ಮೊದಲ ಬಾರಿಗೆ ಮತದಾನ ಮಾಡಿದವರ ಸಂಭ್ರಮ


Team Udayavani, May 13, 2018, 1:04 PM IST

m4-modala.jpg

ಮೈಸೂರು: ರಾಜಕೀಯ ಪಕ್ಷಗಳ ಜತೆಗೆ ಹಲವು ರಾಜಕಾರಣಿಗಳ ಏಳು-ಬೀಳು ನಿರ್ಧರಿಸಲಿರುವ ವಿಧಾನಸಭಾ ಚುನಾವಣೆಗಾಗಿ ಶನಿವಾರ ನಡೆದ ಮತದಾನ ಪ್ರಕ್ರಿಯೆ ಹಿರಿಯರು ಹಾಗೂ ಕಿರಿಯರ ಸಮಾಗಮಕ್ಕೆ ವೇದಿಕೆಯಾಯಿತು. ನಗರದ ಹಲವು ಕ್ಷೇತ್ರಗಳಲ್ಲಿ ಹಿರಿಯರ ಜತೆಗೆ ಇದೇ ಮೊದಲ ಬಾರಿಗೆ ಮತದಾನ ಮಾಡಿದ ಯುವ ಮತದಾರರು ಸಂಭ್ರಮಿಸಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ 11 ಕ್ಷೇತ್ರಗಳಿಂದ ಒಟ್ಟು 25 ಸಾವಿರ ಯುವ ಮತದಾರರು ಮೊದಲ ಬಾರಿಗೆ ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದರು. ಹೀಗಾಗಿ ಪ್ರಥಮ ಬಾರಿಗೆ ವೋಟ್‌ ಹಾಕುವ ಅವಕಾಶ ಪಡೆದ ನಗರ ವ್ಯಾಪ್ತಿಯ ನೂರಾರು ಯುವ ಮತದಾರರು ತಮ್ಮ ಕ್ಷೇತ್ರದ ಮಟ್ಟಗಟ್ಟೆಗೆ ತೆರಳಿ ವೋಟ್‌ ಹಾಕಿ ಖುಷಿಪಟ್ಟರೆ, ಇವರೊಂದಿಗೆ ಅನೇಕ ಹಿರಿಯ ಮತದಾರರು ಮತದಾನ ಮಾಡಿ, ತಮ್ಮ ಹಕ್ಕು ಚಲಾಯಿಸಿದರು.

ಹೀಗಾಗಿ ಮತದಾನ ಪ್ರಕ್ರಿಯೆ ಹಿರಿಯ ಹಾಗೂ ಕಿರಿಯ ಮತದಾರರ ಸಮಾಗಮಕ್ಕೆ ಕಾರಣವಾಯಿತು. ಕೆಲವು ಯುವ ಮತದಾರರು ತಂದೆ-ತಾಯಿ, ಅಜ್ಜ-ಅಜ್ಜಿಯ ಜತೆಯಲ್ಲಿ ಮತಗಟ್ಟೆಗೆ ತೆರಳಿದರೆ, ಇನ್ನೂ ಕೆಲವರು ತಮ್ಮ ಸ್ನೇಹಿತರೊಂದಿಗೆ ಮತಗಟ್ಟೆಗೆ ಬಂದು ವೋಟ್‌ ಮಾಡಿದರು.

ಫ‌ಸ್ಟ್‌ ವೋಟರ್: ಚುನಾವಣೆಯ ಅಂಗವಾಗಿ ರೂಪಿಸಲಾಗಿದ್ದ ಸ್ವೀಪ್‌ ಸಮಿತಿ ರಾಯಬಾರಿ ನಿವೇದಿತಗೌಡ ಈ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಇನ್ನು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಒಡೆಯರ್‌ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಗಮನ ಸೆಳೆದರು. ಯದುವೀರ್‌ 2013ರ ಚುನಾವಣೆಯಲ್ಲಿ ಅಮೆರಿಕಾದಲ್ಲಿ ವಾಸವಿದ್ದ ಕಾರಣ ಈ ಬಾರಿಯ ವೋಟ್‌ ಮಾಡಿದರು.

ಅಲ್ಲದೆ ಕಾಂಗ್ರೆಸ್‌ ಮುಖಂಡ ಹಾಗೂ ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌ ಪುತ್ರಿ ವಿ.ರಚನಾ ಜೆ.ಪಿ.ನಗರದ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಇವರಲ್ಲದೆ ಕೆ.ಆರ್‌.ಕ್ಷೇತ್ರದ ನಿವಾಸಿ ಹಾಗೂ ಅಕ್ಕ-ತಂಗಿಯಾದ ಶ್ರೀರûಾ ಮತ್ತು ಶ್ರೀನಿಧಿ ಅವರು ಪ್ರಥಮ ಬಾರಿಗೆ ಮತದಾನ ಮಾಡುವ ಮೂಲಕ ಖುಷಿಪಟ್ಟರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.