ದಿಢೀರ್ ಬಿರುಗಾಳಿ, ಮಳೆಗೆ 50 ಸಾವು
Team Udayavani, May 14, 2018, 8:20 AM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರವಿವಾರ ಸಂಜೆಯ ಬಳಿಕ ಏಕಾಏಕಿ ಬೀಸಿದ ಪ್ರಬಲ ಧೂಳು ಬಿರುಗಾಳಿಯಿಂದ ಜನ ಭೀತಿಗೊಳಗಾದರು. ಗಾಳಿ-ಮಳೆಗೆ ದಿಲ್ಲಿಯಲ್ಲಿ ಇಬ್ಬರು, ಸಿಡಿಲಿಗೆ ಪಶ್ಚಿಮ ಬಂಗಾಲದಲ್ಲಿ 12, ಉತ್ತರಪ್ರದೇಶದಲ್ಲಿ 18, ಆಂಧ್ರದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ.
ದಿಲ್ಲಿಯಲ್ಲಿ ಗಂಟೆಗೆ 109 ಕಿ.ಮೀ. ವೇಗದಲ್ಲಿ ಬೀಸಿದ ಗಾಳಿಯ ರಭಸಕ್ಕೆ ಕೆಲವು ಸಮಯ ಜನಜೀವನವೇ ಅಸ್ತವ್ಯಸ್ತಗೊಂಡಿತು. 200ಕ್ಕೂ ಹೆಚ್ಚು ಮರಗಳು ಉರುಳಿವೆ. ವಿಮಾನ ಸಂಚಾರ ಮತ್ತು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 60ಕ್ಕೂ ಹೆಚ್ಚು ವಿಮಾನಗಳ ಸಂಚಾರಕ್ಕೆ ಸಮಸ್ಯೆಯಾಯಿತು. ಹರ್ಯಾಣ, ಪಂಜಾಬ್, ನೋಯ್ಡಾದ ಭಾಗಗಳಲ್ಲಿ ಭಾರೀ ಧೂಳು ಬಿರುಗಾಳಿ ಬೀಸಿದೆ. ಜತೆಗೆ ಧಾರಾಕಾರ ಮಳೆಯಾಗಿದೆ. ಗುಡುಗು, ಸಿಡಿಲು, ಮಳೆ ಪ್ರಕೋಪಕ್ಕೆ ಆಂಧ್ರಪ್ರದೇಶದಲ್ಲಿ 9 ಮಂದಿ ಅಸುನೀಗಿ, ಮೂವರು ಗಾಯಗೊಂಡಿದ್ದಾರೆ. ದಿಲ್ಲಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದಿಲ್ಲಿಯ ಅಲ್ಲಲ್ಲಿ ವಿದ್ಯುತ್ ಕಂಬಗಳೂ ಮುರಿದು ಬಿದ್ದಿವೆ. ರಭಸವಾಗ ಧೂಳು -ಗಾಳಿಯಿಂದಾಗಿ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿತು.
ಮುನ್ಸೂಚನೆ: ಇದೇ ವೇಳೆ ಬುಧವಾರದವರೆಗಿನ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಪ್ರಬಲವಾಗಿ ಧೂಳಿನ ಬಿರುಗಾಳಿ ಬೀಸಲಿದೆ ಎಂದು ಹೇಳಿದೆ. ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಗುಡುಗು ಸಿಡಿಲಿನ ಸಹಿತ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಪ್ರಮುಖ ಸ್ಥಳಗಳಲ್ಲಿ ಧೂಳಿನ ಬಿರುಗಾಳಿ ಬೀಸಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಸಾವಿನ ಸಂಖ್ಯೆ
12 : ಪಂ.ಬಂಗಾಲ
18 : ಉ. ಪ್ರದೇಶ
09 : ಆಂಧ್ರಪ್ರದೇಶ
02 : ದಿಲ್ಲಿ
ದಿಲ್ಲಿಯಲ್ಲಿ ಗಂಟೆಗೆ 109 ಕಿ.ಮೀ. ವೇಗದಲ್ಲಿ ಬೀಸಿದ ಗಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.