ನನೆಗುದಿಗೆ ಬಿದ್ದಿದೆ ವಾಮಂಜೂರಿನ ಡ್ರೈವಿಂಗ್‌ ಟೆಸ್ಟ್‌ ಟ್ರ್ಯಾಕ್‌


Team Udayavani, May 15, 2018, 7:55 AM IST

Test-Track-15-5.jpg

ಮಹಾನಗರ : ಒಂದೂವರೆ ವರ್ಷಗಳ ಹಿಂದೆ ಆರಂಭಗೊಂಡಿದ್ದ ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯು ಅನುದಾನದ ಕೊರತೆಯಿಂದಾಗಿ ಇದೀಗ ನನೆಗುದಿಗೆ ಬಿದ್ದಿದೆ.
ವಿವಿಧ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ವಾಹನ ಚಾಲನಾ ಪರೀಕ್ಷಾ ಕೇಂದ್ರದಕ್ಕೆ ಹೈಟೆಕ್‌ ಸ್ಪರ್ಶ ನೀಡುವ ಉದ್ದೇಶದಿಂದ ಸರಕಾರ ಅನುದಾನ ಬಿಡುಗಡೆ ಮಾಡಿತ್ತು. ಆದರೆ ವಿವಿಧ ಕಾರಣಗಳಿಂದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ವಾಮಂಜೂರಿನಲ್ಲಿ ಸುಮಾರು 2 ಎಕ್ರೆಯಷ್ಟು ಜಾಗದಲ್ಲಿರುವ ವಾಹನ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕಟ್ಟಡ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳು ಇಲ್ಲ ಎನ್ನುವುದು ಪರೀಕ್ಷೆಗೆ ಬರುವ ಜನರ ಅಳಲಾಗಿತ್ತು. ಈ ನಿಟ್ಟಿನಲ್ಲಿ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ 76 ಲಕ್ಷ ರೂ. ಬಿಡುಗಡೆಗೊಳಿಸಲಾಗಿತ್ತು. ಅನುದಾನ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದರೂ ಆ ಪ್ರದೇಶದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಅನುದಾನ ಕೊಟ್ಟಿಲ್ಲ
ಬಿಡುಗಡೆಗೊಂಡ ಅನುದಾನದಲ್ಲಿ ಆ ಪ್ರದೇಶದಲ್ಲಿ ಕಟ್ಟಡ, ಬರುವವರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ, ಶೌಚಾಲಯ ಹಾಗೂ ಕೇಂದ್ರದ ನಾಲ್ಕೂ ಬದಿಯಲ್ಲಿ  ಕಾಂಪೌಂಡ್‌ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಒಂದೂವರೆ ವರ್ಷದಲ್ಲಿ ಕಟ್ಟಡ, ಶೌಚಾಲಯ ಕಾಮಗಾರಿ ನಡೆದಿದೆ. ಆದರೆ ಬಹುಮುಖ್ಯವಾಗಿ ಬೇಕಾಗಿದ್ದ ವಾಹನ ಚಾಲನಾ ಪರೀಕ್ಷಾ ಕೇಂದ್ರದ ಇಂಟರ್‌ ಲಾಕ್‌ ಅಳವಡಿಕೆ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ. ಟೆಂಡರ್‌ ವಹಿಸಿಕೊಂಡ ನಿರ್ಮಿತಿ ಕೇಂದ್ರ ಅನುದಾನ ಬಿಡುಗಡೆ ವಿಳಂಬವಾದ ಹಿನ್ನೆಲೆಯಲ್ಲಿ ಇಂಟರ್‌ ಲಾಕ್‌ ಕಾಮಗಾರಿ ನಡೆದಿರಲಿಲ್ಲ. ಇನ್ನೂ ಕೆಲವು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳುತ್ತದೆ ಎಂದು ಹೇಳುತ್ತಿದೆ.


ಟ್ರ್ಯಾಕ್‌ ತುಂಬಾ ಜಲ್ಲಿ-ಕಲ್ಲು-ಮಣ್ಣು

ಇಲ್ಲಿ ವಾಹನ ಚಾಲನಾ ಪರವಾನಿಗೆ ಪಡೆಯಲು ಸವಾರರು ಸಂಕಷ್ಟಪಡುವ ಸ್ಥಿತಿಯಿದೆ. ಜಲ್ಲಿ-ಕಲ್ಲು-ಮಣ್ಣು ಆವೃತವಾಗಿರುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ವಾಹನ ಬಿಡುವವರು ಪರೀಕ್ಷಾ ಭಯ ದಿಂದ ಹೆಚ್ಚಿನ ಬಾರಿ ಎಡವುತ್ತಾರೆ. ರಾಜ್ಯದ ಇತರ ಭಾಗದಲ್ಲಿ ಸುಸಜ್ಜಿತ ಟ್ರ್ಯಾಕ್‌ ಇರುವುದರಿಂದ ಮಂಗಳೂರಿನ ಟ್ರ್ಯಾಕ್‌ ಅನ್ನು ಮೇಲ್ದರ್ಜೆಗೇರಿಸಬೇಕು ಎಂಬ ಆಗ್ರಹವೂ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಲಾಗಿತ್ತು.

ದಿನಕ್ಕೆ 100 ಮಂದಿಗೆ ಪರೀಕ್ಷೆ
ವಾಮಂಜೂರಿನಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನದವರೆಗೆ ದ್ವಿಚಕ್ರ ಚಾಲನಾ ಪರೀಕ್ಷೆಗೆ, ಸುಮಾರು 50 ಮಂದಿ, ಫೋರ್‌ ವೀಲ್ಹರ್‌ 60 ಮಂದಿಯಂತೆ ದಿನಕ್ಕೆ 100ಕ್ಕೂ ಅಧಿಕ ಮಂದಿ ಚಾಲನಾ ಪರೀಕ್ಷೆಗೆ ಹಾಜಾರಾಗುತ್ತಾರೆ. ಮಂಗಳೂರಿನ ಇನ್‌ಸ್ಪೆಕ್ಟರ್‌ ಸೇರಿದಂತೆ 2-3 ಅಧಿಕಾರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೂ ಇಲ್ಲಿ ಮೂಲಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಪ್ರಸ್ತಾವನೆ ನೀಡಲಾಗಿತ್ತು.

ಇಂಟರ್‌ ಲಾಕ್‌ ಕಾಮಗಾರಿ ಆರಂಭ
ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 76 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆಯೋಜಿಸಲಾಗಿತ್ತು. ಕಳೆದ ಜನವರಿಯಿಂದ ಕಾಮಗಾರಿಗಳು ಆರಂಭಗೊಂಡಿದ್ದವು. ಆದರೆ ಪ್ರಸ್ತುತ ಅನುದಾನ ಬಿಡುಗಡೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಇಂಟರ್‌ಲಾಕ್‌ ಕಾಮಗಾರಿ ಆರಂಭಗೊಂಡಿಲ್ಲ. ಚುನವಾಣೆ ಮುಗಿದ ಕೂಡಲೇ ಆ ಕಾಮಗಾರಿಯೂ ಪೂರ್ಣಗೊಳ್ಳಲಿದೆ.
–  ಸಿ.ಡಿ. ನಾಯಕ್‌, ಉಪ ಸಾರಿಗೆ ಆಯುಕ್ತರು, ಮಂಗಳೂರು

— ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.