ್ಲಿ ಶೇ.81.89, ಪುತ್ತೂರು ಕ್ಷೇತ್ರದಲ್ಲಿ ಶೇ.81.70 ಹಾಗೂ ಸುಳ್ಯ ಕ್ಷೇತ್ರದಲ್ಲಿ ಶೇ.83.00 ಮತದಾನ ದಾಖಲಾಗಿದೆ. ಮತದಾನ ಪ್ರಮಾಣ ನೋಡಿದರೆ, ಅತೀ ಹೆಚ್ಚು ಮತದಾನ ಸುಳ್ಯ ಕ್ಷೇತ್ರದಲ್ಲಿ ಹಾಗೂ ಅತೀ ಕಡಿಮೆ ಮತದಾನ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಗಿದೆ. 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.