ನೀರಿನಲ್ಲಿ ಮುಳುಗಿ ಯುವಕ ಸಾವು

Team Udayavani, May 14, 2018, 11:54 AM IST

water-death.jpg

ಬೆಂಗಳೂರು: ಕೊಕ್ಕರೆ ಹಿಡಿಯಲು ಕೆರೆಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಮ್ಮನಪಾಳ್ಯದಲ್ಲಿ ಭಾನುವಾರ ನಡೆದಿದೆ. ಬಂಡೇಪಾಳ್ಯದ ಮಂಗಮ್ಮನಪಾಳ್ಯ ನಿವಾಸಿ ಸಲ್ಮಾನ್‌ (19) ಮೃತ ಯುವಕ. ಯುವಕನ ಮೃತದೇಹ ಕೆರೆಯಲ್ಲಿ ಮುಳುಗಿದ್ದು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.

ಮಂಗಮ್ಮನಪಾಳ್ಯದಲ್ಲಿ ಮೆಕಾನಿಕ್‌ ಕೆಲಸ ಮಾಡುವ ಸಲ್ಮಾನ್‌ ಭಾನುವಾರ ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಮಂಗಮ್ಮನಪಾಳ್ಯದ ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಕೊಕ್ಕರೆಗಳಿದ್ದುದನ್ನು ಗಮನಿಸಿದ ಎಲ್ಲರೂ ಅವುಗಳತ್ತ ಕಲ್ಲೆಸೆದಿದ್ದಾರೆ. ಈ ವೇಳೆ ಕೊಕ್ಕರೆಯೊಂದು ಕಲ್ಲು ತಾಗಿ ಗಾಯಗೊಂಡಿತ್ತು.

ಅದನ್ನು ಹಿಡಿಯಲು ಸಲ್ಮಾನ್‌ ಕೆರೆಯೊಳಗೆ ಇಳಿದಿದ್ದಾನೆ. ಈಜು ಬಾರದಿದ್ದರೂ ಕೊಕ್ಕರೆ ಆಸೆಗೆ ಕೆರೆಯ ಆಳಕ್ಕೆ ಹೋಗಿ ನೀರಿನೊಳಗೆ ಸಿಲುಕಿದ್ದು, ಮೇಲೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ಪತ್ತೆಯಾಗಿಲ್ಲ. ನಂತರ ಎನ್‌ಡಿಆರ್‌ಎಫ್‌ ಪಡೆ ಸಿಬ್ಬಂದಿ ಸ್ಥಳಕ್ಕೆ ಬಂದು ಸಂಜೆ 7ರ ವರೆಗೆ ಕಾರ್ಯಾಚರಣೆ ನಡೆಸಿದರೂ ಸಲ್ಮಾನ್‌ ಪತ್ತೆಯಾಗಲಿಲ್ಲ.

ಸಲ್ಮಾನ್‌ ಮೃತದೇಹ ಕೆರೆಯ ಆಳದಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಲ್ಮಾನ್‌ ಕೆರೆಯಲ್ಲಿ ಮುಳುಗುತ್ತಿದ್ದಂತೆ ಆತನ ಸ್ನೇಹಿತರು ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬಂಡೆಪಾಳ್ಯ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.